ನೌಕರರ ಹಿತಾಸಕ್ತಿ ಕಾಪಾಡಲು ಜಿಲ್ಲಾಡಳಿತ ಸಿದ್ಧ; ಪರಿಣಾಮಕಾರಿ ಸೇವೆಗೆ ಕೌಶಲ್ಯ ನವೀಕರಣ ಅಗತ್ಯ: ಜಿಲ್ಲಾಧಿಕಾರಿ ದಿವ್ಯ ಪ್ರಭು

🏛️ ನೌಕರರ ಹಿತಾಸಕ್ತಿ ಕಾಪಾಡಲು ಜಿಲ್ಲಾಡಳಿತ ಸಿದ್ಧ; ಪರಿಣಾಮಕಾರಿ ಸೇವೆಗೆ ಕೌಶಲ್ಯ ನವೀಕರಣ ಅಗತ್ಯ: ಜಿಲ್ಲಾಧಿಕಾರಿ ದಿವ್ಯ ಪ್ರಭು ಧಾರವಾಡ, ನ.12: ಸರ್ಕಾರಿ ಸೇವೆಗಳನ್ನು ಪರಿಣಾಮಕಾರಿಯಾಗಿ ಸಾರ್ವಜನಿಕರಿಗೆ ತಲುಪಿಸುವಲ್ಲಿ ಸರ್ಕಾರಿ ನೌಕರರ ಪಾತ್ರ ಪ್ರಮುಖವಾಗಿದ್ದು, ಅವರ ಹಿತಾಸಕ್ತಿ ಕಾಪಾಡಲು ಹಾಗೂ ಎಲ್ಲ ಬೇಡಿಕೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸಲು ಜಿಲ್ಲಾಡಳಿತ ಸದಾ ಸಿದ್ಧವಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಹೇಳಿದರು. ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕರ್ನಾಟಕ ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾ ಘಟಕದ…

Read More

ವಿಭಾಗದ ಯೋಜನೆಗಳ ಪರಿಶೀಲನೆ – ಮಕ್ಕಳೊಂದಿಗೆ ಮಧ್ಯಾಹ್ನದ ಬಿಸಿಯೂಟ ಸವಿದ ಜಿಲ್ಲಾಧಿಕಾರಿ ದಿವ್ಯ ಪ್ರಭು ಮತ್ತು ಸಿಇಓ ಭುವನೇಶ ಪಾಟೀಲ

ಧಾರವಾಡ, ನವೆಂಬರ್ 12: ಧಾರವಾಡ ಮದಿಹಾಳ ನಗರದ ಸಿದ್ಧಾರೊಡ ಕಾಲೋನಿಯಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯ ಅಂಗನವಾಡಿ ಕೇಂದ್ರಕ್ಕೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಹಾಗೂ ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಭುವನೇಶ ಪಾಟೀಲ ಅವರು ಇಂದು ಮಧ್ಯಾಹ್ನ ದಿಢೀರ್ ಭೇಟಿ ನೀಡಿ, ಮಕ್ಕಳ ಹಾಜರಾತಿ ಮತ್ತು ದಾಖಲಾತಿಗಳನ್ನು ಪರಿಶೀಲಿಸಿದರು. ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಕೇಂದ್ರಕ್ಕೆ ಆಗಮಿಸುತ್ತಿದ್ದಂತೆಯೇ ಪುಟ್ಟ ಮಕ್ಕಳು ಗುಲಾಬಿ ಹೂ ನೀಡುವ ಮೂಲಕ ಆತ್ಮೀಯ ಸ್ವಾಗತ ಕೋರಿ…

Read More

ಹುಬ್ಬಳ್ಳಿ-ಧಾರವಾಡ ಷಟ್ಪಥ ಬೈಪಾಸ್ ಕಾಮಗಾರಿ: ಮಾರ್ಚ್ 2026ಕ್ಕೆ ಗಡುವು; ಶೀಘ್ರ ಪೂರ್ಣಕ್ಕೆ ಜಿಲ್ಲಾಧಿಕಾರಿ ನಿರ್ದೇಶನ

