ಮಕ್ಕಳ ಭವಿಷ್ಯವೇ ಭಾರತದ ಭವಿಷ್ಯ: ಧಾರವಾಡ ಜಿಲ್ಲೆಯಲ್ಲಿ 1.24 ಲಕ್ಷ ಫಲಾನುಭವಿಗಳಿಗೆ ಐಸಿಡಿಎಸ್ ಸೌಲಭ್ಯ
ಧಾರವಾಡ: ಮಕ್ಕಳಿಗೆ ಉತ್ತಮ ಭವಿಷ್ಯವೇ ಭಾರತದ ಭವಿಷ್ಯ ಎಂಬ ದೂರದೃಷ್ಟಿಯೊಂದಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಮಕ್ಕಳ ಕಲ್ಯಾಣ ಮತ್ತು ಅಭಿವೃದ್ಧಿಗಾಗಿ ಜಾರಿಯಲ್ಲಿರುವ ನೀತಿ ಹಾಗೂ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಶ್ರಮಿಸುತ್ತಿದೆ. ಈ ಶ್ರಮವು ದೇಶದ ಮುಂದಿನ ಸಾಮಾಜಿಕ ಮತ್ತು ಆರ್ಥಿಕ ಬೆಳವಣಿಗೆಗೆ ಮಾಡುತ್ತಿರುವ ಹೂಡಿಕೆಯಾಗಿದೆ ಎಂದು ಸಮಗ್ರ ಶಿಶು ಅಭಿವೃದ್ಧಿ ಯೋಜನೆ (ಐಸಿಡಿಎಸ್) ವಿಭಾಗವು ತಿಳಿಸಿದೆ. ಕರ್ನಾಟಕ ರಾಜ್ಯದಲ್ಲಿ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯನ್ನು ಪ್ರಾಯೋಗಿಕವಾಗಿ ಅಕ್ಟೋಬರ್ 2, 1975 ರಂದು ಮೈಸೂರು ಜಿಲ್ಲೆಯ ಟಿ….

