‘ಹಾಡಿರೇ ರಾಗಗಳ–ತೂಗಿರೇ ದೀಪಗಳ’: ತಳಸಮುದಾಯದ ಕಲಾವಿದರಿಗೆ ಪ್ರೋತ್ಸಾಹಿಸಲು ವಿಶೇಷ ಘಟಕ ಯೋಜನೆ
ಧಾರವಾಡ ನ.19: ಗ್ರಾಮೀಣ ಭಾಗದ ತಳಸಮುದಾಯದ ಪರಿಶಿಷ್ಟ ಜಾತಿಯ ಕಲಾವಿದರನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ಸರ್ಕಾರ ಜಾರಿಗೆ ತಂದಿರುವ ವಿಶೇಷ ಘಟಕ ಯೋಜನೆ ಅತ್ಯಂತ ಔಚಿತ್ಯಪೂರ್ಣವಾಗಿದೆ ಎಂದು ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಹೇಳಿದರು. ಅವರು ಧಾರವಾಡದ ಡಾ. ದ.ರಾ. ಬೇಂದ್ರೆ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ‘ಹಾಡಿರೇ ರಾಗಗಳ–ತೂಗಿರೇ ದೀಪಗಳ’ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಇಂತಹ ಯೋಜನೆಗಳಿಂದ ಗ್ರಾಮೀಣ ಹಾಗೂ ತಳ ಸಮುದಾಯದ ಜಾನಪದ ಕಲಾವಿದರಿಗೆ ಹೆಚ್ಚಿನ ವೇದಿಕೆಗಳು…

