ನವಲಗುಂದದಲ್ಲಿ ಅಯ್ಯಪ್ಪ ಸ್ವಾಮಿಯ ಮಹಾ ಪೂಜೆ ಹಾಗೂ ಜ್ಯೋತಿ ಮೆರವಣಿಗೆ ವೈಭವ
ನವಲಗುಂದ: ಪಟ್ಟಣದ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಶನಿವಾರ ಅಯ್ಯಪ್ಪ ಸ್ವಾಮಿಯ ಮಹಾ ಪೂಜೆ ಹಾಗೂ ಭವ್ಯ ಜ್ಯೋತಿ ಮೆರವಣಿಗೆ ಕಾರ್ಯಕ್ರಮವು ಅತ್ಯಂತ ಭಕ್ತಿಭಾವ ಹಾಗೂ ವಿಜೃಂಭಣೆಯಿಂದ ಜರುಗಿತು. ದಿನದ ಆರಂಭದಲ್ಲಿ ದೇವಸ್ಥಾನದಲ್ಲಿ ಸ್ವಾಮಿಗೆ ವಿಶೇಷ ಅಭಿಷೇಕ, ನಯನಮನೋಹರ ಅಲಂಕಾರ ಪೂಜೆ ಹಾಗೂ ಮಹಾ ಮಂಗಳಾರತಿ ನೆರವೇರಿಸಲಾಯಿತು. ಮಧ್ಯಾಹ್ನ ಭಕ್ತಾದಿಗಳಿಗಾಗಿ ಅನ್ನ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು. ಸಂಜೆ ವೇಳೆಗೆ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾದ ಜ್ಯೋತಿ ಮೆರವಣಿಗೆಗೆ ಚಾಲನೆ ನೀಡಲಾಯಿತು. ಮಾಲಾಧಾರಿಗಳು ಜ್ಯೋತಿಯನ್ನು ಹೊತ್ತು ಸಾಗಿದರೆ, ಮಹಿಳೆಯರು ಮಂಗಲ ಆರತಿಗಳನ್ನು…

