ಐದು ವರ್ಷದೊಳಗಿನ 2.07 ಲಕ್ಷ ಮಕ್ಕಳಿಗೆ ಲಸಿಕೆ ಗುರಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್
ಧಾರವಾಡ, ಮೇ 19: ಜಿಲ್ಲೆಯಾದ್ಯಂತ ಬರುವ ಜೂನ್ 28ರಿಂದ ಜುಲೈ 1ರವರೆಗೆ ನಡೆಯಲಿರುವ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮವನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸಮಗ್ರ ಸಿದ್ಧತೆ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್ ಅವರು ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಮಟ್ಟದ ಅಂತರ್ ಇಲಾಖಾ ಸಮನ್ವಯ ಸಮಿತಿಯ ಕಾರ್ಯಪಡೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಶೂನ್ಯದಿಂದ ಐದು ವರ್ಷದೊಳಗಿನ ಯಾವುದೇ ಮಗು ಪೋಲಿಯೋ ಹನಿಯಿಂದ ವಂಚಿತವಾಗದಂತೆ ಆರೋಗ್ಯ ಇಲಾಖೆ ಅಧಿಕಾರಿಗಳು ಸಮರ್ಪಕ ಕಾರ್ಯಯೋಜನೆ ರೂಪಿಸಬೇಕು…

