ಧಾರವಾಡ ಶಾಂತಿಯುತ ಧರಣಿಗೆ ಮುಂದಾದ ಉದ್ಯೋಗಾಕಾಂಕ್ಷಿಗಳ ಬಂಧನ: ಎಐಯುಟಿಯುಸಿ ತೀವ್ರ ಖಂಡನೆ

ಧಾರವಾಡ,: ತಮ್ಮ ನ್ಯಾಯಯುತ ಹಕ್ಕೊತ್ತಾಯಗಳಿಗಾಗಿ ಧಾರವಾಡದಲ್ಲಿ ಉದ್ಯೋಗಾಕಾಂಕ್ಷಿಗಳ ಹೋರಾಟ ಸಮಿತಿ ಸಂಘಟಿಸಿದ್ದ ಶಾಂತಿಯುತ ಧರಣಿಯನ್ನು ಪೊಲೀಸರ ಬಲದಿಂದ ಹತ್ತಿಕ್ಕಿದ ರಾಜ್ಯ ಸರ್ಕಾರದ ಕ್ರಮವನ್ನು ಎಐಯುಟಿಯುಸಿ (AIUTUC) ರಾಜ್ಯ ಸಮಿತಿಯು ತೀವ್ರವಾಗಿ ಖಂಡಿಸಿದೆ. ಬಂಧಿಸಲಾದ ಎಲ್ಲ ಹೋರಾಟಗಾರರನ್ನು ಬೇಷರತ್ ಬಿಡುಗಡೆ ಮಾಡಬೇಕು ಎಂದು ಎಐಯುಟಿಯುಸಿ ಜಿಲ್ಲಾ ಸಮಿತಿ ಒತ್ತಾಯಿಸಿದೆ. ​ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಎಐಯುಟಿಯುಸಿ ಜಿಲ್ಲಾಧ್ಯಕ್ಷ ಗಂಗಾಧರ ಬಡಿಗೇರ ಅವರು, ಉದ್ಯೋಗಾಂಕ್ಷಿಗಳ ಬೇಡಿಕೆಗಳು ನ್ಯಾಯಯುತವಾಗಿದ್ದು, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮ ಇಲಾಖೆಗಳಲ್ಲಿ ಖಾಲಿ ಇರುವ…

Read More

“ಪರೀಕ್ಷೆಗಳು ಅಂದು-ಇಂದು” ಕುರಿತು ಉಪನ್ಯಾಸ ಮತ್ತು ಸಂವಾದ: ಡಿ. 11 ರಂದು ಕಾರ್ಯಕ್ರಮ

​ಧಾರವಾಡ, ಡಿ 10,: ಕರ್ನಾಟಕ ವಿದ್ಯಾವರ್ಧಕ ಸಂಘದ ಶಿಕ್ಷಣ ಮಂಟಪವು, ಧಾರವಾಡದ ಛತ್ರಪತಿ ಶಿವಾಜಿ ಮಹಾರಾಜ ಕಲಾ, ವಾಣಿಜ್ಯ ಹಾಗೂ ವಿಜ್ಞಾನ ಪದವಿಪೂರ್ವ ಮಹಾವಿದ್ಯಾಲಯದ ಸಹಯೋಗದಲ್ಲಿ ವಿದ್ಯಾರ್ಥಿಗಳಿಗಾಗಿ “ಪರೀಕ್ಷೆಗಳು ಅಂದು-ಇಂದು” ಕುರಿತು ಉಪನ್ಯಾಸ ಮತ್ತು ಸಂವಾದ ಕಾರ್ಯಕ್ರಮವನ್ನು ಆಯೋಜಿಸಿದೆ. ​ಈ ಕಾರ್ಯಕ್ರಮವು ಡಿಸೆಬಂರ್ 11, ರಂದು ಬೆಳಿಗ್ಗೆ 11:15 ಗಂಟೆಗೆ ಶ್ರೀ ಶಿವಾಜಿ ಮಹಾರಾಜ ಪದವಿಪೂರ್ವ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆಯಲಿದೆ. ​ಧಾರವಾಡ ಮರಾಠಾ ವಿದ್ಯಾಪ್ರಸಾರಕ ಮಂಡಳದ ಅಧ್ಯಕ್ಷ ಮನೋಹರ ಎನ್. ಮೋರೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸುವರು. ಧಾರವಾಡ…

