ಗಾಂಧಿ ಜಯಂತಿಯವರೆಗೆ ‘ಸ್ವಚ್ಛತಾ ಹಿ ಸೇವಾ’ ಅಭಿಯಾನಕ್ಕೆ ಚಾಲನೆ

ಧಾರವಾಡ: ಮಹಾತ್ಮ ಗಾಂಧಿಯವರ ಜನ್ಮದಿನಾಚರಣೆಯ ಪ್ರಯುಕ್ತ ‘ಸ್ವಚ್ಛತಾ ಹಿ ಸೇವಾ’ ಅಭಿಯಾನಕ್ಕೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ಚಾಲನೆ ನೀಡಿದರು. ಸೆಪ್ಟೆಂಬರ್ 17ರಂದು ಆರಂಭವಾಗಿ ಅಕ್ಟೋಬರ್ 2ರಂದು ಗಾಂಧಿ ಜಯಂತಿಯಂದು ಮುಕ್ತಾಯಗೊಳ್ಳುವ ಈ 15 ದಿನಗಳ ಅಭಿಯಾನವು ಜಿಲ್ಲಾದ್ಯಂತ ಬೃಹತ್ ಪ್ರಮಾಣದಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಿದೆ. ಜಿಲ್ಲಾ ಪಂಚಾಯತ್ ಆವರಣದಲ್ಲಿ ಸಸಿ ನೆಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದ ಮಲ್ಲಿಕಾರ್ಜುನ ತೊದಲಬಾಗಿ ಅವರು, ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳಿಗೆ ‘ಸ್ವಚ್ಛತಾ ಹಿ ಸೇವಾ’…

Read More

ಕುಂದಗೋಳ ಪಟ್ಟಣದ ತಹಶಿಲ್ದಾರ ಕಚೇರಿ ಆವರಣದಲ್ಲಿ ಭೋವಿ ಸಮಾಜದಿಂದ ಪ್ರತಿಭಟನೆ: ತಹಶಿಲ್ದಾರಗೆ ಮನವಿ

ಕುಂದಗೋಳ: ಭೋವಿ ಸಮಾಜಕ್ಕೆ ಪರಿಶಿಷ್ಟ ಜಾತಿ ಪ್ರಮಾಣ ಪತ್ರ ನೀಡುವಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಖಂಡಿಸಿ, ಗುರುವಾರ ತಹಶೀಲ್ದಾರ ಕಚೇರಿ ಆವರಣದಲ್ಲಿ ಭೋವಿ ಸಮಾಜದವರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು. ಪ್ರತಿಭಟನಾಕಾರರು ಸಲ್ಲಿಸಿದ ಮನವಿಯಲ್ಲಿ, “ಭೋವಿ ಸಮಾಜವನ್ನು ಸರಕಾರವೇ 1950ರಲ್ಲಿಯೇ ಪರಿಶಿಷ್ಟ ಜಾತಿಗೆ ಸೇರಿಸಿ ಆದೇಶ ಹೊರಡಿಸಿದೆ. ಹಲವಾರು ಬಾರಿ ಸರ್ಕಾರಿ ಸುತ್ತೊಲೆಗಳು ಹೊರಬಿದ್ದಿದ್ದರೂ, ಪ್ರಸ್ತುತ ತಹಶೀಲ್ದಾರರು ಪ್ರಮಾಣ ಪತ್ರ ನೀಡಲು ನಿರಾಕರಿಸುತ್ತಿದ್ದಾರೆ. ಇದರಿಂದ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಅನ್ಯಾಯಕ್ಕೆ ಗುರಿಯಾಗುತ್ತಿದ್ದಾರೆ. ಹಿಂದಿನ ತಹಶೀಲ್ದಾರರು ನಾಗರಿಕ ಹಕ್ಕು ಜಾರಿ…

