ಧಾರವಾಡ: ಲಂಚದ ಬೇಡಿಕೆಗೆ ಬಿ.ಎಸ್ಸಿ ವಿದ್ಯಾರ್ಥಿ ಬಲಿ; ಮೂವರು ಪೊಲೀಸರ ಅಮಾನತು
ಧಾರವಾಡ: ನಗರದ ವಿದ್ಯಾಗಿರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಿ.ಎಸ್ಸಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ರಾಜ್ಯಾದ್ಯಂತ ತೀವ್ರ ಸಂಚಲನ ಮೂಡಿಸಿದ್ದು, ಕರ್ತವ್ಯ ಲೋಪ ಹಾಗೂ ಭ್ರಷ್ಟಾಚಾರದ ಆರೋಪದ ಹಿನ್ನೆಲೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ವಿದ್ಯಾರ್ಥಿ ಆದಿತ್ಯ ಮ್ಯಾಗೇರಿ ಸೋಮವಾರ ರಾತ್ರಿ ತಮ್ಮ ಮನೆಯ ಕೋಣೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಮೃತನ ತಾಯಿ ಕವಿತಾ ಅವರು ಪೊಲೀಸರ ವಿರುದ್ಧ ಗಂಭೀರ ಆರೋಪ ಮಾಡಿದ್ದು, ಗಾಂಜಾ ಪ್ರಕರಣವೊಂದರಲ್ಲಿ ವಿಚಾರಣೆ ನಡೆಸುವ ನೆಪದಲ್ಲಿ ಆದಿತ್ಯನಿಗೆ ಪೊಲೀಸರು ಮಾನಸಿಕ ಕಿರುಕುಳ…

