ಪಶ್ಚಿಮ ಪದವೀಧರರ ಮತಕ್ಷೇತ್ರ: ನೋಂದಣಿಗೆ ವಿಡಿಯೋ ಸಂವಾದದ ಮೂಲಕ ಸೂಚನೆ
ಧಾರವಾಡ: ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿಗೆ ಹೊಸದಾಗಿ ಹೆಸರು ನೋಂದಾಯಿಸಲು ಅರ್ಹ ಪದವೀಧರರಿಗೆ ವಿಡಿಯೋ ಸಂವಾದ ಸಭೆಯ ಮೂಲಕ ನಿರ್ದೇಶನ ನೀಡಲಾಗಿದೆ. ರಾಜ್ಯ ಮುಖ್ಯ ಚುನಾವಣಾಧಿಕಾರಿಗಳು, ಬೆಂಗಳೂರು, ಇವರ ಅಧ್ಯಕ್ಷತೆಯಲ್ಲಿ ದಿನಾಂಕ ಅಕ್ಟೋಬರ್ 3, 2025 ರಂದು ಮತದಾರರ ನೋಂದಣಾಧಿಕಾರಿಗಳು ಮತ್ತು ಸಹಾಯಕ ನೋಂದಣಾಧಿಕಾರಿಗಳೊಂದಿಗೆ ವಿಡಿಯೋ ಸಂವಾದ ಸಭೆ ಜರುಗಿತು. ಈ ಸಭೆಯಲ್ಲಿ, ಈಗಾಗಲೇ ನೇಮಕಗೊಂಡಿರುವ ಸಹಾಯಕ ಮತದಾರರ ನೋಂದಣಾಧಿಕಾರಿಗಳ ಕಚೇರಿಗಳಲ್ಲಿ ನಮೂನೆ-18 ರ ಅರ್ಜಿ ಫಾರ್ಮ್‌ಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಿರುವುದನ್ನು ಖಚಿತಪಡಿಸಿಕೊಳ್ಳಲಾಯಿತು. ಅರ್ಹ…

