ರಾಜ್ಯಾದ್ಯಂತ ಶೀತಗಾಳಿ ತೀವ್ರ: ಧಾರವಾಡ ಜಿಲ್ಲಾಧಿಕಾರಿ ದಿವ್ಯಪ್ರಭು ಅವರಿಂದ ಕಟ್ಟುನಿಟ್ಟಿನ ಮಾರ್ಗಸೂಚಿ ಪ್ರಕಟ
ಧಾರವಾಡ: ರಾಜ್ಯಾದ್ಯಂತ ಚಳಿಯ ತೀವ್ರತೆ ಹೆಚ್ಚಾಗುತ್ತಿದ್ದು, ಶೀತಗಾಳಿ ಬೀಸುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರ ಸುರಕ್ಷತೆಗಾಗಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರವು ಅಗತ್ಯ ಮುನ್ನೆಚ್ಚರಿಕಾ ಮಾರ್ಗಸೂಚಿಗಳನ್ನು ಹೊರಡಿಸಿದೆ. ಈ ಮಾರ್ಗಸೂಚಿಗಳನ್ನು ಜಿಲ್ಲೆಯ ಸಾರ್ವಜನಿಕರು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೂಚನೆ ನೀಡಿದ್ದಾರೆ. ಆರೋಗ್ಯ ರಕ್ಷಣೆಗೆ ಆದ್ಯತೆ ನೀಡಲು ಸೂಚನೆ: ಶೀತಗಾಳಿಯಿಂದ ಉಂಟಾಗಬಹುದಾದ ಲಘಷ್ಣತೆ (ಹೈಪೋಥರ್ಮಿಯಾ), ಹೃದಯಾಘಾತ ಹಾಗೂ ಉಸಿರಾಟದ ಸಮಸ್ಯೆಗಳನ್ನು ತಡೆಗಟ್ಟಲು ಜಿಲ್ಲಾಡಳಿತವು ಕೆಲವು ಪ್ರಮುಖ ಮುನ್ನೆಚ್ಚರಿಕೆಗಳನ್ನು ನೀಡಿದೆ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ: ಜಿಲ್ಲಾಧಿಕಾರಿಗಳು ಜಿಲ್ಲೆಯ ಅಧಿಕಾರಿಗಳಿಗೆ…

