ಹುಬ್ಬಳ್ಳಿ: ರಾಣಿ ಚೆನ್ನಮ್ಮ ಮೈದಾನದಲ್ಲಿ ಗಣೇಶ ಮೂರ್ತಿ ವಿಸರ್ಜನೆ; ಕೇಸರಿ ಬಾವುಟಗಳಿಂದ ಕಂಗೊಳಿಸಿದ ನಗರ; ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿ.
ಹುಬ್ಬಳ್ಳಿ: ಹುಬ್ಬಳ್ಳಿಯ ಪ್ರಸಿದ್ಧ ರಾಣಿ ಚೆನ್ನಮ್ಮ ಮೈದಾನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗಣಪತಿ ಮೂರ್ತಿಯ ವಿಸರ್ಜನೆ ಸಮಾರಂಭವು ಮೂರನೇ ದಿನವಾದ ಶುಕ್ರವಾರ ಅದ್ಧೂರಿಯಾಗಿ ಜರುಗಿತು. ಈ ವರ್ಷ ಬಾಲಕೃಷ್ಣ ಅವತಾರದಲ್ಲಿ ಗಣೇಶನನ್ನು ಪ್ರತಿಷ್ಠಾಪಿಸಲಾಗಿದ್ದು, ವಿಸರ್ಜನೆ ಕಾರ್ಯಕ್ರಮದಲ್ಲಿ ಮಾಜಿ ಸಂಸದ ಪ್ರತಾಪ್ ಸಿಂಹ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕೇಸರಿ ಬಾವುಟಗಳ ವೈಭವಗಣಪತಿ ಉತ್ಸವದ ಹಿನ್ನೆಲೆಯಲ್ಲಿ ವಾಣಿಜ್ಯನಗರಿ ಹುಬ್ಬಳ್ಳಿಯು ಕೇಸರಿ ಬಾವುಟಗಳಿಂದ ಕಂಗೊಳಿಸುತ್ತಿತ್ತು. ನಗರದ ಹೃದಯ ಭಾಗ ಸಂಪೂರ್ಣವಾಗಿ ಕೇಸರಿಮಯವಾಗಿತ್ತು. ಈದ್ಗಾ ಮೈದಾನದಲ್ಲಿ ಮೂರು ದಿನಗಳ ಕಾಲ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ನೀಡಿದ…
