ಕರ್ನಾಟಕ ಬಜೆಟ್ 2026-27: ಧಾರವಾಡ ಜಿಲ್ಲೆಯ ಪಾಲಿಗೆ ಸಿಕ್ಕಿದ್ದೇನು? ಇಲ್ಲಿದೆ ವಿವರ
ಧಾರವಾಡ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ 2026-27ನೇ ಸಾಲಿನ ಕರ್ನಾಟಕ ಬಜೆಟ್‌ನಲ್ಲಿ ಶೈಕ್ಷಣಿಕ ಕಾಶಿ ಧಾರವಾಡ ಜಿಲ್ಲೆಗೆ ಗರಿಷ್ಠ ಆದ್ಯತೆ ನೀಡಲಾಗಿದೆ. ಜಿಲ್ಲೆಯ ಜನತೆಯ ಬಹುದಿನಗಳ ಬೇಡಿಕೆಗಳಿಗೆ ಸ್ಪಂದಿಸಿರುವ ಸರ್ಕಾರ, ಶಿಕ್ಷಣ, ಉದ್ಯೋಗ ಮತ್ತು ತಂತ್ರಜ್ಞಾನ ಆಧಾರಿತ ಅಭಿವೃದ್ಧಿಗೆ ಭರಪೂರ ಅನುದಾನ ಘೋಷಿಸಿದೆ. ನ್ಯಾಯಾಂಗ ಮತ್ತು ಶಿಕ್ಷಣಕ್ಕೆ ಹೈಟೆಕ್ ಸ್ಪರ್ಶ: ಧಾರವಾಡ ಜಿಲ್ಲೆಯ ನ್ಯಾಯಾಂಗ ವ್ಯವಸ್ಥೆಯನ್ನು ಆಧುನೀಕರಿಸಲು 110 ಕೋಟಿ ರೂಪಾಯಿ ವೆಚ್ಚದಲ್ಲಿ ಪ್ರಾಯೋಗಿಕವಾಗಿ ‘ಇ-ಕೋರ್ಟ್’ ಸ್ಥಾಪನೆಗೆ ನಿರ್ಧರಿಸಲಾಗಿದೆ. ಇನ್ನು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ 110 ಕೋಟಿ…

