ಧಾರವಾಡ ಜಿಲ್ಲೆಯಲ್ಲಿ ಮಳೆ ಅಬ್ಬರ: 20 ಮನೆಗಳಿಗೆ ಹಾನಿ, ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ
ಧಾರವಾಡ: ಜಿಲ್ಲೆಯಲ್ಲಿ ಕಳೆದ 24 ಗಂಟೆಗಳಲ್ಲಿ ಸುರಿದ ಭಾರೀ ಮಳೆಯಿಂದಾಗಿ ಒಟ್ಟು 20 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರ ಪ್ರಕಟಣೆಯಲ್ಲಿ ತಿಳಿಸಿದೆ. ಮಳೆಯಿಂದಾಗಿ ಧಾರವಾಡ ನಗರದಲ್ಲಿ 1, ಹುಬ್ಬಳ್ಳಿಯಲ್ಲಿ 16 ಮತ್ತು ಕುಂದಗೋಳದಲ್ಲಿ 3 ಮನೆಗಳಿಗೆ ಹಾನಿಯಾಗಿದೆ. ಈ ಘಟನೆಯಲ್ಲಿ ಯಾವುದೇ ಮಾನವ ಅಥವಾ ಜಾನುವಾರುಗಳಿಗೆ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಪ್ರಾಥಮಿಕ ಸಮೀಕ್ಷೆಯಿಂದ ತಿಳಿದುಬಂದಿದೆ. ಬೆಳೆ ಹಾನಿಯ ಕುರಿತಂತೆ ಕೃಷಿ ಇಲಾಖೆ ಅಧಿಕಾರಿಗಳು ಜಂಟಿ ಸಮೀಕ್ಷೆ ನಡೆಸುತ್ತಿದ್ದು, ವರದಿ ಸಿದ್ಧಪಡಿಸುತ್ತಿದ್ದಾರೆ….

