ಸಪ್ತಾಪುರ ಹಾಸ್ಟೆಲ್‌ಗೆ ಮೂಲ ಸೌಕರ್ಯ: ಎಐಡಿಎಸ್‌ಓ ಪ್ರತಿಭಟನೆ
ಧಾರವಾಡ,: ನಗರದ ಸಪ್ತಾಪುರದಲ್ಲಿರುವ ಪರಿಶಿಷ್ಟ ಪಂಗಡದ ಬಾಲಕರ ಹಾಸ್ಟೆಲ್‌ಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಆಗ್ರಹಿಸಿ ಅಖಿಲ ಭಾರತ ಪ್ರಜಾಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಓ) ನೇತೃತ್ವದಲ್ಲಿ ವಿದ್ಯಾರ್ಥಿಗಳು ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರದಂದು ಪ್ರತಿಭಟನೆ ನಡೆಸಿದರು. ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದ ಎಐಡಿಎಸ್‌ಓ ಜಿಲ್ಲಾ ಕಾರ್ಯದರ್ಶಿ ಶಶಿಕಲಾ ಮೇಟಿ, “ವಿದ್ಯಾಕಾಶಿ ಎಂದು ಹೆಸರು ಪಡೆದ ಧಾರವಾಡದಲ್ಲಿ ಪ್ರತಿ ವರ್ಷ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣಕ್ಕಾಗಿ ಬರುತ್ತಿದ್ದಾರೆ. ಆದರೆ, ಅವರಿಗೆ ವಸತಿ ಸೌಲಭ್ಯ ದೊರೆಯುತ್ತಿಲ್ಲ. ವಸತಿ ದೊರೆತರೂ ಹಾಸ್ಟೆಲ್‌ಗಳಲ್ಲಿ ಗುಣಮಟ್ಟದ ಆಹಾರ…

