ಮೆಕ್ಕೆಜೋಳ ಬೆಳೆಗಾರರಿಗೆ ಬೆಲೆ ವ್ಯತ್ಯಾಸದ ಮೊತ್ತ ಪಾವತಿ: ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ
ಧಾರವಾಡ: ಪ್ರಸಕ್ತ ಸಾಲಿನ ಮುಂಗಾರು ಹಂಗಾಮಿನ ಮೆಕ್ಕೆಜೋಳ ಬೆಳೆಗಾರರ ಹಿತರಕ್ಷಣೆಗಾಗಿ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸದ ಮೊತ್ತವನ್ನು ಪಾವತಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಧಾರವಾಡ ಜಿಲ್ಲೆಗೆ ಗರಿಷ್ಠ 1.85 ಲಕ್ಷ ಕ್ವಿಂಟಾಲ್ ಮೆಕ್ಕೆಜೋಳದ ಪ್ರಮಾಣವನ್ನು ನಿಗದಿಪಡಿಸಲಾಗಿದ್ದು, ನಿಯಂತ್ರಿತ ಮಾರುಕಟ್ಟೆಗಳಲ್ಲಿನ ವಹಿವಾಟಿನ ಆಧಾರದ ಮೇಲೆ ರೈತರಿಗೆ ಆರ್ಥಿಕ ನೆರವು ದೊರೆಯಲಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಮೆಕ್ಕೆಜೋಳದ ಸರಾಸರಿ ಧಾರಣೆ ಪ್ರತಿ ಕ್ವಿಂಟಾಲ್‌ಗೆ 1,900 ರೂಪಾಯಿ ಇರುವುದನ್ನು ಗಮನಿಸಿರುವ ಸರ್ಕಾರ,…

