‘ನಮೋ ಯುವ ಓಟ’: ನಶೆಮುಕ್ತ ಭಾರತಕ್ಕೆ ಪಣ ತೊಡಲು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಕರೆ
ಹುಬ್ಬಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ 75ನೇ ಹುಟ್ಟುಹಬ್ಬದ ಅಂಗವಾಗಿ, ‘ನಶೆಮುಕ್ತ ಭಾರತ’ ನಿರ್ಮಾಣದ ಸಂಕಲ್ಪದೊಂದಿಗೆ ಹುಬ್ಬಳ್ಳಿಯಲ್ಲಿ ನಡೆದ ‘ನಮೋ ಯುವ ಓಟ’ ಕಾರ್ಯಕ್ರಮದಲ್ಲಿ ಕೇಂದ್ರ ಸಂಸದೀಯ ವ್ಯವಹಾರಗಳ ಹಾಗೂ ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಲ್ಹಾದ ಜೋಶಿ ಅವರು ಪಾಲ್ಗೊಂಡು ಯುವಕರಿಗೆ ಮಾದಕ ವ್ಯಸನದಿಂದ ದೂರವಿರಲು ಕರೆ ನೀಡಿದರು. ಹುಬ್ಬಳ್ಳಿ-ಧಾರವಾಡ ಮಹಾನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಈ ಮ್ಯಾರಥಾನ್‌ನಲ್ಲಿ ಸಹಸ್ರಾರು ಯುವಕರು ಉತ್ಸಾಹದಿಂದ ಭಾಗವಹಿಸಿದ್ದರು. ಸಾವಿರಾರು ಯುವಕರನ್ನು ಉದ್ದೇಶಿಸಿ ಮಾತನಾಡಿದ ಸಚಿವ ಜೋಶಿ, “ಪ್ರಧಾನಿ…