Read More

ವಿಶ್ವ ಮಾನವ ಹಕ್ಕುಗಳ ದಿನಾಚರಣೆ: “ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆ” ಡಿ ಸಿ ದಿವ್ಯಪ್ರಭು

ಧಾರವಾಡ, ಡಿ. 10: ಪ್ರತಿಯೊಬ್ಬ ವ್ಯಕ್ತಿಯ ಘನತೆಯ ಬದುಕಿನ ಹಕ್ಕನ್ನು ಗೌರವಿಸಿ, ಸರ್ವರನ್ನೂ ಸಮಾನವಾಗಿ ಕಾಣುವ ಸಮಾಜ ನಿರ್ಮಾಣ ಮಾಡಬೇಕಿರುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಮಾನವ ಹಕ್ಕುಗಳ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ ಎಂದು ಅವರು ತಿಳಿಸಿದರು. ​ಜಿಲ್ಲಾಧಿಕಾರಿ ಕಚೇರಿಯ ನೂತನ ಸಭಾ ಭವನದಲ್ಲಿ ಬುಧವಾರದಂದು (ಡಿ.10) ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಪೊಲೀಸ್ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ವಿಶ್ವ ಮಾನವ ಹಕ್ಕುಗಳ ದಿನಾಚರಣೆಯ…

Read More

ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ: ಎಸ್ಸಿ/ಎಸ್ಟಿ ಪದವೀಧರರಿಗೆ ಅವಕಾಶ

ಧಾರವಾಡ, ಡಿ. 10: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು 2025-26 ನೇ ಸಾಲಿಗೆ ಎಸ್.ಸಿ.ಎಸ್.ಪಿ (SCSP) ಮತ್ತು ಟಿ.ಎಸ್.ಪಿ (TSP) ಯೋಜನೆಯಡಿ ಪತ್ರಿಕೋದ್ಯಮ ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ​ಧಾರವಾಡದ ಹಿರಿಯ ಸಹಾಯಕ ನಿರ್ದೇಶಕರ ಕಚೇರಿಯ ವತಿಯಿಂದ ಪರಿಶಿಷ್ಟ ಜಾತಿಯ ಒರ್ವ (01) ಮತ್ತು ಪರಿಶಿಷ್ಟ ಪಂಗಡದ ಒರ್ವ (01) ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕಚೇರಿಯಲ್ಲಿ 12 ತಿಂಗಳ ಅವಧಿಯ ತರಬೇತಿ ನೀಡಲಾಗುತ್ತದೆ. ​ಅರ್ಹತೆ ಮತ್ತು…

Read More

ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಡಿ. 13 ರಿಂದ ಫಲಪುಷ್ಪ ಪ್ರದರ್ಶನ ಮತ್ತು ಸರಸ ಮೇಳ ಆಯೋಜನೆ

ಧಾರವಾಡ, ಡಿ. 10: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ವಿವಿಧ ಇಲಾಖೆಗಳ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ಫಲಪುಷ್ಪ ಪ್ರದರ್ಶನ ಮತ್ತು ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಮತ್ತು ಉದ್ಯಮ ಇಲಾಖೆಯ ಸರಸ ಮೇಳವನ್ನು ಡಿಸೆಂಬರ್ 13 ರಿಂದ ಡಿಸೆಂಬರ್ 15, 2025 ರವರೆಗೆ ಹುಬ್ಬಳ್ಳಿಯ ಇಂದಿರಾ ಗಾಜಿನ ಮನೆಯಲ್ಲಿ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಭುವನೇಶ ಪಾಟೀಲ ಅವರು ತಿಳಿಸಿದರು. ​ಬುಧವಾರದಂದು (ಡಿ.10) ಜಿಲ್ಲಾ ಪಂಚಾಯತ್ ಕಾನ್ಫರೆನ್ಸ್ ಹಾಲ್‍ನಲ್ಲಿ ಪತ್ರಿಕಾಗೋಷ್ಠಿ…

