ಯುವನಿಧಿ ಪ್ಲಸ್ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿ ಆಯೋಜನೆ: ಜಿಲ್ಲಾಧಿಕಾರಿ ದಿವ್ಯ ಪ್ರಭು
7,920 ಫಲಾನುಭವಿಗಳಿಗೆ ಉದ್ಯೋಗ, ಸ್ವ-ಉದ್ಯೋಗಕ್ಕಾಗಿ ವೃತ್ತಿ ನೈಪುಣ್ಯತೆ ಹೆಚ್ಚಿಸುವ ತರಬೇತಿ ಧಾರವಾಡ: ನವೆಂಬರ್ 25: ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾಗಿರುವ ಯುವನಿಧಿ ಯೋಜನೆಯಡಿ ನೋಂದಾಯಿತ ನಿರುದ್ಯೋಗಿ ಯುವಕ, ಯುವತಿಯರಿಗೆ ‘ಯುವನಿಧಿ ಪ್ಲಸ್’ ಯೋಜನೆಯಡಿ ಉಚಿತ ಕೌಶಲ್ಯ ತರಬೇತಿಯನ್ನು ಆಯೋಜಿಸಲು ನಿರ್ಧರಿಸಲಾಗಿದ್ದು, ಜಿಲ್ಲೆಯಲ್ಲಿ ತಕ್ಷಣವೇ ಈ ತರಬೇತಿಗಳನ್ನು ಹಮ್ಮಿಕೊಳ್ಳಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದರು. ಅವರು ಸೋಮವಾರದಂದು(ನ.24) ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಯುವನಿಧಿ ಫಲಾನುಭವಿಗಳಿಗೆ ಕೌಶಲ್ಯ ತರಬೇತಿ ನೀಡುವ ಕುರಿತು…

