ಕಬಡ್ಡಿ ಪಂದ್ಯಾವಳಿ – ರೊಟ್ಟಿಗವಾಡ ಪ್ರೌಢಶಾಲೆ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಕುಂದಗೋಳ: ತಾಲ್ಲೂಕಿನ ರೊಟ್ಟಿಗವಾಡ ಗ್ರಾಮದ ಜಿ.ಕೆ. ಹಿರೇಗೌಡರ ಪ್ರೌಢಶಾಲೆಯ ವಿದ್ಯಾರ್ಥಿಗಳು ತಾಲೂಕು ಮಟ್ಟದ ಕಬಡ್ಡಿ ಪಂದ್ಯಾವಳಿಯಲ್ಲಿ ಅದ್ಭುತ ಪ್ರದರ್ಶನ ನೀಡಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಕಳೆದ ಆ 28ರಂದು ನಡೆದ 17 ವರ್ಷ ವಯೋಮಿತಿಯ ಶಾಲಾ ಕ್ರೀಡಾಕೂಟದಲ್ಲಿ ಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡಗಳು ವಿಜಯ ಸಾಧಿಸುವ ಮೂಲಕ ಧಾರವಾಡ ಜಿಲ್ಲಾ ಮಟ್ಟಕ್ಕೆ ಪ್ರವೇಶ ಪಡೆದಿವೆ. ವಿದ್ಯಾರ್ಥಿಗಳ ಈ ಸಾಧನೆಗೆ ಶಾಲೆಯ ಸಮಿತಿ ಅಧ್ಯಕ್ಷರಾದ ಗಿರೀಶ ಜಿ. ಪಾಟೀಲ, ಆಡಳಿತ ಮಂಡಳಿ ಸದಸ್ಯರು, ಮುಖ್ಯೋಪಾಧ್ಯಾಯ ವಿನಯಕುಮಾರ ಕಬನೂರ,…

Read More

ಗ್ರಾಮ ಪಂಚಾಯಿತಿ ಯೋಜನೆಗಳ ಪ್ರಗತಿ ಪರಿಶೀಲನೆ: ಕರ ವಸೂಲಾತಿ ಕುಂಠಿತಕ್ಕೆ ಧಾರವಾಡ ಜಿ ಪಂ ಸಿಇಒ ಭುವನೇಶ್ವರ ಪಾಟೀಲ ಅಸಮಾಧಾನ

ಧಾರವಾಡ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಭುವನೇಶ್ ಪಾಟೀಲ್ ಅವರು ಗುರುವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಉಪಸ್ಥಿತರಿದ್ದರು. ಸಭೆಯಲ್ಲಿ ಸಿಇಒ ಅವರು ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ ಬಾಕಿ, ಸ್ವಚ್ಛ ಭಾರತ ಮಿಷನ್, ಸಕಾಲ ಸೇವೆಗಳು, ಸಾರ್ವಜನಿಕರ ಕುಂದುಕೊರತೆ ನಿವಾರಣೆ, ತೆರಿಗೆ…

Read More

ಬೆಳೆ ವಿಮೆ ಅವ್ಯವಹಾರ: ಸರ್ಕಾರ, ಅಧಿಕಾರಿಗಳ ವಿರುದ್ಧ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ಹಾಗೂ ರೈತರ ಆಕ್ರೋಶ; ಡಿ.ಸಿ. ಕಚೇರಿ ಎದುರು ರೈತರ ಧರಣಿ

ಧಾರವಾಡ: ಅತಿವೃಷ್ಟಿಯಿಂದ ಬೆಳೆ ಕಳೆದುಕೊಂಡು ಸಂಕಷ್ಟದಲ್ಲಿರುವ ರೈತರಿಗೆ ಪರಿಹಾರ ನೀಡಲು ವಿಳಂಬ ಮಾಡುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಹಾಗೂ ಬೆಳೆ ವಿಮೆಯಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ವಿರುದ್ಧ ಮಾಜಿ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ನೇತೃತ್ವದಲ್ಲಿ ನೂರಾರು ರೈತರು ಜಿಲ್ಲಾಧಿಕಾರಿ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಿದರು. ರಸ್ತೆಯಲ್ಲೇ ಹಾನಿಗೊಂಡ ಹೆಸರು ಕಾಳು ಹಾಗೂ ಉದ್ದು ಬೆಳೆಗಳನ್ನು ಚೆಲ್ಲಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಬೆಳೆ ವಿಮೆಯಲ್ಲಿ ಅಧಿಕಾರಿಗಳ ಮ್ಯಾಚ್ ಫಿಕ್ಸಿಂಗ್’:ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಮಾಜಿ ಸಚಿವ…

