ಮಹಿಳಾ ಅಭಿವೃದ್ಧಿ ನಿಗಮದ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ
ಧಾರವಾಡ, ಡಿ. 09: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು 2025-26 ನೇ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಮಹತ್ವದ ಯೋಜನೆಗಳ ಪ್ರಯೋಜನ ಪಡೆಯಲು ಅರ್ಹ ಮಹಿಳೆಯರಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಧನಶ್ರೀ, ಚೇತನಾ, ಉದ್ಯೋಗಿನಿ ಹಾಗೂ ಲಿಂಗತ್ವ ಅಲ್ಪಸಂಖ್ಯಾತರ ಪುನರ್ವಸತಿ ಮತ್ತು ಮಾಜಿ ದೇವದಾಸಿ ಪುನರ್ವಸತಿ ಯೋಜನೆಗಳ ಅಡಿಯಲ್ಲಿ ಸಹಾಯಧನ ಅಥವಾ ಸಾಲ ಸೌಲಭ್ಯ ಪಡೆಯಲು ಬಯಸುವವರು ಅರ್ಜಿ ಸಲ್ಲಿಸಬಹುದು. ಅರ್ಜಿದಾರರು ಸೇವಾ ಸಿಂಧೂ ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಹತ್ತಿರದ ಬಾಪೂಜಿ…