ಧಾರವಾಡ ನ.12: ಹುಬ್ಬಳ್ಳಿ–ಧಾರವಾಡ ನಡುವಿನ ಅತ್ಯಂತ ಮಹತ್ವದ 30.60 ಕಿಲೋಮೀಟರ್ ಉದ್ದದ ಷಟ್ಪಥ (ಆರು ಲೇನ್) ರಾಷ್ಟ್ರೀಯ ಹೆದ್ದಾರಿ ಬೈಪಾಸ್ ಕಾಮಗಾರಿಯನ್ನು ಮಾರ್ಚ್ 2026ರೊಳಗೆ ಕಡ್ಡಾಯವಾಗಿ ಪೂರ್ಣಗೊಳಿಸಬೇಕು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಗುತ್ತಿಗೆದಾರರು ಹಾಗೂ ಸಂಬಂಧಪಟ್ಟ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದ್ದಾರೆ. ನವೆಂಬರ್ 12ರಂದು ಮಧ್ಯಾಹ್ನ ನರೇಂದ್ರ ಟೋಲ್‌ನಿಂದ ಆರಂಭವಾಗುವ ಬೈಪಾಸ್ ಕಾಮಗಾರಿಯ ಪ್ರಗತಿ ಪರಿಶೀಲನೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಈ ಮಾಹಿತಿಯನ್ನು ನೀಡಿದರು. ರೂ. 580 ಕೋಟಿ ವೆಚ್ಚದ ಈ…

Read More

ಧಾರವಾಡ: ಮೀಶೋ ಗಿಫ್ಟ್ ಲಿಂಕ್ ಹಾವಳಿ; ಎಚ್ಚರಿಕೆ ನೀಡಿದ ಪೊಲೀಸ್ ಇಲಾಖೆ

ಧಾರವಾಡ: ಇತ್ತೀಚೆಗೆ ಧಾರವಾಡ ಜಿಲ್ಲೆಯಲ್ಲಿ ಸಾಮಾಜಿಕ ಜಾಲತಾಣಗಳು ಮತ್ತು ಮೊಬೈಲ್ ಮೆಸೇಜಿಂಗ್ ವೇದಿಕೆಗಳ ಮೂಲಕ ‘ಮೀಶೋ ಉಡುಗೊರೆ’ ಲಿಂಕ್‌ಗಳ ಹರಿವು ಹಠಾತ್ ಹೆಚ್ಚಳ ಕಂಡು ಸಾರ್ವಜನಿಕರಲ್ಲಿ ತೀವ್ರ ಆತಂಕ ಉಂಟಾಗಿದೆ. ಉಚಿತ ಉಡುಗೊರೆ ಅಥವಾ ಬಹುಮಾನವನ್ನು ಬೋನಸ್‌ ಅಂಗವಾಗಿ ವಾಗ್ದಾನಿಸುವಂತೆ ಠಾಣೆಗಳಲ್ಲಿರುವುದು ಎಂದು ವಾಟ್ಸಾಪ್‌ ಸಂದೇಶಗಳಲ್ಲಿ ಹರಡುವ ಈ ಲಿಂಕ್‌ಗಳು ಬಳಕೆದಾರರ ವೈಯಕ್ತಿಕ ಮತ್ತು ಹಣಕಾಸಿನ ಮಾಹಿತಿಯನ್ನು ಕದೆಯುವುದಕ್ಕೆ ಉದ್ದೇಶಿಸಿರುವ ದುರುದ್ದೇಶಪೂರ್ಣ ಪ್ರಯತ್ನಗಳು ಎಂದು ಪೊಲೀಸರು ತಿಳಿಹೇಳುತ್ತಿದ್ದಾರೆ. ದೊಡ್ಡ ಬ್ರ್ಯಾಂಡ್‌ಗಳು ಸಾಮಾನ್ಯವಾಗಿ ಸಾಮಾಜಿಕ ಮಾಧ್ಯಮದ ಮೂಲಕ ಇಂತಹ…

Read More

ಚರಸ್ ಮಾದಕ ಪದಾರ್ಥ ಅಕ್ರಮ ಮಾರಾಟ: ಒರ್ವನ ಬಂಧನ

ಚಿಕ್ಕಮಲ್ಲಿಗವಾಡ ಕ್ರಾಸ್ ಬಸ್ ಸ್ಟ್ಯಾಂಡ್ ಹತ್ತಿರ ಚರಸ್ ಮಾದಕ ಪದಾರ್ಥವನ್ನು ಅಕ್ರಮವಾಗಿ ಮಾರಾಟ ಮಾಡಲು ಬರುತ್ತಿದ್ದಾನೆ ಎಂಬ ಖಚಿತ ಮಾಹಿತಿ ಆಧಾರವಾಗಿ, ಧಾರವಾಡ ಜಿಲ್ಲಾ ಪೊಲೀಸರಿಂದ ಯಶಸ್ವಿ ದಾಳಿ ನಡೆಯಿತು. ಈ ವೇಳೆ ಒಬ್ಬ ವ್ಯಕ್ತಿಯನ್ನು ಬಂಧಿಸಿ, ಚರಸ್ ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಜಿಲ್ಲಾ ಪೊಲೀಸ್ ಅಧೀಕ್ಷಕ ಗುಂಜನ್ ಆರ್ಯ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಶಿವಾನಂದ ಕಟಗಿ, ಧಾರವಾಡ ಗ್ರಾಮೀಣ ಉಪವಿಭಾಗದ ಡಿ.ಎಸ್.ಪಿ ವಿನೋದ ಮುಕ್ತೇದಾರ ಹಾಗೂ ಪೊಲೀಸ್ ಇನ್ಸ್‌ಪೆಕ್ಟರ್ ಎಸ್.ಎಸ್. ಕಮತಗಿ ಅವರ ಮಾರ್ಗದರ್ಶನದಲ್ಲಿ…

