ಕುಂದಗೋಳ: 10 ನೇ ತರಗತಿ ವಿದ್ಯಾರ್ಥಿಯ ಶಂಕಾಸ್ಪದ ಸಾವು; ಕೊಲೆ ಶಂಕೆ?
ಕುಂದಗೋಳ: ಪಟ್ಟಣದ ಕರೋಗಲ ಓಣಿಯ ೧೬ ವರ್ಷದ ೧೦ನೇ ತರಗತಿ ವಿದ್ಯಾರ್ಥಿಯೋರ್ವ ಶಂಕಾಸ್ಪದವಾಗಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ಮೇಲ್ನೋಟಕ್ಕೆ ಇದೊಂದು ಕೊಲೆ ಎಂದು ಶಂಕಿಸಲಾಗಿದೆ. ಮೃತನನ್ನು ನಿಂಗರಾಜ ಮಲ್ಲಿಕಾರ್ಜುನ ಅವಾರಿ (೧೬) ಎಂದು ಗುರುತಿಸಲಾಗಿದೆ. ಪಟ್ಟಣದ ಸೊಸೈಟಿ ಪಕ್ಕದಲ್ಲಿ ಈ ಘಟನೆ ಬೆಳಕಿಗೆ ಬಂದಿದೆ. ಬಾಲಕನ ಶವ ಪತ್ತೆಯಾದ ವಿಷಯ ತಿಳಿಯುತ್ತಿದ್ದಂತೆ ಸ್ಥಳೀಯರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಸ್ಥಳದಲ್ಲಿ ಜಮಾಯಿಸಿದ್ದರು. ವಿಷಯ ತಿಳಿದು ತಕ್ಷಣವೇ ಸ್ಥಳಕ್ಕೆ ಆಗಮಿಸಿದ ಧಾರವಾಡ ಜಿಲ್ಲಾ ಎಸ್ಪಿ ಹಾಗೂ ಕುಂದಗೋಳ ಪೊಲೀಸರು…

