ಏಡ್ಸ್‌ಗೆ ಭಯ ಬೇಡ, ಜಾಗೃತಿ ಅಗತ್ಯ: ಏಡ್ಸ್ ಮುಕ್ತ ಜಿಲ್ಲೆ ಮಾಡಲು ಶ್ರಮಿಸಿ; ಜಿಲ್ಲಾಧಿಕಾರಿ ದಿವ್ಯ ಪ್ರಭು ಕರೆ
ಧಾರವಾಡ: ಏಡ್ಸ್ ರೋಗದ ಬಗ್ಗೆ ಯಾವುದೇ ಭಯ ಬೇಡ. ಬದಲಾಗಿ ಮುಂಜಾಗ್ರತೆ, ಜಾಗೃತಿ ಮತ್ತು ಅರಿವು ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಹೇಳಿದರು. ಧಾರವಾಡ ಜಿಲ್ಲೆಯಲ್ಲಿ ಏಡ್ಸ್ ರೋಗಿಗಳ ಪ್ರಮಾಣ ಮತ್ತು ಹರಡುವಿಕೆ ಇಳಿಮುಖವಾಗಿದ್ದು, ಈಗ ಜಿಲ್ಲೆಯಲ್ಲಿ ಏಡ್ಸ್ ಪಾಸಿಟಿವಿಟಿ ದರ ಶೇ. 0.38 ರಷ್ಟಿದೆ. ಇದನ್ನು ಶೂನ್ಯಕ್ಕೆ ಇಳಿಸಿ, ಧಾರವಾಡ ಜಿಲ್ಲೆಯನ್ನು ಏಡ್ಸ್ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಎಲ್ಲರೂ ಶ್ರಮಿಸಬೇಕು, ಅದಕ್ಕಾಗಿ ಅಗತ್ಯ ಕಾರ್ಯಕ್ರಮಗಳನ್ನು ಜಿಲ್ಲೆಯಾದ್ಯಂತ ಸಂಘಟಿಸೋಣ ಎಂದು ಅವರು ಕರೆ ನೀಡಿದರು….

