ಧರ್ಮಸ್ಥಳ ವಿರುದ್ಧದ ಅಪಪ್ರಚಾರ ಖಂಡಿಸಿ ಹುಬ್ಬಳ್ಳಿಯಲ್ಲಿ ಜೈನ ಸಮುದಾಯದಿಂದ ಬೃಹತ್ ಪ್ರತಿಭಟನೆ
ಹುಬ್ಬಳ್ಳಿ: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆ ಅವರ ವಿರುದ್ಧ ನಡೆಯುತ್ತಿರುವ ಷಡ್ಯಂತ್ರ ಹಾಗೂ ಅಪಪ್ರಚಾರಗಳನ್ನು ವಿರೋಧಿಸಿ ಹುಬ್ಬಳ್ಳಿಯಲ್ಲಿ ಜೈನ ಸಮುದಾಯದವರು ಬೃಹತ್ ಮೌನ ಪ್ರತಿಭಟನಾ ಮೆರವಣಿಗೆ ನಡೆಸಿದರು. ಈ ಸಮಯದಲ್ಲಿ ಮಾತನಾಡಿದ ಸಮುದಾಯದ ಮುಖಂಡರು, “ಧರ್ಮಸ್ಥಳದ ವಿರುದ್ಧ ಇನ್ನು ಮುಂದೆ ಅವಹೇಳನಕಾರಿ ಹೇಳಿಕೆ ನೀಡಿದರೆ ಅಥವಾ ಬೇರೆ ಯಾವುದೇ ರೀತಿಯಲ್ಲಿ ಅಪಪ್ರಚಾರ ಮಾಡಿದರೆ ನಾವು ಸುಮ್ಮನೆ ಇರುವುದಿಲ್ಲ” ಎಂದು ಎಚ್ಚರಿಕೆ ನೀಡಿದರು. ಕೂಡಲೇ ಸರ್ಕಾರ ಗಿರೀಶ್, ಮತ್ತು ತಿಮ್ಮರೋಡಿ ಹಾಗೂ…
