ಧಾರವಾಡ: ಅಕ್ರಮ ಚಟುವಟಿಕೆಗಳಿಗೆ ಪೊಲೀಸರ ಫಂಡಿಂಗ್ – ಕೆಡಿಪಿ ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸ್ಫೋಟಕ ಆರೋಪ

ಧಾರವಾಡ: ಕಿತ್ತೂರಿನ ಐ.ಬಿ.ಯಲ್ಲಿ ಮಂಗಳವಾರ ದಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯು ತೀವ್ರ ಸಂಚಲನಕ್ಕೆ ಕಾರಣವಾಯಿತು. ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುವ ವೇಳೆ, ಧಾರವಾಡ ಗ್ರಾಮೀಣ ಭಾಗದ ಶಾಸಕ ವಿನಯ್ ಕುಲಕರ್ಣಿ ಅವರು ಪೊಲೀಸ್ ಇಲಾಖೆಯ ವಿರುದ್ಧ ಕಿಡಿಕಾರುವ ಮೂಲಕ ಅಧಿಕಾರಿಗಳಿಗೆ ಚಾಟಿ ಬೀಸಿದರು. ಗ್ರಾಮೀಣ ಭಾಗದಲ್ಲಿ ಅಕ್ರಮ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿದ್ದರೂ ಪೊಲೀಸರು ಮೌನವಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇಲಾಖೆಯ ಒಳಗಿನ ಕರಾಳ ಮುಖವನ್ನು…

Read More

​ಧಾರವಾಡ: ಅಕ್ರಮ ಚಟುವಟಿಕೆಗಳಿಗೆ ಪೊಲೀಸರ ಫಂಡಿಂಗ್ – ಕೆಡಿಪಿ ಸಭೆಯಲ್ಲಿ ಶಾಸಕ ವಿನಯ್ ಕುಲಕರ್ಣಿ ಸ್ಫೋಟಕ ಆರೋಪ

ಧಾರವಾಡ: ಕಿತ್ತೂರಿನ ಐ.ಬಿ.ಯಲ್ಲಿ ಇಂದು ನಡೆದ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ಪ್ರಗತಿ ಪರಿಶೀಲನಾ ಸಭೆಯು ತೀವ್ರ ಸಂಚಲನಕ್ಕೆ ಕಾರಣವಾಯಿತು. ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸುವ ವೇಳೆ, ಧಾರವಾಡ ಗ್ರಾಮೀಣ ಭಾಗದ ಶಾಸಕ ವಿನಯ್ ಕುಲಕರ್ಣಿ ಅವರು ಪೊಲೀಸ್ ಇಲಾಖೆಯ ವಿರುದ್ಧ ಕಿಡಿಕಾರುವ ಮೂಲಕ ಅಧಿಕಾರಿಗಳಿಗೆ ಚಾಟಿ ಬೀಸಿದರು. ಗ್ರಾಮೀಣ ಭಾಗದಲ್ಲಿ ಅಕ್ರಮ ಚಟುವಟಿಕೆಗಳು ಅವ್ಯಾಹತವಾಗಿ ನಡೆಯುತ್ತಿದ್ದರೂ ಪೊಲೀಸರು ಮೌನವಾಗಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಅವರು, ಇಲಾಖೆಯ ಒಳಗಿನ ಕರಾಳ ಮುಖವನ್ನು ಸಭೆಯಲ್ಲಿ…

Read More

ಸಹಕಾರ ಕ್ಷೇತ್ರವು ಕೇವಲ ಲಾಭಕ್ಕಾಗಿ ಅಲ್ಲ, ಜನಸೇವೆಗಾಗಿ ಇದೆ: ಎ.ಬಿ. ಉಪ್ಪಿನ ಪ್ರತಿಪಾದನೆ

ಧಾರವಾಡ:ಸಹಕಾರ ಕ್ಷೇತ್ರವು ಕೇವಲ ಆರ್ಥಿಕ ಲಾಭ ಗಳಿಸುವ ಉದ್ದೇಶಕ್ಕೆ ಸೀಮಿತವಾಗಿಲ್ಲ, ಬದಲಿಗೆ ಅದು ಸಾಮಾನ್ಯ ಜನರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ ಇರುವ ಒಂದು ಅದ್ಭುತ ವೇದಿಕೆಯಾಗಿದೆ ಎಂದು ಸಂಶಿ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ ಅಧ್ಯಕ್ಷ ಎ.ಬಿ. ಉಪ್ಪಿನ ಅಭಿಪ್ರಾಯಪಟ್ಟರು. ನಗರದ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಚಯ ಸಭಾಭವನದಲ್ಲಿ ಶ್ರೀ ಮೃತ್ಯುಂಜಯ ಅರ್ಬನ್ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿ, ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ…