Read More

ಕುಂದಗೋಳ ತಹಶೀಲ್ದಾರ ರಾಜು ಮಾವರಕರವರಿಗೆ ಜಿಲ್ಲಾಧಿಕಾರಿಯಿಂದ ಅಭಿನಂದನಾ ಪತ್ರ

ಧಾರವಾಡ: ರಾಜ್ಯ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ‘ಭೂ ಸುರಕ್ಷಾ ಯೋಜನೆ’ಯಡಿ ಭೂ ದಾಖಲೆಗಳ ಸ್ಕ್ಯಾನಿಂಗ್ ಹಾಗೂ ಅಪ್‌ಲೋಡಿಂಗ್ ಪ್ರಗತಿಯಲ್ಲಿ ಉತ್ತಮ ಸಾಧನೆ ಮಾಡಿರುವ ಕುಂದಗೋಳ ತಹಶೀಲ್ದಾರ್ ರಾಜು ಮಾವರಕರ್ ಅವರಿಗೆ ಜಿಲ್ಲಾಧಿಕಾರಿ ಮತ್ತು ಜಿಲ್ಲಾ ದಂಡಾಧಿಕಾರಿ ದಿವ್ಯ ಪ್ರಭು ಜಿ. ಆರ್.ಜೆ ಅವರು ಅಭಿನಂದನಾ ಪತ್ರವನ್ನು ಸಲ್ಲಿಸಿದ್ದಾರೆ. ಆಗಷ್ಟ್ 28 ರಂದು ಜಿಲ್ಲಾಧಿಕಾರಿಗಳ ಕಚೇರಿಯಿಂದ ಬಿಡುಗಡೆಯಾದ ಪತ್ರದಲ್ಲಿ ಈ ಕುರಿತು ಪ್ರಶಂಸೆಯನ್ನು ವ್ಯಕ್ತಪಡಿಸಲಾಗಿದೆ. ಜನವರಿ 1, 2025ರಿಂದ ಆಗಸ್ಟ್ 27, 2025ರ ಅವಧಿಯಲ್ಲಿ ಕುಂದಗೋಳ ತಾಲೂಕು…

Read More

ಬೆನಕನಹಳ್ಳಿ: ಬೈಕ್ ಸ್ಕಿಡ್ ಆಗಿ ಬಿದ್ದು ಮಹಿಳೆ ಸಾವು, ಚಾಲಕನಿಗೆ ಗಾಯ

ಕುಂದಗೋಳ: ಅಜಾಗರೂಕತೆಯ ಚಾಲನೆಯಿಂದಾಗಿ ದ್ವಿಚಕ್ರ ವಾಹನ ಸ್ಕಿಡ್ ಆಗಿ ಬಿದ್ದ ಪರಿಣಾಮ, ಹಿಂಬದಿ ಸವಾರರಾಗಿದ್ದ ಮಹಿಳೆಯೊಬ್ಬರು ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಬೆನಕನಹಳ್ಳಿ-ಮುಳ್ಳಹಳ್ಳಿ ರಸ್ತೆಯಲ್ಲಿ ನಡೆದಿದೆ. ಆಗಸ್ಟ್ 24ರ ರಾತ್ರಿ 8:30ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಘಟನೆ ವಿವರಶಿರಗುಪ್ಪಿ ಗ್ರಾಮದ ಶಿವಕುಮಾರ್ (28) ಎಂಬಾತನು ಕೆಎ-63/ಎಲ್-7661 ಸಂಖ್ಯೆಯ ತನ್ನ ಮೋಟಾರ್‌ಸೈಕಲ್‌ನಲ್ಲಿ ಬೆನಕನಹಳ್ಳಿ ಕಡೆಯಿಂದ ಮುಳ್ಳಹಳ್ಳಿ ಕಡೆಗೆ ವಾಹನ ಚಲಾಯಿಸುತ್ತಿದ್ದನು. ಈ ಸಂದರ್ಭದಲ್ಲಿ ವಾಹನ ನಿಯಂತ್ರಣ ಕಳೆದುಕೊಂಡು ಸ್ಕಿಡ್ ಆಗಿ ರಸ್ತೆಯ ಮೇಲೆ ಬಿದ್ದಿದೆ. ಇದರ ಪರಿಣಾಮ, ಬೈಕ್‌ನ…

