ಧಾರವಾಡ: ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ, ಶಾಸಕ ಬಸವರಾಜ ರಾಯರೆಡ್ಡಿಯವರಿಗೆ ಸೇರಿದ ಫಾರ್ಮ್‌ಹೌಸ್‌ನಲ್ಲಿ ದರೋಡೆ, 15 ಜನರ ಬಂಧನ

ಧಾರವಾಡ: ಮುಖ್ಯಮಂತ್ರಿಗಳ ಆರ್ಥಿಕ ಸಲಹೆಗಾರ ಮತ್ತು ಶಾಸಕ ಬಸವರಾಜ ರಾಯರೆಡ್ಡಿ ಅವರಿಗೆ ಸೇರಿದ ಧಾರವಾಡದ ಫಾರ್ಮ್‌ಹೌಸ್‌ನಲ್ಲಿ ದರೋಡೆ ನಡೆದಿದ್ದು, ಈ ಸಂಬಂಧ 15 ಜನರ ತಂಡವನ್ನು ಪೊಲೀಸರು ಬಂಧಿಸಿದ್ದಾರೆ. ಘಟನೆ ಆಗಸ್ಟ್ 13ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ತಾಲ್ಲೂಕಿನ ದಡ್ಡಿಕಮಲಾಪುರ ಗ್ರಾಮದ ಬಳಿ ಇರುವ ‘ಮಮತಾ’ ಎಂಬ ಫಾರ್ಮ್‌ಹೌಸ್‌ಗೆ ಆಗಸ್ಟ್ 13ರಂದು ರಾತ್ರಿ ಸುಮಾರು 8-10 ಜನರ ಗುಂಪೊಂದು ನುಗ್ಗಿದೆ. ಫಾರ್ಮ್‌ಹೌಸ್‌ನಲ್ಲಿ ಮಲಗಿದ್ದ ಕಣ್ಣಪ್ಪ ಜಡ್ಡಿ, ಹನುಮಂತ ಧನದಾವರ್, ಅಶೋಕ ಪೋತಲಿ ಮತ್ತು ಲಕ್ಷ್ಮಣ…

Read More

ಧಾರವಾಡ ಜಿಲ್ಲೆಯಲ್ಲಿ ಧಾರಾಕಾರ ಮಳೆ: 47 ಮನೆಗಳಿಗೆ ಭಾಗಶಃ ಹಾನಿ,

ಧಾರವಾಡ: ಕಳೆದ 48 ಗಂಟೆಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಜಿಲ್ಲೆಯಲ್ಲಿ ಒಟ್ಟು 47 ಮನೆಗಳಿಗೆ ಭಾಗಶಃ ಹಾನಿಯಾಗಿದ್ದು, ಅದೃಷ್ಟವಶಾತ್ ಯಾವುದೇ ಮಾನವ ಅಥವಾ ಜಾನುವಾರು ಪ್ರಾಣಹಾನಿಯಾಗಿಲ್ಲ ಎಂದು ಪ್ರಾಥಮಿಕ ವರದಿಗಳು ತಿಳಿಸಿವೆ. ಮಳೆಯಿಂದ ಹಾನಿಗೊಳಗಾದ ಮನೆಗಳ ವಿವರಗಳು ಹೀಗಿವೆ: ಬೆಳೆ ನಷ್ಟದ ಸಮೀಕ್ಷೆ ಆರಂಭಪ್ರವಾಹ ಮತ್ತು ನಿರಂತರ ಮಳೆಯಿಂದಾಗಿ ಬೆಳೆಗಳಿಗೆ ಉಂಟಾದ ಹಾನಿಯ ಕುರಿತು ಕೃಷಿ ಇಲಾಖೆ ಅಧಿಕಾರಿಗಳು ಮತ್ತು ಕಂದಾಯ ಇಲಾಖೆಯ ಸಿಬ್ಬಂದಿಯ ಜಂಟಿ ಸಮೀಕ್ಷೆ ಪ್ರಕ್ರಿಯೆ ಆರಂಭವಾಗಿದೆ. ಬೆಳೆ ನಷ್ಟದ ನಿಖರ ಪ್ರಮಾಣವನ್ನು ಅಂದಾಜು…

