ವಿಮಾನ ನಿಲ್ದಾಣಗಳಿಗೆ ಕನ್ನಡ ಮಹನೀಯರ ಹೆಸರಿಡಲು ನವೆಂಬರ್ 30 ರ ಗಡುವು: ಸಂಗೊಳ್ಳಿ ರಾಯಣ್ಣ ಸಮಿತಿಯಿಂದ ಬೃಹತ್ ಪ್ರತಿಭಟನೆಗೆ ಕರೆ
ಕುಂದಗೋಳ: ನವ್ಹಂಬರ 30 ರ ಒಳಗಾಗಿ ರಾಜ್ಯದ ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಿಗೆ ಕನ್ನಡದ ಮಹನೀಯರ ಹೆಸರುಗಳನ್ನು ನಾಮಕರಣ ಮಾಡಬೇಕೆಂದು ಒತ್ತಾಯಿಸಿ, ಸಂಗೊಳ್ಳಿ ರಾಯಣ್ಣ ಹಿತರಕ್ಷಣಾ ಸಮಿತಿಯಿಂದ ತಾಲ್ಲೂಕಿನ ಯರಗುಪ್ಪಿ ಗ್ರಾಮದಲ್ಲಿ ಪ್ರತಿಭಟನೆ ಕುರಿತು ಪೂರ್ವಭಾವಿ ಸಭೆ ನಡೆಸಲಾಯಿತು. ಮಾಜಿ ಸಚಿವ ದಿ.ಸಿ.ಎಸ್. ಶಿವಳ್ಳಿಯವರ ಸಮಾಧಿ ಪಕ್ಕದ ಜಮೀನಿನಲ್ಲಿ ನಡೆದ ಈ ಸಭೆಯಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಮನಸೂರುಮಠದ ಶ್ರೀಗಳಾದ ಬಸವರಾಜ ದೇವರು, ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರ ರಾಣಿ ಚೆನ್ನಮ್ಮ, ಹುಬ್ಬಳ್ಳಿಗೆ ಸಂಗೊಳ್ಳಿ ರಾಯಣ್ಣ, ವಿಜಯಪುರಕ್ಕೆ…