Read More

ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

ಧಾರವಾಡ, ಡಿ. 09: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2025-26 ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮಹತ್ವದ ಯೋಜನೆಗಳ ಪ್ರಯೋಜನ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ​ಧನಶ್ರೀ, ಚೇತನಾ, ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳ ಅಡಿಯಲ್ಲಿ ಸಹಾಯಧನ ಅಥವಾ ಸಾಲ ಸೌಲಭ್ಯ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಬಹುದು. ​ಅರ್ಜಿದಾರರು ಸೇವಾ ಸಿಂಧೂ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹತ್ತಿರದ ಬಾಪೂಜಿ…

Read More

ಜಿಲ್ಲಾ ಮಟ್ಟದ ‘ಕಲಾ ಪ್ರತಿಭೋತ್ಸವ’ಕ್ಕೆ ಸಕಲ ಸಿದ್ಧತೆ: ಡಿ. 11 ಮತ್ತು 12 ರಂದು ಕಾರ್ಯಕ್ರಮ

ಧಾರವಾಡ, ಡಿ. 09: ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಡಿಸೆಂಬರ್ 11 ಮತ್ತು 12, 2025 ರಂದು ಜಿಲ್ಲಾ ಮಟ್ಟದ ‘ಕಲಾ ಪ್ರತಿಭೋತ್ಸವ’ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಧಾರವಾಡದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ್ ಸಾಂಸ್ಕೃತಿಕ ಭವನದಲ್ಲಿ ಬೆಳಿಗ್ಗೆ 10 ಗಂಟೆಗೆ ಈ ಪ್ರತಿಭೋತ್ಸವ ಜರುಗಲಿದ್ದು, ಇದರಲ್ಲಿ ವಿವಿಧ ಕಲಾಪ್ರಕಾರಗಳ ಬಾಲ ಪ್ರತಿಭೆ, ಕಿಶೋರ ಪ್ರತಿಭೆ ಮತ್ತು ಯುವ ಪ್ರತಿಭೆಗಳು ಭಾಗವಹಿಸಲಿದ್ದಾರೆ. ​ಉದ್ಘಾಟನಾ ಸಮಾರಂಭಕ್ಕೆ ಗಣ್ಯರ ಆಗಮನ ​ಡಿ. 11 ರಂದು ಬೆಳಿಗ್ಗೆ 10 ಗಂಟೆಗೆ ಕಲಾ…

Read More

ಹಾಸ್ಟೆಲ್ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಕಡ್ಡಾಯ: ಜಿಲ್ಲಾ ಪಂಚಾಯತ್ ಸಿಇಓ ಭುವನೇಶ ಪಾಟೀಲ ಸೂಚನೆ

ಧಾರವಾಡ, ಡಿ.09: ವಸತಿನಿಲಯಗಳ ವಿದ್ಯಾರ್ಥಿಗಳ ಆರೋಗ್ಯ ಸುಧಾರಣೆ, ಮೂಲಭೂತ ಸೌಕರ್ಯಗಳು ಹಾಗೂ ಶೈಕ್ಷಣಿಕ ಫಲಿತಾಂಶ ಸುಧಾರಣೆ ಕುರಿತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಓ) ಭುವನೇಶ ಪಾಟೀಲ ಅವರು ಮಂಗಳವಾರ (ಡಿ.09) ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ​ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸಮಾಜ ಕಲ್ಯಾಣ, ಬಿಸಿಎಂ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪ್ರತಿ ತಿಂಗಳು ನಿಗದಿತ ಅವಧಿಗೆ ವಸತಿನಿಲಯದ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ಮತ್ತು ಆಪ್ತ…