Read More

ಬೆಣ್ಣೆಹಳ್ಳ ಪ್ರವಾಹ ನಿಯಂತ್ರಣ: ಕುಂದಗೋಳದಿಂದಲೇ ಕಾಮಗಾರಿ ಆರಂಭಿಸಲು ಶಾಸಕ ಎಂ.ಆರ್. ಪಾಟೀಲ್ ಸದನದಲ್ಲಿ ಆಗ್ರಹ

ಧಾರವಾಡ/ಕುಂದಗೋಳ : ಪ್ರತಿ ವರ್ಷ ಪ್ರವಾಹದಿಂದ ರೈತರಿಗೆ ಅಪಾರ ನಷ್ಟ ಉಂಟುಮಾಡುತ್ತಿರುವ ಬೆಣ್ಣೆಹಳ್ಳದ ಉಪಹಳ್ಳಗಳ ಕಾಮಗಾರಿಯನ್ನು ನವಲಗುಂದ ತಾಲ್ಲೂಕಿನ ಬದಲಿಗೆ ಪ್ರವಾಹದ ಮೂಲವಾದ ಕುಂದಗೋಳ ತಾಲ್ಲೂಕಿನಿಂದಲೇ ಆರಂಭಿಸಬೇಕು ಎಂದು ಶಾಸಕ ಎಂ.ಆರ್. ಪಾಟೀಲ್ ಅವರು ಸದನದಲ್ಲಿ ಆಗ್ರಹಿಸಿದ್ದಾರೆ. ಬೆಣ್ಣೆಹಳ್ಳಕ್ಕೆ ಉಪಹಳ್ಳಗಳಾದ ಕಗ್ಗೋಡಿ, ಗೂಗಿ, ದೇಸಾಯಿ ಮತ್ತು ಮಾಸ್ತಿ ಹಳ್ಳಗಳಿಂದ ದೊಡ್ಡ ಪ್ರಮಾಣದ ಪ್ರವಾಹ ಉಂಟಾಗುತ್ತದೆ. ಇದು ಕುಂದಗೋಳ ತಾಲ್ಲೂಕಿನ 33 ಕಿ.ಮೀ. ವಿಸ್ತಾರ ಹೊಂದಿದ್ದು, 17 ಗ್ರಾಮಗಳ ಮೇಲೆ ಪರಿಣಾಮ ಬೀರುತ್ತದೆ ಎಂದು ಶಾಸಕರು ಗಮನ ಸೆಳೆದರು….

Read More

ಧಾರವಾಡದಲ್ಲಿ ಜಿಲ್ಲೆಯಲ್ಲಿ ಹೆಚ್ಚಿನ ಮಳೆ: ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ನಾಳೆಯು ಸಹ ರಜೆ ಘೋಷಣೆ

ಧಾರವಾಡ: ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆ, ಆಗಸ್ಟ್ 20 ರಂದು, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು (ಇಂದು) ಆದೇಶ ಹೊರಡಿಸಿದ್ದಾರೆ. ಮಳೆಯಿಂದಾಗಿ ಉಂಟಾಗಬಹುದಾದ ತೊಂದರೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ಈ ರಜಾದಿನವನ್ನು ಮುಂದಿನ ದಿನಗಳಲ್ಲಿ…