Read More

ಹಿಂಗಾರು ಹಂಗಾಮಿನ ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ

ಹಿಂಗಾರು ಹಂಗಾಮಿನ ಕೃಷಿ ಪ್ರಶಸ್ತಿಗೆ ರೈತರಿಂದ ಅರ್ಜಿ ಆಹ್ವಾನ ಧಾರವಾಡ:ಜಿಲ್ಲೆಯ ಕೃಷಿ ವಲಯದಲ್ಲಿ ಉತ್ಪಾದಕತೆ ಹೆಚ್ಚಿಸಲು ಹಾಗೂ ರೈತರಲ್ಲಿ ಸ್ಪರ್ಧಾತ್ಮಕ ಮನೋಭಾವ ಬೆಳೆಸುವ ಉದ್ದೇಶದಿಂದ ಕೃಷಿ ಇಲಾಖೆ 2025–26 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿ ನಿಗದಿಪಡಿಸಿದ ವಿವಿಧ ಬೆಳೆಗಳಲ್ಲಿ ಬೆಳೆ ಸ್ಪರ್ಧೆಗಳನ್ನು ಆಯೋಜಿಸಿದೆ. ಈ ಹಿನ್ನೆಲೆಯಲ್ಲಿ 2025–26 ನೇ ಸಾಲಿನ ಕೃಷಿ ಪ್ರಶಸ್ತಿಯಡಿ ಹಿಂಗಾರು ಹಂಗಾಮಿನ ಬೆಳೆ ಸ್ಪರ್ಧೆಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರೈತರು ಮತ್ತು ರೈತ ಮಹಿಳೆಯರು…

Read More

ನ.14ರಂದು ಜಿಲ್ಲೆಯ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆ

ನ.14ರಂದು ಜಿಲ್ಲೆಯ ಎಲ್ಲ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ಪೋಷಕ-ಶಿಕ್ಷಕರ ಮಹಾಸಭೆ ಧಾರವಾಡ:ಜಿಲ್ಲೆಯಾದ್ಯಂತ ಮಕ್ಕಳ ದಿನಾಚರಣೆಯ ಅಂಗವಾಗಿ ನವೆಂಬರ್ 14 ರಂದು ಏಕಕಾಲದಲ್ಲಿ 2025–26 ನೇ ಸಾಲಿನ ಪೋಷಕ-ಶಿಕ್ಷಕರ ಮಹಾಸಭೆ ಆಯೋಜನೆಗೊಳ್ಳಲಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಧಾರವಾಡ ಉಪನಿರ್ದೇಶಕ ಎಸ್.ಎಸ್. ಕೆಳದಿಮಠ ಅವರು ತಿಳಿಸಿದ್ದಾರೆ. ಜಿಲ್ಲೆಯ ಎಲ್ಲಾ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಈ ಮಹಾಸಭೆ ನಡೆಯಲಿದ್ದು, ಶಾಲಾ ಮತ್ತು ಕಾಲೇಜುಗಳ ಎಲ್ಲ ಪ್ರಮುಖ ಪಾಲುದಾರರು — ಪೋಷಕರು, ಶಿಕ್ಷಕರು, ಎಸ್‌ಡಿಎಂಸಿ ಮತ್ತು ಸಿಡಿಸಿ…