Read More

ಶಿಕ್ಷಣವು ಮಹಿಳಾ ಸಬಲೀಕರಣಕ್ಕೆ ಪ್ರಬಲ ಅಸ್ತ್ರ: ಡಾ. ಪ್ರಜ್ಞಾ ಮತ್ತಿಹಳ್ಳಿ

ಧಾರವಾಡ: ವ್ಯಕ್ತಿಯ ಜೀವನದಲ್ಲಿ ಶಿಕ್ಷಣವು ಒಂದು ಪ್ರಮುಖ ಶಕ್ತಿ. ಅದರಲ್ಲೂ ಮಹಿಳೆಯರು ಅಜ್ಞಾನ ಮತ್ತು ಶೋಷಣೆಯಿಂದ ಮುಕ್ತರಾಗಲು ಸಾಕ್ಷರತೆ ಪ್ರಮುಖ ಸಾಧನವಾಗಿದೆ ಎಂದು ಕಿತ್ತೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕಿ ಡಾ. ಪ್ರಜ್ಞಾ ಮತ್ತಿಹಳ್ಳಿ ಅಭಿಪ್ರಾಯಪಟ್ಟರು. ನಗರದ ಶ್ರೀ ಸತ್ಯಸಾಯಿ ಮಹಿಳಾ ಪದವಿ ಮಹಾವಿದ್ಯಾಲಯದಲ್ಲಿ ಕರ್ನಾಟಕ ವಿದ್ಯಾವರ್ಧಕ ಸಂಘದ ‘ಶಿಕ್ಷಣ ಮಂಟಪ’ ಹಾಗೂ ಕಾಲೇಜಿನ ಸಹಯೋಗದಲ್ಲಿ ಆಯೋಜಿಸಿದ್ದ ವಿಶ್ವ ಸಾಕ್ಷರತಾ ದಿನಾಚರಣೆಯ ಉಪನ್ಯಾಸ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಮಹಿಳೆಯರು ಅಕ್ಷರ ಕಲಿತು ತಮ್ಮ ಮೇಲಾಗುತ್ತಿರುವ…

Read More

ಧಾರವಾಡ | ಓಜೋನ್ ಪದರ; ಮನುಕುಲದ ಜೀವ ರಕ್ಷಕವಾಗಿದೆ: ಡಾ. ಎನ್ ಬಿ ನಾಲತವಾಡ

ಧಾರವಾಡ:ಓಝೋನ್ ಪದರವು ಮನುಕುಲದ ಜೀವ ರಕ್ಷಕವಾಗಿದ್ದು, ಅದರ ಸಂರಕ್ಷಣೆಯು ಹೆಚ್ಚು ಅಗತ್ಯವಾಗಿದೆ. ಈ ಪದರವು ಭೂಮಿಯ ಮೇಲಿನ ಜೀವನವನ್ನು ಬೆಂಬಲಿಸುವಲ್ಲಿ ಮತ್ತು ಎಲ್ಲಾ ಜೀವಿಗಳಿಗೆ ಸುರಕ್ಷಿತ ಪರಿಸರವನ್ನು ಒದಗಿಸುವಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತದೆ ಡಾ. ಎನ್.ಬಿ.ನಾಲತವಾಡ ಧಾರವಾಡದ ಅಂಜುಮನ ಕಾಲೇಜಿನಲ್ಲಿ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಓಝೋನ್ ದಿನಾಚರಣೆ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಮಾತನಾಡಿದರು. ಕಾಲೇಜಿನ ಪ್ರಾಚಾರ್ಯ ಡಾ. ಐ.ಎ.ಮುಲ್ಲಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಓಝೋನ್ ಪದರವು ಸೂರ್ಯನ ಹಾನಿಕಾರಕ ನೇರಳಾತೀತ ವಿಕಿರಣವನ್ನು ಹೀರಿಕೊಂಡು ಭೂಮಿಯ ಮೇಲೆ ಜೀವ ಸಂಕುಲಗಳನ್ನು…

Read More

ಕ.ವಿ.ವ. ಸಂಘದ ಗೌರವ ಉಪಾಧ್ಯಕ್ಷರಾಗಿ ಐದು ಜನರ ನೇಮಕ

ಧಾರವಾಡ: ಕರ್ನಾಟಕ ವಿದ್ಯಾವರ್ಧಕ ಸಂಘಕ್ಕೆ ಮೂರು ವರ್ಷಗಳ ಅವಧಿಗೆ ಐವರು ಗಣ್ಯರನ್ನು ಗೌರವ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸೆಪ್ಟೆಂಬರ್ 12, 2025ರಂದು ನಡೆದ ಕಾರ್ಯಕಾರಿ ಸಮಿತಿಯ ವಿಶೇಷ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ ಅವರ ಅನುಮೋದನೆಯ ನಂತರ ನೇಮಕಾತಿ ಅಂತಿಮಗೊಂಡಿದೆ. ಸಂಘದ ನಿಯಮಗಳು ಮತ್ತು ಸಾಮಾಜಿಕ ನ್ಯಾಯದ ಆಧಾರದ ಮೇಲೆ ಈ ನೇಮಕಗಳನ್ನು ಮಾಡಲಾಗಿದೆ. ಗೌರವ ಉಪಾಧ್ಯಕ್ಷರಾಗಿ ಆಯ್ಕೆಯಾದವರು: ಈ…