Read More

ಧಾರವಾಡ: ಮಳೆ ಹಾನಿ ನಿರ್ವಹಣೆಗೆ ಸಹಾಯವಾಣಿ ಆರಂಭಿಸಿದ ಜಿಲ್ಲಾಡಳಿತ

ಧಾರವಾಡ: ಕಳೆದ ಮೂರ್ನಾಲ್ಕು ದಿನಗಳಿಂದ ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ಉಂಟಾಗಬಹುದಾದ ಸಮಸ್ಯೆಗಳನ್ನು ನಿರ್ವಹಿಸಲು ಧಾರವಾಡ ಜಿಲ್ಲಾಡಳಿತವು ಸಹಾಯವಾಣಿ ಕೇಂದ್ರಗಳನ್ನು ತೆರೆದಿದೆ. ಮಳೆಯಿಂದ ತೊಂದರೆಗೊಳಗಾದವರು ಮತ್ತು ಪ್ರವಾಹ ಪೀಡಿತ ಪ್ರದೇಶಗಳಲ್ಲಿರುವ ಜನರು ಈ ಸಹಾಯವಾಣಿಗಳಿಗೆ ಕರೆ ಮಾಡಿ ಮಾಹಿತಿ ನೀಡಬಹುದು ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶ ಹೊರಡಿಸಿದ್ದಾರೆ. ಸಹಾಯವಾಣಿ ಸಂಖ್ಯೆಗಳ ವಿವರ ಹೀಗಿದೆ: ಇದರ ಜೊತೆಗೆ, ಸಾರ್ವಜನಿಕರು ಮಳೆಯ ಹಾನಿಯ ಕುರಿತಾದ ಫೋಟೋಗಳು ಮತ್ತು ವೀಡಿಯೊಗಳನ್ನು 8277803778 ವಾಟ್ಸಾಪ್ ಸಂಖ್ಯೆಗೆ ಕಳುಹಿಸುವ ಮೂಲಕವೂ ಮಾಹಿತಿ ನೀಡಬಹುದು…

Read More

ಅತಿ ಮಳೆಯಿಂದ ಹೆಸರು ಬೆಳೆ ಹಾನಿ: ರೈತರಿಗೆ ಬೆಳೆವಿಮೆ ತುಂಬಿದ ಅರ್ಜಿ ಗಳನ್ನು ವೀಮಾ ಕಂಪನಿಯ ಪ್ರತಿನಿಧಿಗಳಿಗೆ ಸಲ್ಲಿಸಲು ಸೂಚನೆ

ಕುಂದಗೋಳ: ಪ್ರಸಕ್ತ 2025-26ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಅತಿಯಾದ ಮಳೆಯಿಂದಾಗಿ ಕುಂದಗೋಳ ತಾಲ್ಲೂಕಿನಲ್ಲಿ ಪ್ರಮುಖ ಬೆಳೆಯಾದ ಹೆಸರು (Green Gram) ಹಾನಿಗೊಳಗಾಗಿದೆ. ಈ ಹಿನ್ನೆಲೆಯಲ್ಲಿ, ಹೆಸರು ಬೆಳೆಗೆ ಬೆಳೆ ವಿಮೆ ನೋಂದಾಯಿಸಿರುವ ರೈತರು, ಕೂಡಲೇ ವಿಮಾ ಕಂಪನಿ ಪ್ರತಿನಿಧಿಗಳಿಗೆ ತಮ್ಮ ಅರ್ಜಿಗಳನ್ನು ಹಾಗೂ ಬೆಳೆ ವಿಮೆ ತುಂಬಿದ ರಷಿದಿಯೊಂದಿಗೆ ಸಲ್ಲಿಸುವಂತೆ ಸಹಾಯಕ ಕೃಷಿ ನಿರ್ದೇಶಕಿ ಭಾರತಿ ಮೆಣಸಿನಕಾಯಿ ಯವರು ತಿಳಿಸಿದ್ದಾರೆ. ರೈತರು ಹಾನಿಗೊಳಗಾದ ತಮ್ಮ ಬೆಳೆಗಳಿಗೆ ಪರಿಹಾರ ಪಡೆಯಲು ವಿಳಂಬ ಮಾಡದೆ ವಿಮಾ ಕಂಪನಿಯ ಪ್ರತಿನಿಧಿಗಳೊಂದಿಗೆ ಸಂಪರ್ಕ…

Read More

ಧಾರವಾಡದಲ್ಲಿ ಭಾರೀ ಮಳೆ: ಧರೆಗೆ ಮರ ಉರುಳಿ 8 ಕಾರು ಜಖಂ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ

