ಕೆಟಿಪಿಪಿ ಕಾಯ್ದೆ ಪಾಲನೆಯಿಂದ ಸರ್ಕಾರಿ ಖರೀದಿಯಲ್ಲಿ ಪಾರದರ್ಶಕತೆ ಸಾಧ್ಯ: ಸಿಇಓ ಭುವನೇಶ ಪಾಟೀಲ
ಧಾರವಾಡ, ಡಿ. 11: ಸರ್ಕಾರಿ ಇಲಾಖೆಗಳಲ್ಲಿ ನಡೆಯುವ ಕಾಮಗಾರಿಗಳು ಹಾಗೂ ಸಾಮಗ್ರಿಗಳ ಖರೀದಿ ಪ್ರಕ್ರಿಯೆಗಳಲ್ಲಿ ಪಾರದರ್ಶಕತೆ, ಸ್ಪರ್ಧಾತ್ಮಕತೆ ಮತ್ತು ದಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಅಧಿಕಾರಿಗಳು ಕೆಟಿಪಿಪಿ ಕಾಯ್ದೆಯ ಬಗ್ಗೆ ಪೂರ್ಣ ಜ್ಞಾನ ಹೊಂದಿರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ತಿಳಿಸಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರದಂದು (ಡಿ. 10) ಆಯೋಜಿಸಲಾಗಿದ್ದ ‘ಕರ್ನಾಟಕ ಸಾರ್ವಜನಿಕ ಸಂಗ್ರಹಣೆಗಳಲ್ಲಿ ಪಾರದರ್ಶಕತೆ ಕಾಯ್ದೆ-1999’ (KTPP Act) ಮತ್ತು ನಿಯಮಗಳು-2000 ರ ಕುರಿತಾದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ…

