ಧಾರವಾಡದಲ್ಲಿ ಭಾರೀ ಮಳೆ: ಧರೆಗೆ ಮರ ಉರುಳಿ 8 ಕಾರು ಜಖಂ, ಅದೃಷ್ಟವಶಾತ್ ಪ್ರಾಣಹಾನಿ ಇಲ್ಲ

ಧಾರವಾಡ: ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಸೋಮವಾರದಂದು ರಾತ್ರಿ ವೇಳೆಯಲ್ಲಿ ಧಾರವಾಡದ ರೈಲು ನಿಲ್ದಾಣದ ರಸ್ತೆಯಲ್ಲಿರುವ ಬೃಂದಾವನ ಹೋಟೆಲ್ ಬಳಿ ಬೃಹತ್ ಮರವೊಂದು ಧರೆಗೆ ಉರುಳಿದೆ. ಈ ಘಟನೆಯಿಂದಾಗಿ ಸುಮಾರು 8 ಕಾರುಗಳು ಜಖಂಗೊಂಡಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆಯ ವಿವರಗಳುನಗರದಲ್ಲಿ ಕಳೆದ ಕೆಲ ದಿನಗಳಿಂದ ಧಾರಾಕಾರ ಮಳೆ ಸುರಿಯುತ್ತಿದೆ. ಮಳೆಯ ರಭಸಕ್ಕೆ ಮಣ್ಣು ಸಡಿಲಗೊಂಡು ಮರ ನೆಲಕ್ಕುರುಳಿದೆ ಎನ್ನಲಾಗಿದೆ. ಮರ ಬಿದ್ದ ತಕ್ಷಣ ಅದರ ಬುಡದಲ್ಲಿ ನಿಲ್ಲಿಸಿದ್ದ ಅನೇಕ ಕಾರುಗಳು…

Read More

ಧಾರವಾಡ ಜಿಲ್ಲೆಯಲ್ಲಿ ಹೆಚ್ಚಿನ ಮಳೆ: ಅಂಗನವಾಡಿ, ಶಾಲೆ, ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಧಾರವಾಡ: ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ನಿರಂತರ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಆರೋಗ್ಯ ಹಾಗೂ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆ, ಆಗಸ್ಟ್ 19 ರಂದು, ಜಿಲ್ಲೆಯ ಎಲ್ಲ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಮಹಾವಿದ್ಯಾಲಯಗಳಿಗೆ ಒಂದು ದಿನದ ರಜೆ ಘೋಷಿಸಲಾಗಿದೆ. ಈ ಕುರಿತು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಸೋಮವಾರದಂದು (ಇಂದು) ಆದೇಶ ಹೊರಡಿಸಿದ್ದಾರೆ. ಮಳೆಯಿಂದಾಗಿ ಉಂಟಾಗಬಹುದಾದ ತೊಂದರೆಗಳನ್ನು ತಪ್ಪಿಸುವ ನಿಟ್ಟಿನಲ್ಲಿ ಈ ಮುಂಜಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ಈ ರಜಾದಿನವನ್ನು ಮುಂದಿನ…

