ಸೆ:13 ರಂದು ಲೋಕ ಅದಾಲತ್ ಹಾಗೂ ಸಂಚಾರಿ ದಂಡ ರಿಯಾಯಿತಿ ಸದ್ಬಳಕೆಗೆ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಬಿ. ಎಸ್ ಭಾರತಿ ಕರೆ
ಧಾರವಾಡ: ಸೆಪ್ಟೆಂಬರ್ 13 ರಂದು ನಡೆಯಲಿರುವ ರಾಷ್ಟ್ರೀಯ ಲೋಕ ಅದಾಲತ್ ಕಾರ್ಯಕ್ರಮವನ್ನು ಕಕ್ಷಿದಾರರು ಮತ್ತು ನ್ಯಾಯವಾದಿಗಳು ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷೆ ಬಿ.ಎಸ್. ಭಾರತಿ ಅವರು ತಿಳಿಸಿದ್ದಾರೆ. ಜೊತೆಗೆ, ಸಂಚಾರ ನಿಯಮ ಉಲ್ಲಂಘನೆಗಾಗಿ ವಿಧಿಸಲಾಗಿರುವ ದಂಡದ ಮೊತ್ತದಲ್ಲಿ ಶೇ. 50 ರಿಯಾಯಿತಿಯನ್ನು ಬಳಸಿಕೊಂಡು ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಜಿಲ್ಲಾ ನ್ಯಾಯಾಲಯದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ಆದೇಶದ ಮೇರೆಗೆ…