Read More

ಕಳ್ಳರ ವಿಫಲ ಯತ್ನ: ಬ್ಯಾಂಕ್ ದರೋಡೆ ಯತ್ನ ವಿಫಲ, ಬೀಟ್ ಪೊಲೀಸರಿಂದ ಕಳ್ಳರು ಪರಾರಿ

ಧಾರವಾಡ: ನಗರದ ಹೃದಯಭಾಗದಲ್ಲಿರುವ ಶ್ರೀನಗರ ಸರ್ಕಲ್ ಬಳಿ ಇರುವ ಕರ್ನಾಟಕ ಬ್ಯಾಂಕ್‌ನಲ್ಲಿ ಕಳ್ಳತನಕ್ಕೆ ಯತ್ನಿಸಿದ ಕಳ್ಳರ ತಂಡವೊಂದು ಪೊಲೀಸರ ಸಮಯಪ್ರಜ್ಞೆಯಿಂದಾಗಿ ವಿಫಲವಾಗಿದೆ. ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಕಳ್ಳರು ಬ್ಯಾಂಕಿನ ಶಟರ್ ಮುರಿಯುವ ಪ್ರಯತ್ನದಲ್ಲಿರುವಾಗಲೇ ಪೊಲೀಸರು ಸ್ಥಳಕ್ಕೆ ಬಂದಿದ್ದರಿಂದ ದರೋಡೆ ತಪ್ಪಿದೆ. ಗಣೇಶ ಹಬ್ಬದ ಕಾರಣ ನಗರದಲ್ಲಿ ತಡರಾತ್ರಿಯವರೆಗೂ ಜನರ ಓಡಾಟ ಇತ್ತು. ಆದರೂ, ಕಳ್ಳರು ಈ ಕೃತ್ಯಕ್ಕೆ ಕೈ ಹಾಕಿದ್ದು ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಕಳ್ಳತನದ ಯತ್ನದ ಕುರಿತು ಬ್ಯಾಂಕ್ ಅಧಿಕಾರಿಗಳಿಗೆ ಪೊಲೀಸರೇ ಮಾಹಿತಿ…

Read More

ಗಣೇಶ-ಈದ್ ಮಿಲಾದ್: ಹಬ್ಬದ ನಿಮಿತ್ತ ಧಾರವಾಡ ಜಿಲ್ಲಾದ್ಯಂತ ಮದ್ಯ ಮಾರಾಟ ನಿಷೇಧ

ಧಾರವಾಡ: ಗಣೇಶ ಚತುರ್ಥಿ ಮತ್ತು ಈದ್-ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಧಾರವಾಡ ಜಿಲ್ಲೆಯಾದ್ಯಂತ (ಹುಬ್ಬಳ್ಳಿ-ಧಾರವಾಡ ಮಹಾನಗರ ಹೊರತುಪಡಿಸಿ) ಮದ್ಯ ಮಾರಾಟ ಮತ್ತು ಸಾಗಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ದಿವ್ಯಾ ಪ್ರಭು ಆದೇಶ ಹೊರಡಿಸಿದ್ದಾರೆ. ಈ ಆದೇಶದ ಪ್ರಕಾರ, ಆಗಸ್ಟ್ 26ರ ರಾತ್ರಿ 11:59 ರಿಂದ ಆಗಸ್ಟ್ 28ರ ಬೆಳಿಗ್ಗೆ 6:00 ಗಂಟೆಯವರೆಗೆ, ಆಗಸ್ಟ್ 28ರ ರಾತ್ರಿ 11:59 ರಿಂದ ಆಗಸ್ಟ್ 30ರ ಬೆಳಿಗ್ಗೆ 6:00 ಗಂಟೆಯವರೆಗೆ, ಆಗಸ್ಟ್ 30ರ ರಾತ್ರಿ 11:59 ರಿಂದ…

Read More

‘ಇಂದು ಧರ್ಮಸ್ಥಳ, ನಾಳೆ ಮುರುಘಾಮಠ’: ಎಸ್‌ಐಟಿ ತನಿಖೆ ವಿರುದ್ಧ ಪಾಲಿಕೆ ಸದಸ್ಯ ರಾಮಣ್ಣ ಕೋರವಿ ಆಕ್ರೋಶ

