ಗ್ರಾಮ ಪಂಚಾಯಿತಿ ಯೋಜನೆಗಳ ಪ್ರಗತಿ ಪರಿಶೀಲನೆ: ಕರ ವಸೂಲಾತಿ ಕುಂಠಿತಕ್ಕೆ ಧಾರವಾಡ ಜಿ ಪಂ ಸಿಇಒ ಭುವನೇಶ್ವರ ಪಾಟೀಲ ಅಸಮಾಧಾನ
ಧಾರವಾಡ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಭುವನೇಶ್ ಪಾಟೀಲ್ ಅವರು ಗುರುವಾರದಂದು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಸಭೆಯಲ್ಲಿ ಎಲ್ಲಾ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಉಪಸ್ಥಿತರಿದ್ದರು. ಸಭೆಯಲ್ಲಿ ಸಿಇಒ ಅವರು ಗ್ರಾಮ ಪಂಚಾಯಿತಿಗಳ ವಿದ್ಯುತ್ ಬಿಲ್ ಬಾಕಿ, ಸ್ವಚ್ಛ ಭಾರತ ಮಿಷನ್, ಸಕಾಲ ಸೇವೆಗಳು, ಸಾರ್ವಜನಿಕರ ಕುಂದುಕೊರತೆ ನಿವಾರಣೆ, ತೆರಿಗೆ…

