ಹೊಸ ನ್ಯಾಯಬೆಲೆ ಅಂಗಡಿಗಳಿಗಾಗಿ ಅರ್ಜಿ ಆಹ್ವಾನಧಾರವಾಡ ಜಿಲ್ಲೆಯಲ್ಲಿ 3 ಹೊಸ ಅಂಗಡಿಗಳಿಗೆ ಅವಕಾಶ – ಆಹಾರ ನಾಗರಿಕ ಸರಬರಾಜು ಇಲಾಖೆಯ ಪ್ರಕಟಣೆ
ಧಾರವಾಡ: ಸಾರ್ವಜನಿಕ ವಿತರಣಾ ಪದ್ಧತಿಯಡಿ ಅರ್ಹ ಫಲಾನುಭವಿಗಳಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ಪಡಿತರ ಸಾಮಗ್ರಿಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರ ವ್ಯಾಪ್ತಿಯ ಬೆಂಗೇರಿ–ಗೋಪನಕೊಪ್ಪ, ಕರ್ಕಿ ಬಸವೇಶ್ವರನಗರ ಹಾಗೂ ಆನಂದನಗರ ಪ್ರದೇಶಗಳಲ್ಲಿ ಹೊಸದಾಗಿ ಮೂರು ನ್ಯಾಯಬೆಲೆ ಅಂಗಡಿಗಳನ್ನು ಮಂಜೂರು ಮಾಡುವ ಕುರಿತು ಅರ್ಜಿಗಳನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಆಹ್ವಾನಿಸಿದೆ. ಕರ್ನಾಟಕ ಅಗತ್ಯ ವಸ್ತುಗಳ ಸಾರ್ವಜನಿಕ ವಿತರಣಾ ಪದ್ಧತಿ (ನಿಯಂತ್ರಣ) ಆದೇಶ 2016ರ ಕಲಂ 11(2) ರನ್ವಯ ಪ್ರತಿ…

