ಆತ್ಮನಿರ್ಭರ ಯೋಜನೆಯಡಿ 540 ಘಟಕಗಳಿಗೆ ಸಾಲ ಮಂಜೂರು: ಧಾರವಾಡ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಮಾಹಿತಿ
ಧಾರವಾಡ: ಪ್ರಧಾನ ಮಂತ್ರಿಗಳ ಕಿರು ಆಹಾರ ಸಂಸ್ಕರಣಾ ಘಟಕಗಳ ಯೋಜನೆ (PMFME) ಜಿಲ್ಲೆಯ ರೈತರು ಹಾಗೂ ಉದ್ಯಮ ಆಕಾಂಕ್ಷಿಗಳ ಸಶಕ್ತೀಕರಣಕ್ಕೆ ವರದಾನವಾಗಿದ್ದು, ಜಿಲ್ಲೆಯಲ್ಲಿ ಈವರೆಗೆ 540 ಘಟಕಗಳಿಗೆ ಸಾಲ ಮಂಜೂರಾಗಿದೆ ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ತಿಳಿಸಿದರು. ಬುಧವಾರ ಜಿಲ್ಲಾಧಿಕಾರಿಗಳ ಕಚೇರಿಯ ನೂತನ ಸಭಾಂಗಣದಲ್ಲಿ ಜರುಗಿದ ಆತ್ಮನಿರ್ಭರ ಭಾರತ ಯೋಜನೆಯ ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. 2020-21 ರಿಂದ ಜಾರಿಯಲ್ಲಿರುವ ಈ ಯೋಜನೆಯು ಸ್ವಯಂ ಉದ್ಯೋಗ ಮಾಡುವವರಿಗೆ ಅತ್ಯಂತ ಉಪಯುಕ್ತವಾಗಿದ್ದು,…