Read More

ಗುಡೇನಕಟ್ಟಿಯಲ್ಲಿ ಬಸವಣ್ಣ ಜಾತ್ರೆ: ಹಲವಾರು ಭಕ್ತರ ಸಮ್ಮುಖದಲ್ಲಿ ರಥೋತ್ಸವ ಸಂಭ್ರಮ

ಕುಂದಗೋಳ: ತಾಲ್ಲೂಕಿನ ಗುಡೇನಕಟ್ಟಿ ಗ್ರಾಮದ ಶ್ರೀ ಮಾರುತಿ ದೇವಸ್ಥಾನದಲ್ಲಿ ಶ್ರಾವಣ ಮಾಸದ ಕಡೆ ಸೋಮವಾರದಂದು ನಡೆದ ಶ್ರೀ ಬಸವಣ್ಣನವರ ಜಾತ್ರಾ ಮಹೋತ್ಸವವು ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು. ಜಾತ್ರಾ ಕಾರ್ಯಕ್ರಮದ ನಿಮಿತ್ತ 24 ಗಂಟೆಗಳ ಕಾಲ ನಿರಂತರ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಸಾಯಂಕಾಲ ನಡೆದ ರಥೋತ್ಸವದಲ್ಲಿ ‘ಹರ ಹರ ಮಹಾದೇವ’ ಎಂಬ ನಾಮಘೋಷಗಳೊಂದಿಗೆ ಭಕ್ತರು ರಥವನ್ನು ಎಳೆದು ಭಕ್ತಿ ಸಮರ್ಪಿಸಿದರು. ಗ್ರಾಮದ ಶ್ರೀ ಮಾರುತಿ ದೇವಸ್ಥಾನದಿಂದ ಪ್ರಾರಂಭಗೊಂಡ ರಥೋತ್ಸವವು ಶಾಲಾ ಆವರಣದವರೆಗೆ ಸಾಗಿತು. ಭಕ್ತರು ತಮ್ಮ…

Read More

ಶರೀಫ ಶಿವಯೋಗಿ ಜಾತ್ರಾ ಮಹೋತ್ಸವ: ಸಂಭ್ರಮದ ರಥೋತ್ಸವಕ್ಕೆ ಚನ್ನಬಸವ ದೇವರು ಚಾಲನೆ

ಕುಂದಗೋಳ: ತಾಲ್ಲೂಕಿನ ಸಂಶಿ ಗ್ರಾಮದಲ್ಲಿ ಶ್ರಾವಣ ಮಾಸದ ನಿಮಿತ್ತ ಸೋಮವಾರದಂದು ಇಲ್ಲಿನ ಶ್ರೀ ಶರೀಫ ಶಿವಯೋಗಿ ಜಾತ್ರಾ ಮಹೋತ್ಸವದ ಅಂಗವಾಗಿ ನಡೆದ ರಥೋತ್ಸವಕ್ಕೆ ವಿರಕ್ತಮಠದ ಚನ್ನಬಸವ ದೇವರು ಅವರು ಭಕ್ತಿಪೂರ್ವಕವಾಗಿ ಚಾಲನೆ ನೀಡಿದರು. ಹಲಾವಾರು ಭಕ್ತರ ಸಮ್ಮುಖದಲ್ಲಿ ನಡೆದ ಈ ರಥೋತ್ಸವವು, ಜಯಘೋಷಗಳು ಮತ್ತು ಭಜನೆಗಳೊಂದಿಗೆ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಭಕ್ತರು ರಥಕ್ಕೆ ಹೂವು, ಹಣ್ಣುಗಳನ್ನು ಅರ್ಪಿಸಿ ತಮ್ಮ ಭಕ್ತಿ ಸಮರ್ಪಿಸಿದರು. ಧಾರ್ಮಿಕ ವಿಧಿವಿಧಾನಗಳೊಂದಿಗೆ ನಡೆದ ಈ ರಥೋತ್ಸವದಲ್ಲಿ ಜಾತಿ-ಮತ ಭೇದವಿಲ್ಲದೆ ಸಕಲ ಭಕ್ತರೂ ಪಾಲ್ಗೊಂಡಿದ್ದರು….

