ಧಾರವಾಡ: ಭಾವೈಕ್ಯತೆಯ ಬೆಸುಗೆಯಾಗಿ ಮೂಡಿಬಂದ ‘ಕನ್ನಡ ಗಾನ ಕೌಸ್ತುಭ-2025’ ಸಂಗೀತ ಸಂಭ್ರಮ
ಧಾರವಾಡ: ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳ ಜೊತೆಗೆ ಸಂಗೀತ ಲೋಕಕ್ಕೆ ಅಪಾರ ಕೊಡುಗೆ ನೀಡುತ್ತಿರುವ ಧಾರವಾಡ ಕರೋಕೆ ತಂಡದ ಸೇವೆ ಅತ್ಯಂತ ಶ್ಲಾಘನೀಯವಾಗಿದೆ ಎಂದು ಬೇಲೂರು ಶಿವಾನಂದ ಮಠದ ಶ್ರೀ ಶ್ರೀ ಸಿದ್ದೇಶ್ವರ ಮಹಾಸ್ವಾಮಿಗಳು ಅಭಿಪ್ರಾಯಪಟ್ಟರು. ನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಕನ್ನಡ ರಾಜ್ಯೋತ್ಸವದ ಅಂಗವಾಗಿ ಧಾರವಾಡ ಕರೋಕೆ ತಂಡ ಹಮ್ಮಿಕೊಂಡಿದ್ದ ‘ಕನ್ನಡ ಗಾನ ಕೌಸ್ತುಭ-2025’ ರ ಏಳನೇ ಆವೃತ್ತಿಯ ಕನ್ನಡ ಗೀತೆಗಳ ಸಂಗೀತ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಆಶೀರ್ವಚನ ನೀಡಿದರು. ಪ್ರತಿಯೊಬ್ಬರೂ ಜೀವನದಲ್ಲಿ ಒಂದು…

