ತಡಹಾಳ ಸೇತುವೆ ಕುಸಿತ: ಸಂಚಾರ ನಿಷೇಧ:ಸಾರ್ವಜನಿಕರಿಗೆ ಬದಲಿ ಮಾರ್ಗ ಘೋಷಣೆ
ಧಾರವಾಡ: ಜಿಲ್ಲೆಯಲ್ಲಿ ಸುರಿದ ಭಾರೀ ಮಳೆ ಹಾಗೂ ಪ್ರವಾಹದ ಪರಿಣಾಮವಾಗಿ ನರಗುಂದ-ನವಲಗುಂದ ರಾಷ್ಟ್ರೀಯ ಹೆದ್ದಾರಿ-218ಕ್ಕೆ ಸಂಪರ್ಕ ಕಲ್ಪಿಸುವ, ನವಲಗುಂದ ತಾಲೂಕಿನ ಅರಭಾವಿ-ಚಳ್ಳಿಕೇರಿ ರಾಜ್ಯ ಹೆದ್ದಾರಿ-45ರಲ್ಲಿನ ತಡಹಾಳ ಗ್ರಾಮದ ಬಳಿಯ ಸೇತುವೆ ಕುಸಿದಿದೆ. ಈ ಹಿನ್ನೆಲೆಯಲ್ಲಿ ಯಾವುದೇ ಹೆಚ್ಚಿನ ಅನಾಹುತಗಳಾಗದಂತೆ ತಡೆಯಲು, ಲೋಕೋಪಯೋಗಿ ಇಲಾಖೆ ಹಾಗೂ ಪೊಲೀಸ್ ಅಧೀಕ್ಷಕರ ವರದಿ ಆಧರಿಸಿ, ಜಿಲ್ಲಾಧಿಕಾರಿ ದಿವ್ಯಪ್ರಭು ಅವರು ಈ ಮಾರ್ಗದಲ್ಲಿ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಸಂಚಾರಕ್ಕೆ ಬದಲಿ ವ್ಯವಸ್ಥೆಸೇತುವೆ ಕುಸಿತದಿಂದಾಗಿ ಪ್ರಯಾಣಿಕರಿಗೆ ತೊಂದರೆಯಾಗದಂತೆ, ಜಿಲ್ಲಾಡಳಿತವು ಬದಲಿ…