Read More

​ಕುಂದಗೋಳ ತಹಶೀಲ್ದಾರ್ ವಾಹನಕ್ಕೆ ಇಲ್ಲ ನಂಬರ್ ಪ್ಲೇಟ್:

ಕುಂದಗೋಳ: ಸಾರ್ವಜನಿಕರು ರಸ್ತೆಯಲ್ಲಿ ವಾಹನ ಚಲಾಯಿಸುವಾಗ ಸಣ್ಣ ತಪ್ಪು ಮಾಡಿದರೂ ದಂಡ ವಿಧಿಸುವ ಅಧಿಕಾರಿಗಳು, ತಾವೇ ನಿಯಮ ಉಲ್ಲಂಘಿಸಿದರೆ ಕೇಳುವವರು ಯಾರು? ಕುಂದಗೋಳ ಪಟ್ಟಣದ ತಹಶೀಲ್ದಾರರಿಗೆ ಸರ್ಕಾರದಿಂದ ಹೊಸ ವಾಹನ ಮಂಜೂರಾಗಿ ಎರಡು-ಮೂರು ತಿಂಗಳು ಕಳೆದಿದ್ದರೂ, ಈವರೆಗೂ ಅದಕ್ಕೆ ಅಧಿಕೃತ ನೋಂದಣಿ ಸಂಖ್ಯೆ (Registration Number) ಸಿಕ್ಕಿಲ್ಲ ಎಂಬ ಗಂಭೀರ ಆರೋಪ ಕೇಳಿಬಂದಿದೆ. ​ಆರ್.ಟಿ.ಓ ಅನುಮತಿ ಇಲ್ಲದೆ ಸಂಚಾರ: ಯಾವುದೇ ಹೊಸ ವಾಹನ ಶೋರೂಮ್‌ನಿಂದ ಹೊರಬಂದ ಮೇಲೆ ತಾತ್ಕಾಲಿಕ ನೋಂದಣಿ ಸಂಖ್ಯೆಯೊಂದಿಗೆ ಸಂಚರಿಸಲು ಕೇವಲ ಒಂದು ತಿಂಗಳ…

Read More

ಧಾರವಾಡದಲ್ಲಿ ಇಂಧನ ಅಭಾವವಿಲ್ಲ: ಸಾರ್ವಜನಿಕರು ಆತಂಕಪಡಬೇಡಿ ಎಂದು ಜಿಲ್ಲಾಧಿಕಾರಿ ಸ್ಪಷ್ಟನೆ

ಧಾರವಾಡ: ಜಿಲ್ಲೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಕೊರತೆ ಉಂಟಾಗಿದೆ ಎಂಬ ವದಂತಿಗಳು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಸಾರ್ವಜನಿಕರಿಗೆ ಮಹತ್ವದ ಸ್ಪಷ್ಟನೆ ನೀಡಿದ್ದಾರೆ. ಜಿಲ್ಲೆಯಲ್ಲಿ ಸದ್ಯಕ್ಕೆ ಯಾವುದೇ ಇಂಧನ ಅಭಾವವಿಲ್ಲ ಹಾಗೂ ಸಾರ್ವಜನಿಕರು ಸುಳ್ಳು ಸುದ್ದಿಗೆ ಕಿವಿಗೊಟ್ಟು ಆತಂಕಪಡುವ ಅಗತ್ಯವಿಲ್ಲ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ​ಕಳೆದ ಕೆಲವು ದಿನಗಳಿಂದ ಇಂಧನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂಬ ಸುಳ್ಳು ಸುದ್ದಿಯಿಂದಾಗಿ ಸಾರ್ವಜನಿಕರು ಗಾಬರಿಗೊಂಡು ಪೆಟ್ರೋಲ್ ಬಂಕ್‌ಗಳ ಮುಂದೆ ಸುದೀರ್ಘ ಸರತಿ ಸಾಲಿನಲ್ಲಿ ನಿಲ್ಲುತ್ತಿರುವುದು ಕಂಡುಬರುತ್ತಿದೆ….

