ಡಾ. ಬಿ. ಆರ್ ಅಂಬೇಡ್ಕರ್‌ಗೆ ಪುಷ್ಪನಮನ: ಕರ್ನಾಟಕ ದಲಿತ ಸಂಘರ್ಷ ಸಮೀತಿ ವತಿಯಿಂದ 69ನೇ ಮಹಾಪರಿನಿರ್ವಾಣ ದಿನ ಆಚರಣೆ
ಧಾರವಾಡ: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರ 69ನೇ ಮಹಾಪರಿನಿರ್ವಾಣ ದಿನವನ್ನು ಕರ್ನಾಟಕ ದಲಿತ ಸಂಘರ್ಷ ಸಮಿತಿ (ರಿ) ಧಾರವಾಡ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಯಿತು. ನಗರದ ಕಲಾಭವನದ ಬಳಿ ಇರುವ ಡಾ. ಬಿ.ಆರ್. ಅಂಬೇಡ್ಕರ್ ಅವರ ಪುತ್ಥಳಿಗೆ ಸಂಘಟನೆಯ ಪದಾಧಿಕಾರಿಗಳು ಶ್ರದ್ಧಾ ಭಕ್ತಿಯಿಂದ ಪುಷ್ಪನಮನ ಸಲ್ಲಿಸಿ ಗೌರವ ಅರ್ಪಿಸಿದರು. ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಸಂಘಟನೆಯ ಜಿಲ್ಲಾ ಪ್ರಧಾನ ಸಂಚಾಲಕರಾದ ಮಂಜುನಾಥ ಶರೇವಾಡ ಅವರು, ಅಂಬೇಡ್ಕರ್ ಎಂದರೆ ಕೇವಲ ವ್ಯಕ್ತಿಯಲ್ಲ, ಅವರು ಒಂದು…