ಧಾರವಾಡ: ಧರ್ಮಸ್ಥಳದ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ ಧಾರವಾಡದಲ್ಲಿ ಬಿಜೆಪಿ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಧರ್ಮಸ್ಥಳಕ್ಕೆ ಈಗ ಬಂದಿರುವ ಪರಿಸ್ಥಿತಿ ನಾಳೆ ಧಾರವಾಡದ ಮುರುಘಾಮಠ, ಉಳವಿ ಚೆನ್ನಬಸವೇಶ್ವರ ದೇಗುಲ ಮತ್ತು ಸಿದ್ಧಾರೂಢ ಮಠಕ್ಕೂ ಬರಬಹುದು ಎಂದು ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಎಚ್ಚರಿಕೆ ನೀಡಿದರು. ಸರ್ಕಾರಕ್ಕೆ ರಾಜಣ್ಣ ಕೊರವಿ ಪ್ರಶ್ನೆಧಾರವಾಡದಲ್ಲಿ ಮಾತನಾಡಿದ ರಾಜಣ್ಣ ಕೊರವಿ, “ಧರ್ಮಸ್ಥಳದಲ್ಲಿ ಈಗಾಗಲೇ ಹಲವು ‘ಎಪಿಸೋಡ್‌’ಗಳು ಮುಗಿದಿವೆ. ನಮ್ಮ ಗೃಹ ಸಚಿವರು ಶೇ. 80ರಷ್ಟು ತನಿಖೆ ಮುಗಿದಿದೆ ಎನ್ನುತ್ತಾರೆ. ಅಡುಗೆ ಮಾಡುವವನಿಗೆ…

Read More

ಒಳ ಮೀಸಲಾತಿ: ಸೂಕ್ಷ್ಮ ಮತ್ತು ಅಲೆಮಾರಿ ಜಾತಿಗಳಿಗೆ ನ್ಯಾಯ ಒದಗಿಸಲು ಆಗ್ರಹ

ಧಾರವಾಡ: ಕರ್ನಾಟಕ ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ವಿಚಾರದಲ್ಲಿ, ಸೂಕ್ಷ್ಮ ಮತ್ತು ಅಲೆಮಾರಿ ಜಾತಿಗಳಿಗೆ ನ್ಯಾಯ ಒದಗಿಸಬೇಕು ಎಂದು ಆಗ್ರಹಿಸಿ ಅಖಿಲ ಕರ್ನಾಟಕ ಸುಡುಗಾಡು ಸಿದ್ಧರ ಮಹಾಸಂಘದ ಜಿಲ್ಲಾ ಘಟಕದ ನೇತೃತ್ವದಲ್ಲಿ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಬೃಹತ್ ಪ್ರತಿಭಟನೆ ನಡೆಯಿತು. ಕಲಾಭವನ ಮೈದಾನದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು, ಸರ್ಕಾರದ ಒಳ ಮೀಸಲಾತಿ ತೀರ್ಮಾನವು 59 ಸೂಕ್ಷ್ಮ ಮತ್ತು ಅಲೆಮಾರಿ ಪರಿಶಿಷ್ಟ ಜಾತಿಗಳ ಸಮುದಾಯಕ್ಕೆ ಆಘಾತ ಉಂಟು ಮಾಡಿದೆ ಎಂದು ಆರೋಪಿಸಿದರು. ಸರ್ಕಾರದ…

Read More

ಜಿಲ್ಲೆಯಲ್ಲಿ ಪಿಒಪಿ ಗಣೇಶ ವಿಗ್ರಹಗಳ ಮಾರಾಟ, ಬಳಕೆಗೆ ಸಂಪೂರ್ಣ ನಿಷೇಧ: ಡಿ ಸಿ ದಿವ್ಯ ಪ್ರಭು

ಧಾರವಾಡ: ಜಿಲ್ಲೆಯಲ್ಲಿ ಪ್ಲಾಸ್ಟರ್ ಆಫ್ ಪ್ಯಾರೀಸ್ (ಪಿಒಪಿ) ಗಣೇಶ ವಿಗ್ರಹಗಳ ತಯಾರಿಕೆ, ಮಾರಾಟ, ಸಂಗ್ರಹಣೆ ಹಾಗೂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ತಿಳಿಸಿದ್ದಾರೆ. ನಿಷೇಧವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ಜಿಲ್ಲಾಡಳಿತವು ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಅವರು ಹೇಳಿದ್ದಾರೆ. ಸಾರ್ವಜನಿಕ ಸಹಕಾರ ಅಗತ್ಯಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಜಿಲ್ಲಾಧಿಕಾರಿ, “ಹಬ್ಬ ಪರಿಸರ ಸ್ನೇಹಿಯಾಗಿರಬೇಕು. ಮಣ್ಣು ಮತ್ತು ನೈಸರ್ಗಿಕ ಬಣ್ಣಗಳಿಂದ ತಯಾರಿಸಿದ, ನೀರಿನಲ್ಲಿ ಸುಲಭವಾಗಿ ಕರಗುವ ಗಣೇಶ ವಿಗ್ರಹಗಳನ್ನೇ ಪೂಜಿಸಬೇಕು. ಸಾರ್ವಜನಿಕರ ಸಹಕಾರವಿಲ್ಲದೆ ಪಿಒಪಿ…

Read More