Read More

ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಸಂಘದ ಶತಮಾನೋತ್ಸವ ಸಮಾರಂಭ

ನವಲಗುಂದ : ಪಟ್ಟಣದಲ್ಲಿರುವ ನವಲಗುಂದ ತಾಲ್ಲೂಕು ಪ್ರಾಥಮಿಕ ಶಾಲಾ ಶಿಕ್ಷಕ-ಶಿಕ್ಷಕಿಯರ ಸಹಕಾರಿ ಪತ್ತಿನ ಸಂಘದ ಶತಮಾನೋತ್ಸವ ಸಮಾರಂಭ 101 ನೇ ವಾರ್ಷಿಕ ಸರ್ವಸಾಧಾರಣ ಸಭೆ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಸಮಾರಂಭ ಸೆ 20 ಶನಿವಾರದಂದು ಬೆಳಿಗ್ಗೆ ತಾಲೂಕ ಪಂಚಾಯತ್ ಹತ್ತಿರ ವಿರುವ ಶಿಕ್ಷಕರ ಸಹಕಾರ ಕಲ್ಯಾಣ ಕೇಂದ್ರದಲ್ಲಿ ಜರುಗಲಿದೆ ಎಂದು ಸಂಘದ ಅಧ್ಯಕ್ಷ ಗಣೇಶ ಜಿ ಹೊಳೆಯನ್ನವರ ತಿಳಿಸಿದ್ದಾರೆ ಶಿರಹಟ್ಟಿಯ ಜಗದ್ಗುರುಫಕ್ಕೀರ ದಿಂಗಾಲೇಶ್ವರ ಮಹಾಸ್ವಾಮೀಜಿಗಳು ಪಾವನ ಸಾನಿಧ್ಯ ಹಾಗೂ ಸುಳ್ಳ-ಹುಲಿಯ ಸಂಸ್ಥಾನ ಪಂಚಗ್ರಹ ಹಿರೇಮಠದ ಶಿವಸಿದ್ಧರಾಮೇಶ್ವರ…

Read More

ಭಾರತೀಯ ಸಂಸ್ಕೃತಿಗೆ ವಿಶ್ವಕರ್ಮರು ಆಧಾರ ಸ್ತಂಭ: ಮಹಾಪೌರ ಜ್ಯೋತಿ ಪಾಟೀಲ

ಧಾರವಾಡ: ವಿಶ್ವಕರ್ಮ ಸಮುದಾಯವು ಭಾರತೀಯ ಸಂಸ್ಕೃತಿ ಮತ್ತು ಕರಕುಶಲತೆಗೆ ಆಧಾರ ಸ್ತಂಭವಾಗಿದೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಜ್ಯೋತಿ ಪಾಟೀಲ ಹೇಳಿದರು. ಅವರು ಪರಿಶ್ರಮ ಮತ್ತು ಕೌಶಲ್ಯದಿಂದಾಗಿ ಹಲವು ಅದ್ಭುತ ಕಲಾಕೃತಿಗಳು, ವಾಸ್ತುಶಿಲ್ಪಗಳು ರೂಪುಗೊಂಡಿವೆ ಎಂದು ಅವರು ತಿಳಿಸಿದರು.ನಗರದ ಕರ್ನಾಟಕ ಕುಲಪುರೋಹಿತ ಆಲೂರು ವೆಂಕಟರಾವ ಸಭಾಭವನದಲ್ಲಿ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಆಯೋಜಿಸಿದ್ದ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಆಧುನಿಕ ಯುಗದಲ್ಲಿಯೂ ವಿಶ್ವಕರ್ಮ ಸಮುದಾಯವು ತಮ್ಮ…