Read More

ಮರಾಠ ಸಮುದಾಯದ ಮಹಿಳೆಯರಿಗಾಗಿ ಹೊಲಿಗೆ ಯಂತ್ರ ಸೌಲಭ್ಯ – ಅರ್ಜಿ ಆಹ್ವಾನ

ಧಾರವಾಡ, ನವೆಂಬರ್ 11: ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮವು 2025–26ನೇ ಸಾಲಿಗೆ ಹೊಲಿಗೆ ಯಂತ್ರ ವಿತರಣಾ ಯೋಜನೆಗಾಗಿ ಅರ್ಜಿಗಳನ್ನು ಆಹ್ವಾನಿಸಿದೆ. ನಿಗಮದಿಂದ ಆರ್ಥಿಕವಾಗಿ ಹಿಂದುಳಿದ ಮರಾಠ ಸಮುದಾಯದ ಮಹಿಳಾ ಅಭ್ಯರ್ಥಿಗಳಿಗೆ ಸ್ವಾವಲಂಬನೆ ಹಾಗೂ ಆರ್ಥಿಕಾಭಿವೃದ್ದಿಗೆ ನೆರವಾಗುವ ಉದ್ದೇಶದಿಂದ ಹೊಲಿಗೆ ಯಂತ್ರಗಳನ್ನು ವಿತರಿಸಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಆಸಕ್ತ ಅರ್ಹ ಮಹಿಳೆಯರು ಡಿಸೆಂಬರ್ 6, 2025 ರೊಳಗಾಗಿ ಸೇವಾ ಸಿಂಧು ಪೋರ್ಟಲ್ ಮೂಲಕ ಆನ್‌ಲೈನ್‌ನಲ್ಲಿ ತಮ್ಮ ಅರ್ಜಿಗಳನ್ನು ಸಲ್ಲಿಸಬಹುದು. ಈ ಸೇವೆಯನ್ನು ಗ್ರಾಮ ಒನ್, ಕರ್ನಾಟಕ ಒನ್…

Read More

ಗಾಂಧೀಜಿಯವರ ಸ್ವರಾಜ್ಯ ಕನಸು ನನಸು ಮಾಡುವ ಜವಾಬ್ದಾರಿ ನಮ್ಮ ಮೇಲಿದೆ: ಡಿ.ಆರ್. ಪಾಟೀಲ

ಧಾರವಾಡ, ನ. 10: ಗ್ರಾಮೀಣ ಅಭಿವೃದ್ಧಿಗೆ ಸರ್ಕಾರದಿಂದ ಬಿಡುಗಡೆ ಆಗುವ ಅನುದಾನದ ಪ್ರತಿ ಪೈಸೆ ಸದ್ಬಳಕೆಯಾಗಬೇಕು. ಅಭಿವೃದ್ಧಿ ಕಾಮಗಾರಿಗಳಲ್ಲಿ ತಾರತಮ್ಯ ಮಾಡದೆ ಎಲ್ಲರನ್ನು ಸಮಾನವಾಗಿ ಕಾಣಬೇಕು. ಅಂದಾಗ ಮಾತ್ರ ಅಭಿವೃದ್ಧಿಗೆ ವೇಗ ಮತ್ತು ಜನಸ್ಪಂದನೆ ದೊರೆಯುತ್ತದೆ ಎಂದು ಕರ್ನಾಟಕ ರಾಜ್ಯ ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿಯ ಉಪಾಧ್ಯಕ್ಷ ಡಿ.ಆರ್. ಪಾಟೀಲ ಅವರು ಹೇಳಿದರು. ಅವರು ಸೋಮವಾರದಂದು ಧಾರವಾಡ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬೆಳಗಾವಿ ವಿಭಾಗ ಮಟ್ಟದ ಎಲ್ಲ ಜಿಲ್ಲೆಗಳ 2026-27 ನೇ ಸಾಲಿನ ಜಿಲ್ಲಾ ವಾರ್ಷಿಕ…

Read More

ನವಲಗುಂದದಲ್ಲಿ ‘ಹನುಮ ಮಾಲಾ ಅಭಿಯಾನ – 2025’ ಘೋಷಣೆ: ನ. 16 ರಿಂದ ಮಾಲಾಧಾರಣೆ ಆರಂಭ

ನವಲಗುಂದ: ಪಟ್ಟಣದ ಹನುಮಾನ್ ಶಕ್ತಿ ಜಾಗರಣ ಸಮಿತಿ ವತಿಯಿಂದ ಪ್ರತಿ ವರ್ಷದಂತೆ ಈ ವರ್ಷವೂ ಆಯೋಜಿಸಲಾಗುವ ‘ಹನುಮ ಮಾಲಾ ಅಭಿಯಾನ – 2025’ ರ ದಿನಾಂಕಗಳನ್ನು ನಿಗದಿಪಡಿಸಲಾಗಿದೆ. ಸಮಿತಿಯವರು ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ವರ್ಷವೂ ಉತ್ಸವವನ್ನು ಭಕ್ತಿಭಾವದಿಂದ ಹಾಗೂ ಶಿಸ್ತಿನಿಂದ ಆಚರಿಸಲು ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಸಮಿತಿಯವರು ಬಿಡುಗಡೆ ಮಾಡಿದ ವೇಳಾಪಟ್ಟಿಯ ಪ್ರಕಾರ, ಹನುಮ ಮಾಲಾಧಾರಣೆಯು November 16, 2025 ರಿಂದ December 6, 2025 ರವರೆಗೆ ನಡೆಯಲಿದೆ. ಮಾಲಾಧಾರಣೆಯ ಪ್ರಮುಖ…

Read More