Read More

ಸಹಕಾರಿ ಕ್ಷೇತ್ರದಿಂದ ಸರ್ವಾಂಗೀಣ ಅಭಿವೃದ್ಧಿ ಸಾಧ್ಯ: ಯಲ್ಲಪ್ಪ ಹೆಬಸೂರ

ಕುಂದಗೋಳ: ಸಹಕಾರಿ ಕ್ಷೇತ್ರವು ತನ್ನ ನಿಸ್ವಾರ್ಥ, ಪ್ರಾಮಾಣಿಕ ಮತ್ತು ಶ್ರದ್ಧಾಪೂರ್ವಕ ಸೇವೆಯಿಂದ ಸರ್ವಾಂಗೀಣ ಅಭಿವೃದ್ಧಿ ಸಾಧಿಸಿದೆ ಎಂದು ಧಾರವಾಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷ ಯಲ್ಲಪ್ಪ ಆರ್. ಹೆಬಸೂರ ಅಭಿಪ್ರಾಯಪಟ್ಟರು. .ಧಾರವಾಡ ಜಿಲ್ಲಾ ಸಹಕಾರ ಯೂನಿಯನ್ ಆಯೋಜಿಸಿದ್ದ ತಾಲ್ಲೂಕಿನ ಪ್ರಾಥಮಿಕ ಪತ್ತಿನ ಸಹಕಾರ ಸಂಘಗಳ ಜಿಲ್ಲಾ ಮಟ್ಟದ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ.ಜನಸೇವೆಗೆ ಸಹಕಾರಿ ಕ್ಷೇತ್ರಕ್ಕೆ ಒಂದು ಸಾರ್ಥಕ ಇತಿಹಾಸವಿದೆ ಎಂದು ಅವರು ಹೇಳಿದರು ಕಾರ್ಯಕ್ರಮವನ್ನು ಉದ್ಘಾಟಿಸಿದ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳದ ನಿರ್ದೇಶಕ ಬಾಪುಗೌಡ…

Read More

ಕುಂದಗೋಳ ತಾಲ್ಲೂಕು ಆಸ್ಪತ್ರೆಗೆ ಮಾನವ ಹಕ್ಕುಗಳ ಆಯೋಗದ ನ್ಯಾಯಿಕ ಸದಸ್ಯರಾದ ಎಸ್ ಕೆ ವಂಟಿಗೋಡಿ ಭೇಟಿ: ಕಾರ್ಯವೈಖರಿಗೆ ಮೆಚ್ಚುಗೆ

ಕುಂದಗೋಳ: ಕರ್ನಾಟಕ ರಾಜ್ಯ ಮಾನವ ಹಕ್ಕುಗಳ ಆಯೋಗದ ನ್ಯಾಯಿಕ ಸದಸ್ಯರಾದ ಎಸ್. ಕೆ. ವಂಟಿಗೋಡಿ ಅವರು ಪಟ್ಟಣದ ತಾಲ್ಲೂಕು ಆರೋಗ್ಯ ಆಸ್ಪತ್ರೆಗೆ ಶುಕ್ರವಾರದಂದು ಭೇಟಿ ನೀಡಿ, ಅಲ್ಲಿನ ಸೌಲಭ್ಯಗಳು ಮತ್ತು ಆಸ್ಪತ್ರೆಯ ಕಾರ್ಯವೈಖರಿಯನ್ನು ಪರಿಶೀಲಿಸಿದರು. ವಿದ್ಯಾರ್ಥಿ ನಿಲಯಗಳ ಪರಿಶೀಲನೆ:ತಾಲ್ಲೂಕು ಆಸ್ಪತ್ರೆಯ ಪರಿಶೀಲನೆಯ ನಂತರ, ವಂಟಿಗೋಡಿ ಅವರು ಪಟ್ಟಣದಲ್ಲಿರುವ ಅಲ್ಪಸಂಖ್ಯಾತ ಇಲಾಖೆಯ ವಸತಿ ನಿಲಯ ಮತ್ತು ಹಿಂದುಳಿದ ವರ್ಗಗಳ ಇಲಾಖೆಯ ವಸತಿ ನಿಲಯಕ್ಕೂ ಭೇಟಿ ನೀಡಿದರು. ಅಲ್ಲಿನ ವಿದ್ಯಾರ್ಥಿಗಳೊಂದಿಗೆ ಮಾತನಾಡಿ, ವಸತಿ ನಿಲಯದಲ್ಲಿ ಲಭ್ಯವಿರುವ ಮೂಲಭೂತ ಸೌಕರ್ಯಗಳು ಮತ್ತು…