ಧಾರವಾಡ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮವಾರದಂದು ರಾತ್ರಿ ವೇಳೆಯಲ್ಲಿ ಧಾರವಾಡದ ರೈಲು ನಿಲ್ದಾಣದ ರಸ್ತೆಯಲ್ಲಿರುವ ಬೃಂದಾವನ ಹೋಟೆಲ್ ಬಳಿ ಬೃಹತ್ ಮರವೊಂದು ಧರೆಗೆ ಉರುಳಿದೆ. ಈ ಘಟನೆಯಿಂದಾಗಿ ಸುಮಾರು 8 ಕಾರುಗಳು ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ವಿವರಗಳುನಗರದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯ ರಭಸಕ್ಕೆ ಮಣ್ಣು ಸಡಿಲಗೊಂಡು ಮರ ನೆಲಕ್ಕುರುಳಿದೆ ಎನ್ನಲಾಗಿದೆ. ಮರ ಬಿದ್ದ ತಕ್ಷಣ ಅದರ ಬುಡದಲ್ಲಿ ನಿಲ್ಲಿಸಿದ್ದ ಅನೇಕ ಕಾರುಗಳು…

Read More

ಧಾರವಾಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆ: ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಧಾರವಾಡ: ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆ, ಆಗಸ್ಟ್ 19 ರಂದು, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೋಮವಾರದಂದು (ಇಂದು) ಆದೇಶ ಹೊರಡಿಸಿದ್ದಾರೆ. ಮಳೆಯಿಂದಾಗಿ ಉಂಟಾಗಬಹುದಾದ ತೊಂದರೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ಈ ರಜಾದಿನವನ್ನು ಮುಂದಿನ…

Read More

ಗುಡೇನಕಟ್ಟಿಯಲ್ಲಿ ಬಸವಣ್ಣ ಜಾತ್ರೆ: ಹಲವಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ

ಕುಂದಗೋಳ: ತಾಲ್ಲೂಕಿನ ಗುಡೇನಕಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕಡೆ ಸೋಮವಾರದಂದು ನಡೆದ ಶ್ರೀ ಬಸವಣ್ಣನವರ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ಜಾತ್ರಾ ಕಾರ್ಯಕ್ರಮದ ನಿಮಿತ್ತ 24 ಗಂಟೆಗಳ ಕಾಲ ನಿರಂತರ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಾಯಂಕಾಲ ನಡೆದ ರಥೋತ್ಸವದಲ್ಲಿ ‘ಹರ ಹರ ಮಹಾದೇವ’ ಎಂಬ ನಾಮಘೋಷಗಳೊಂದಿಗೆ ಭಕ್ತರು ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ಗ್ರಾಮದ ಶ್ರೀ ಮಾರುತಿ ದೇವಸ್ಥಾನದಿಂದ ಪ್ರಾರಂಭಗೊಂಡ ರಥೋತ್ಸವವು ಶಾಲಾ ಆವರಣದವರೆಗೆ ಸಾಗಿತು. ಭಕ್ತರು ತಮ್ಮ…

Read More

ಶರೀಫ ಶಿವಯೋಗಿ ಜಾತ್ರಾ ಮಹೋತ್ಸವ: ಸಂಭ್ರಮದ ರಥೋತ್ಸವಕ್ಕೆ ಚನ್ನಬಸವ ದೇವರು ಚಾಲನೆ

ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ತ ಸೋಮವಾರದಂದು ಇಲ್ಲಿನ ಶ್ರೀ ಶರೀಫ ಶಿವಯೋಗಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ರಥೋತ್ಸವಕ್ಕೆ ವಿರಕ್ತಮಠದ ಚನ್ನಬಸವ ದೇವರು ಅವರು ಭಕ್ತಿಪೂರ್ವಕವಾಗಿ ಚಾಲನೆ ನೀಡಿದರು. ಹಲಾವಾರು ಭಕ್ತರ ಸಮ್ಮುಖದಲ್ಲಿ ನಡೆದ ಈ ರಥೋತ್ಸವವು, ಜಯಘೋಷಗಳು ಮತ್ತು ಭಜನೆಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಭಕ್ತರು ರಥಕ್ಕೆ ಹೂವು, ಹಣ್ಣುಗಳನ್ನು ಅರ್ಪಿಸಿ ತಮ್ಮ ಭಕ್ತಿ ಸಮರ್ಪಿಸಿದರು. ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಈ ರಥೋತ್ಸವದಲ್ಲಿ ಜಾತಿ-ಮತ ಭೇದವಿಲ್ಲದೆ ಸಕಲ ಭಕ್ತರೂ ಪಾಲ್ಗೊಂಡಿದ್ದರು….

Read More