Read More

ಹಿಂಗಾರು ಬೆಳೆ ನಿರ್ವಹಣೆ: ರೈತರಿಗೆ ತಜ್ಞರ ತಂಡದಿಂದ ಕ್ಷೇತ್ರ ಭೇಟಿ ಮತ್ತು ಸಲಹೆ

ಧಾರವಾಡ, ಡಿ.09: ಹಿಂಗಾರು ಹಂಗಾಮು 2025-26ರ ಪ್ರಮುಖ ಬೆಳೆಗಳಾದ ಕಡಲೆ (Chickpea) ಮತ್ತು ಜೋಳದಲ್ಲಿ (Jowar) ಕಂಡುಬರುತ್ತಿರುವ ಕೀಟ ಮತ್ತು ರೋಗಗಳ ನಿರ್ವಹಣೆ ಕುರಿತು ಸೂಕ್ತ ಸಲಹೆ ನೀಡಲು ಜಿಲ್ಲಾ ಪೀಡೆ ಸರ್ವೆಕ್ಷಣಾ ತಂಡವು ಸೋಮವಾರ (ಡಿ.08) ರಂದು ಧಾರವಾಡ ತಾಲ್ಲೂಕಿನ ಹಲವು ಗ್ರಾಮಗಳಿಗೆ ಭೇಟಿ ನೀಡಿತು. ​ಜಿಲ್ಲಾ ಪೀಡೆ ಸರ್ವೆಕ್ಷಣಾ ತಂಡದಲ್ಲಿ ಸಸ್ಯರೋಗ ತಜ್ಞರಾದ ಡಾ. ಪಿ. ನಾಗರಾಜು, ಧಾರವಾಡ ಕೃ.ವಿ.ವಿ. ವಿಸ್ತರಣಾ ನಿರ್ದೇಶನಾಲಯದ ಸಹಾಯಕ ಪ್ರಾಧ್ಯಾಪಕ ಡಾ. ಸುಭಾಷ ಕಂದಕೂರ, ಉಪ ಕೃಷಿ ನಿರ್ದೇಶಕ…

Read More

ಹುಬ್ಬಳ್ಳಿ-ಧಾರವಾಡ ನಡುವೆ ಇ-ಆರ್-ಟಿ ಸೇವೆ: ಸಚಿವ ಸಂತೋ‍ಷ್ ಲಾಡ್ ನೇತೃತ್ವದಲ್ಲಿ ಪ್ರಾತ್ಯಕ್ಷಿಕೆ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರಗಳ ನಡುವೆ ಆರಂಭಿಸಲು ಉದ್ದೇಶಿಸಿರುವ ಎಲೆಕ್ಟ್ರಿಕ್ ರಾಪಿಡ್ ಟ್ರಾನ್ಸಿಟ್ (E-RT) ಯೋಜನೆಯ ಕುರಿತು ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋ‍ಷ್ ಎಸ್. ಲಾಡ್ ಅವರು ಇತ್ತೀಚೆಗೆ ಬೆಳಗಾವಿಯ ಸುವರ್ಣ ಸೌಧದಲ್ಲಿ ಹಿರಿಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ಯೋಜನೆಯ ಪ್ರಾತ್ಯಕ್ಷಿಕೆ (Demonstration) ವೀಕ್ಷಿಸಿದರು. ​ಸಾರಿಗೆ ಸಚಿವರಾದ ರಾಮಲಿಂಗಾ ರೆಡ್ಡಿ ಮತ್ತು ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್ ಅವರ ಉಪಸ್ಥಿತಿಯಲ್ಲಿ ಈ ಮಹತ್ವದ ಸಭೆ ನಡೆಯಿತು. ಈ ಸಂದರ್ಭದಲ್ಲಿ ಮೂರೂ ಸಚಿವರು…

Read More