Read More

ಸ್ವಸ್ಥ ನಾರಿ, ಸಶಕ್ತ ಪರಿವಾರ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ

ಧಾರವಾಡ: “ಮಹಿಳೆ ಆರೋಗ್ಯವಂತಳಾಗಿದ್ದರೆ ಇಡೀ ಕುಟುಂಬವೇ ಸಶಕ್ತವಾಗಿರುತ್ತದೆ,” ಎಂದು ಕೇಂದ್ರ ಸಂಸದೀಯ ವ್ಯವಹಾರಗಳು, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ಪ್ರಧಾನಿ ನರೇಂದ್ರ ಮೋದಿ ಅವರ ಜನ್ಮದಿನದ ಅಂಗವಾಗಿ ದೇಶಾದ್ಯಂತ ‘ಸೇವಾ ಪಾಕ್ಷಿಕ’ ಆಚರಿಸಲಾಗುತ್ತಿದ್ದು, ಅದರ ಭಾಗವಾಗಿ ನಗರದಲ್ಲಿ ಆಯೋಜಿಸಿದ್ದ ‘ಸ್ವಸ್ಥ ನಾರಿ, ಸಶಕ್ತ ಪರಿವಾರ’ ರಾಷ್ಟ್ರವ್ಯಾಪಿ ಆರೋಗ್ಯ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.15 ದಿನಗಳ ಕಾಲ ವಿಶೇಷ ಆರೋಗ್ಯ ಅಭಿಯಾನಪ್ರಧಾನಿ ಮೋದಿ ಮಧ್ಯಪ್ರದೇಶದ ಧಾರದಿಂದ ಈ ಅಭಿಯಾನಕ್ಕೆ ಚಾಲನೆ ನೀಡಿದ್ದಾರೆ. ಮುಂದಿನ…

Read More

ದಿ:ಸವಾಯಿ ಗಂಧರ್ವರ ಪುಣ್ಯತಿಯ ನಿಮಿತ್ತ ನಡೆದ ಸಂಗೀತ ಆಲಿಸಿದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ಕುಂದಗೋಳ: ಪಟ್ಟಣದ ಸವಾಯಿ ಗಂಧರ್ವರ ಸ್ಮಾರಕ ಭವನದಲ್ಲಿ ನಡೆದ ಅಹೋರಾತ್ರಿ ಸಂಗೀತ ಕಾರ್ಯಕ್ರಮಕ್ಕೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹಾಗೂ ಮಾಜಿ ಸಂಸದ ಐ.ಜಿ. ಸನದಿ ಆಗಮಿಸಿ ಸಂಗೀತ ಆಲಿಸಿದರು. ಈ ವೇಳೆ, ಸುಪ್ರಸಿದ್ಧ ಸಂಗೀತ ಗಾಯಕ ಪದ್ಮಶ್ರೀ ಎಮ್ ವೆಂಕಟೇಶ ಕುಮಾರ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ನಂತರ, ಸಚಿವರು ಮತ್ತು ಇತರ ಗಣ್ಯರು ಸ್ವಲ್ಪ ಸಮಯ ಸಂಗೀತದ ರಸದೌತಣವನ್ನು ಸವಿದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ಶ್ಯಾಮಸುಂದರ ದೇಸಾಯಿ, ದಿ ಸವಾಯಿ ಗಂಧರ್ವ ವಿಶ್ವಸ್ಥ…

Read More

ಯಾವುದೇ ಶುಭಕಾರ್ಯ ವಿಶ್ವಕರ್ಮ ಸಮಾಜದಿಂದ ಪ್ರಾರಂಭ: ಶಾಸಕ ಎಂ.ಆರ್.ಪಾಟೀಲ

ಕುಂದಗೋಳ: ಯಾವುದೇ ಶುಭ ಕಾರ್ಯಗಳು ವಿಶ್ವಕರ್ಮ ಸಮುದಾಯದಿಂದಲೇ ಪ್ರಾರಂಭವಾಗುತ್ತವೆ ಎಂದು ಶಾಸಕ ಎಂ.ಆರ್. ಪಾಟೀಲ ಅವರು ಹೇಳಿದರು. ಅವರು ಪಟ್ಟಣದ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಡೆದ ಭಗವಾನ್ ಶ್ರೀ ವಿಶ್ವಕರ್ಮ ಜಯಂತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.ವಿಶ್ವಕರ್ಮ ಸಮುದಾಯದವರು ಶ್ರಮಜೀವಿಗಳು ಮತ್ತು ‘ಕಾಯಕವೇ ಕೈಲಾಸ’ ತತ್ವಕ್ಕೆ ಬದ್ಧರಾಗಿದ್ದಾರೆ. ಅವರು ತಮ್ಮ ಕಾಯಕದಿಂದಲೇ ಜೀವನ ಕಂಡುಕೊಂಡವರು ಎಂದು ಶಾಸಕರು ಶ್ಲಾಘಿಸಿದರು. ನಂತರ ತಹಶೀಲ್ದಾರ್ ರಾಜು ಮಾವರಕರ್ ಮಾತನಾಡಿ, ಕಲೆ ಮತ್ತು ಸಂಸ್ಕೃತಿಯನ್ನು ಉಳಿಸಿ ಬೆಳೆಸುವಲ್ಲಿ ವಿಶ್ವಕರ್ಮ ಸಮುದಾಯದ ಕೊಡುಗೆ…

Read More