Read More

ಪಿಒಪಿ ಗಣೇಶ ಮೂರ್ತಿ ತಯಾರಿಕಾ ಕೇಂದ್ರಗಳ ಮೇಲೆ ಟಾಸ್ಕ್ ಫೋರ್ಸ್ ದಾಳಿ, ಸಂಶಾತ್ಮಕವಾಗಿ ಇರುವ 10 ಮೂರ್ತಿಗಳ ವಶ ಮಾದರಿ ಪರಿಶೀಲನೆಗೆ ರವಾನೆ

ಪಿಒಪಿ ಗಣೇಶ ಮೂರ್ತಿ ತಯಾರಿಕಾ ಕೇಂದ್ರಗಳ ಮೇಲೆ ಟಾಸ್ಕ್ ಫೋರ್ಸ್ ದಾಳಿ, ಸಂಶಾತ್ಮಕವಾಗಿ ಇರುವ 10 ಮೂರ್ತಿಗಳ ವಶ ಮಾದರಿ ಪರಿಶೀಲನೆಗೆ ರವಾನೆ ಕುಂದಗೋಳ: ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿಒಪಿ) ಗಣೇಶ ಮೂರ್ತಿಗಳ ತಯಾರಿಕೆ ಮತ್ತು ಮಾರಾಟವನ್ನು ತಡೆಯಲು ಕುಂದಗೋಳ ತಾಲ್ಲೂಕು ಆಡಳಿತ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡಿದೆ. ತಹಶೀಲ್ದಾರ ರಾಜು ಮಾವರಕರ, ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಿ. ವಿ. ಕುಲಕರ್ಣಿ, ಸಿಪಿಐ ಶಿವಾನಂದ ಅಂಬಿಗೇರ ಸೇರಿದಂತೆ ವಿವಿಧ ಅಧಿಕಾರಿಗಳಿದ್ದ ಟಾಸ್ಕ್ ಫೋರ್ಸ್ ತಂಡವು…

Read More

ಇಂದು ಛಬ್ಬಿ ಗ್ರಾಮದಲ್ಲಿ ನೂತನ ಸರ್ಕಾರಿ ಪ್ರೌಢ ಶಾಲೆ ಉದ್ಘಾಟನೆ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ ಭಾಗಿ,

ಛಬ್ಬಿ ಗ್ರಾಮದಲ್ಲಿ ನೂತನ ಸರ್ಕಾರಿ ಪ್ರೌಢಶಾಲೆ ಉದ್ಘಾಟನೆ: ಪ್ರಹ್ಲಾದ್ ಜೋಶಿ, ಮಧು ಬಂಗಾರಪ್ಪ ಭಾಗಿ ಹುಬ್ಬಳ್ಳಿ: ತಾಲ್ಲೂಕಿನ ಛಬ್ಬಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಸರ್ಕಾರಿ ಪ್ರೌಢಶಾಲೆಯ ಉದ್ಘಾಟನಾ ಸಮಾರಂಭವನ್ನು ಇಂದು ಬೆಳಿಗ್ಗೆ 11ಕ್ಕೆ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಈ ಸಮಾರಂಭದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರದ ಹಲವು ಸಚಿವರು ಹಾಗೂ ಪ್ರಮುಖ ಗಣ್ಯರು ಭಾಗವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರದ ಗ್ರಾಹಕರ ವ್ಯವಹಾರಗಳ, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ್ ಜೋಶಿ ಮತ್ತು…

Read More

ಕುಂದಗೋಳ ಪಟ್ಟಣದ ಸ್ವಚ್ಛತೆ, ನೀರು ಮತ್ತು ಬೀದಿ ದೀಪಗಳ ಸಮಸ್ಯೆಗೆ ಸಾಮಾಜಿಕ ಜಾಲತಾಣ ಆಧಾರಿತ ಪರಿಹಾರ: ಶಾಸಕ ಎಂ.ಆರ್. ಪಾಟೀಲ್

