ನವಲಗುಂದದಲ್ಲಿ ಜ. 8 ರಿಂದ ಧಾರವಾಡ ಸಂಸದರ ಕ್ರೀಡಾ ಮಹೋತ್ಸವ: ಹೊನಲು ಬೆಳಕಿನ ಪಂದ್ಯಾವಳಿಗೆ ಕ್ರೀಡಾಂಗಣ ಸಜ್ಜು
ನವಲಗುಂದ: ಪ್ರಧಾನಿ ನರೇಂದ್ರ ಮೋದಿ ಅವರ ಆಶಯದಂತೆ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರ ನೇತೃತ್ವದಲ್ಲಿ ಆಯೋಜಿಸಲಾಗಿರುವ ‘ಧಾರವಾಡ ಸಂಸದ ಟ್ರೋಫಿ 2025-26’ ಕ್ರೀಡಾ ಮಹೋತ್ಸವಕ್ಕೆ ನವಲಗುಂದ ಪಟ್ಟಣದ ಮಾಡೆಲ್ ಹೈಸ್ಕೂಲ್ ಮೈದಾನ ಸಜ್ಜಾಗಿದೆ. ಜನವರಿ 8 ಮತ್ತು 9 ರಂದು ಎರಡು ದಿನಗಳ ಕಾಲ ನಡೆಯಲಿರುವ ಈ ಕ್ರೀಡಾ ಹಬ್ಬಕ್ಕೆ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಚಾಲನೆ ನೀಡಲಿದ್ದಾರೆ. ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಭೆ ಹಾಗೂ…