Read More

​ಮಾಜಿ ಶಾಸಕನ ಪುತ್ರನ ಭೀಕರ ಕೊಲೆ: ಕಾರಿನಲ್ಲೇ ಸುಟ್ಟು ಕರಕಲಾದ ರಾಜು ಬೋಳಶೆಟ್ಟಿ;

ಧಾರವಾಡ: ಜಿಲ್ಲೆಯ ರಾಮಾಪುರ ಗ್ರಾಮದ ಬಳಿ ಮಂಗಳವಾರ ಮಧ್ಯಾಹ್ನ ನಡೆದಿರುವ ಬೆಚ್ಚಿಬೀಳಿಸುವ ಘಟನೆಯು ಸಾರ್ವಜನಿಕ ವಲಯದಲ್ಲಿ ತೀವ್ರ ಆತಂಕ ಹಾಗೂ ಆಕ್ರೋಶಕ್ಕೆ ಕಾರಣವಾಗಿದೆ. ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಕ್ಷೇತ್ರದ ಮಾಜಿ ಶಾಸಕ ಬಾಬುರಾವ್ ಬೋಳಶೆಟ್ಟಿ ಅವರ ಪುತ್ರ ರಾಜು ಬೋಳಶೆಟ್ಟಿ (53) ಅವರು ಕಾರಿನಲ್ಲೇ ಸುಟ್ಟು ಕರಕಲಾದ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಇದು ಅತ್ಯಂತ ಪೈಶಾಚಿಕ ಹಾಗೂ ಪೂರ್ವಯೋಜಿತ ಕೊಲೆ ಎಂಬ ಶಂಕೆ ವ್ಯಕ್ತವಾಗಿದೆ. ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಈ ಕೃತ್ಯವನ್ನು ಜಿಲ್ಲೆಯ ಜನರು ಮತ್ತು ವಿವಿಧ ಸಂಘಟನೆಗಳು…

Read More

ಜಿಲ್ಲೆಯಲ್ಲಿ ಗ್ಯಾಸ್ ಸಿಲಿಂಡರ್ ಕೊರತೆ ಇಲ್ಲ, ವದಂತಿಗಳಿಗೆ ಕಿವಿಗೊಡಬೇಡಿ: ಜಿಲ್ಲಾಧಿಕಾರಿ ಸ್ನೇಹಲ್ ಆರ್. ಭರವಸೆ

ಧಾರವಾಡ: ಜಿಲ್ಲೆಯಲ್ಲಿ ಗೃಹಬಳಕೆಯ ಗ್ಯಾಸ್ ಸಿಲಿಂಡರ್‍ಗಳ ಕೊರತೆ ಇಲ್ಲದಿರುವುದರಿಂದ ಸಾರ್ವಜನಿಕರು ಯಾವುದೇ ರೀತಿಯ ಆತಂಕಕ್ಕೆ ಒಳಗಾಗಬಾರದು ಎಂದು ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಮನವಿ ಮಾಡಿದ್ದಾರೆ. ಇಂದು ಧಾರವಾಡ ನಗರದ ಶ್ರೀ ರಾಮ ಎಚ್‍ಪಿ ಗ್ಯಾಸ್ ಏಜನ್ಸಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ನಡೆಸಿದ ಅವರು, ಬುಕ್ಕಿಂಗ್ ಮಾಡಿದವರಿಗೆ ಎರಡು ಮೂರು ದಿನ ವಿಳಂಬವಾದರೂ ನಿಯಮಾನುಸಾರ ಎಲ್ಲರಿಗೂ ಸಿಲಿಂಡರ್ ಪೂರೈಸಲಾಗುವುದು ಎಂದು ಸ್ಪಷ್ಟಪಡಿಸಿದರು. ವದಂತಿಗಳಿಗೆ ಮಣಿದು ಅನವಶ್ಯಕವಾಗಿ ಮುಂಗಡ ಬುಕ್ಕಿಂಗ್ ಮಾಡುವುದರಿಂದ ವಿತರಣಾ ವ್ಯವಸ್ಥೆಯ ಮೇಲೆ ಅನಗತ್ಯ…

Read More

ಗ್ಯಾರಂಟಿ ಯೋಜನೆಗಳ ಅನುಷ್ಠಾನದಲ್ಲಿ ಧಾರವಾಡ ತಾಲ್ಲೂಕು ಮುಂಚೂಣಿ: ಸಮಿತಿ ಅಧ್ಯಕ್ಷ ಅರವಿಂದ ಏಗನಗೌಡರ ಶ್ಲಾಘನೆ