ಕುಂದಗೋಳ ಪಟ್ಟಣ ಸ್ವಚ್ಛತೆ, ನೀರು ಮತ್ತು ಬೀದಿ ದೀಪಗಳ ಸಮಸ್ಯೆಗೆ ಸಾಮಾಜಿಕ ಜಾಲತಾಣ ಆಧಾರಿತ ಪರಿಹಾರ: ಶಾಸಕ ಎಂ.ಆರ್. ಪಾಟೀಲ್ ಕುಂದಗೋಳ: ಪಟ್ಟಣದಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವ ಹೊಸ ಯೋಜನೆಯನ್ನು ಶಾಸಕ ಎಂ.ಆರ್. ಪಾಟೀಲ್ ಅವರು ಶ್ಲಾಘಿಸಿದರು. ಅವರು ಶುಕ್ರವಾರದಂದು ಪಟ್ಟಣ ಪಂಚಾಯಿತಿ (ಪಪಂ) ಯಲ್ಲಿ “ಸ್ವಚ್ಛ ಭಾರತ ಮಿಷನ್ 2.0″ ಅಡಿಯಲ್ಲಿ ಈ ಹೊಸ ಸಾಮಾಜಿಕ ಜಾಲತಾಣ ಆಧರಿತ ಕಂಟ್ರೋಲ್ ರೂಂ ಅನ್ನು ಉದ್ಘಾಟಿಸಿ ಮಾತನಾಡಿ ಆಧುನಿಕ…

Read More

ಕುಂದಗೋಳ ಪಟ್ಟಣ ಸ್ವಚ್ಛತೆ, ನೀರು ಮತ್ತು ಬೀದಿ ದೀಪಗಳ ಸಮಸ್ಯೆಗೆ ಸಾಮಾಜಿಕ ಜಾಲತಾಣ ಆಧಾರಿತ ಪರಿಹಾರ: ಶಾಸಕ ಎಂ.ಆರ್. ಪಾಟೀಲ್

ಕುಂದಗೋಳ ಪಟ್ಟಣ ಸ್ವಚ್ಛತೆ, ನೀರು ಮತ್ತು ಬೀದಿ ದೀಪಗಳ ಸಮಸ್ಯೆಗೆ ಸಾಮಾಜಿಕ ಜಾಲತಾಣ ಆಧಾರಿತ ಪರಿಹಾರ: ಶಾಸಕ ಎಂ.ಆರ್. ಪಾಟೀಲ್ ಕುಂದಗೋಳ: ಪಟ್ಟಣದಲ್ಲಿ ಸ್ವಚ್ಛತೆ ಮತ್ತು ಮೂಲಭೂತ ಸೌಕರ್ಯಗಳ ಸಮಸ್ಯೆಗಳನ್ನು ಪರಿಹರಿಸಲು ಸಾಮಾಜಿಕ ಜಾಲತಾಣಗಳನ್ನು ಬಳಸಿಕೊಳ್ಳುವ ಹೊಸ ಯೋಜನೆಯನ್ನು ಶಾಸಕ ಎಂ.ಆರ್. ಪಾಟೀಲ್ ಅವರು ಶ್ಲಾಘಿಸಿದರು. ವಅವರು ಶುಕ್ರವಾರದಂದು ಪಟ್ಟಣ ಪಂಚಾಯಿತಿ (ಪಪಂ) ಯಲ್ಲಿ “ಸ್ವಚ್ಛ ಭಾರತ ಮಿಷನ್ 2.0″ ಅಡಿಯಲ್ಲಿ ಈ ಹೊಸ ಸಾಮಾಜಿಕ ಜಾಲತಾಣ ಆಧರಿತ ಕಂಟ್ರೋಲ್ ರೂಂ ಅನ್ನು ಉದ್ಘಾಟಿಸಿ ಮಾತನಾಡಿ ಆಧುನಿಕ…

Read More