​ಧಾರವಾಡ: ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳು ತಾಲ್ಲೂಕಿನ ಪ್ರತಿ ಅರ್ಹ ಫಲಾನುಭವಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕವಾಗಿ ಶ್ರಮಿಸಬೇಕು ಎಂದು ಧಾರವಾಡ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಅರವಿಂದ ಏಗನಗೌಡರ ಅವರು ಸೂಚನೆ ನೀಡಿದ್ದಾರೆ. ಇಂದು ಧಾರವಾಡದ ತಾಲ್ಲೂಕು ಪಂಚಾಯತ್ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ವಿವಿಧ ಇಲಾಖೆಗಳ ಅಡಿಯಲ್ಲಿ ಜಾರಿಯಾಗುತ್ತಿರುವ ಯೋಜನೆಗಳ ಸಮಗ್ರ ಪ್ರಗತಿಯನ್ನು ಪರಿಶೀಲಿಸಿ ಅಧಿಕಾರಿಗಳ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು. ​ತಾಲ್ಲೂಕಿನಲ್ಲಿ ಗೃಹಲಕ್ಷ್ಮಿ…

Read More

​ಹುಬ್ಬಳ್ಳಿ-ಧಾರವಾಡ ಪಾಲಿಕೆ ಆಟೋ ಟಿಪ್ಪರ್ ಚಾಲಕರಿಗೆ ಗುರುತಿನ ಚೀಟಿ ವಿತರಣೆ

ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಆಟೋ ಟಿಪ್ಪರ್ ಚಾಲಕರಿಗೆ ಸೋಮವಾರದಂದು ಅಧಿಕೃತ ಗುರುತಿನ ಚೀಟಿ (ID Card) ವಿತರಿಸುವ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ನಗರದ ಸ್ವಚ್ಛತೆಯಲ್ಲಿ ಪ್ರಮುಖ ಪಾತ್ರ ವಹಿಸುವ ಚಾಲಕರಿಗೆ ಪಾಲಿಕೆ ವತಿಯಿಂದ ಈ ಗುರುತಿನ ಚೀಟಿಗಳನ್ನು ನೀಡಲಾಯಿತು. ​,ರಾಷ್ಟ್ರೀಯ ಅಹಿಂದ ಸಂಘಟನೆಯ ರಾಜ್ಯ ಕಾರ್ಮಿಕ ಘಟಕದ (ಶ್ರಮೀಕ ವರ್ಗ) ರಾಜ್ಯ ಅಧ್ಯಕ್ಷ ಮುದುಕೇಶ್ವರ್ ಮಾದರ, ಹಾಗೂ ಮಮತಾ ಬೆಳಗಾಂಕರ್ ಅವರು ಚಾಲಕರಿಗೆ ಗುರುತಿನ ಚೀಟಿ ವಿತರಿಸಿ, ಅವರ ಸೇವೆಯನ್ನು ಶ್ಲಾಘಿಸಿದರು. ಈ ಸಂದರ್ಭದಲ್ಲಿ ಪಾಲಿಕೆಯ…

Read More

ಧಾರವಾಡದಲ್ಲಿ ಮಾರ್ಚ್ 28ರಂದು ವಿಶ್ವ ರಂಗಭೂಮಿ ದಿನಾಚರಣೆ: ಮಾಲತಿ ಕುಂದಾಪುರ ಅವರಿಗೆ ‘ರಂಗ ಸ್ನೇಹಿತ’ ಪ್ರಶಸ್ತಿ ಪ್ರದಾನ

ಧಾರವಾಡ: ನಗರದ ಸ್ನೇಹಿತರು ಕಲಾ ಸಂಘ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಹಾಗೂ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸಹಯೋಗದಲ್ಲಿ ವಿಶ್ವ ರಂಗಭೂಮಿ ದಿನಾಚರಣೆಯ ಪ್ರಯುಕ್ತ ವಿಶೇಷ ಸಮಾರಂಭವನ್ನು ಮಾರ್ಚ್ 28ರಂದು ಹಮ್ಮಿಕೊಳ್ಳಲಾಗಿದೆ. ಅಂದು ಸಾಯಂಕಾಲ 5:30ಕ್ಕೆ ಧಾರವಾಡದ ಜಿಲ್ಲಾ ಸಾಹಿತ್ಯ ಪರಿಷತ್ ಭವನದಲ್ಲಿ ಕಾರ್ಯಕ್ರಮ ಜರುಗಲಿದ್ದು, ಹುಬ್ಬಳ್ಳಿಯ ಹಿರಿಯ ವೃತ್ತಿ ರಂಗಭೂಮಿ ಕಲಾವಿದೆ ಶ್ರೀಮತಿ ಮಾಲತಿ ಕುಂದಾಪುರ ಅವರಿಗೆ ಪ್ರತಿಷ್ಠಿತ ‘ರಂಗ ಸ್ನೇಹಿತ’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು ಎಂದು ಸಂಘದ ಅಧ್ಯಕ್ಷ ವಿಜಯೀಂದ್ರ ಅರ್ಚಕ…

Read More