ಕಾರ್ಕಳ: ಸುಮೇಧಾ ಫ್ಯಾಷನ್ ಇನ್‌ಸ್ಟಿಟ್ಯೂಟ್‌ನಿಂದ ಉಚಿತ ಫ್ಯಾಷನ್ ಡಿಸೈನಿಂಗ್ ಕಾರ್ಯಾಗಾರ

ಕಾರ್ಕಳ: ಸ್ಥಳೀಯ ಎಸ್.ಜೆ. ಆರ್ಕೇಡ್ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿರುವ ಸುಮೇಧಾ ಫ್ಯಾಷನ್ ಇನ್‌ಸ್ಟಿಟ್ಯೂಟ್ ವತಿಯಿಂದ ಆಸಕ್ತ ಅಭ್ಯರ್ಥಿಗಳಿಗಾಗಿ ಉಚಿತ ಫ್ಯಾಷನ್ ಡಿಸೈನಿಂಗ್ ವರ್ಕ್‌ಶಾಪ್ ಆಯೋಜಿಸಲಾಗಿದೆ. ಫ್ಯಾಷನ್ ಕ್ಷೇತ್ರದಲ್ಲಿ ವೃತ್ತಿಜೀವನ ರೂಪಿಸಿಕೊಳ್ಳಲು ಬಯಸುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ವೇದಿಕೆಯಾಗಿದ್ದು, ಮಾರ್ಚ್ 25 ರಿಂದ ಮಾರ್ಚ್ 30ರ ವರೆಗೆ ಈ ತರಬೇತಿ ಶಿಬಿರ ನಡೆಯಲಿದೆ. ​ಈ ವಿಶೇಷ ಕಾರ್ಯಾಗಾರದಲ್ಲಿ ಫ್ಯಾಷನ್ ಕ್ಷೇತ್ರದ ಪ್ರಾಥಮಿಕ ಮಾಹಿತಿಯೊಂದಿಗೆ ಹೂಪ್ ಆರ್ಟ್, ಜ್ಯುವೆಲ್ಲರಿ ಮೇಕಿಂಗ್ ಹಾಗೂ ಮೆಹೆಂದಿ ಕಲೆಯ ಬಗ್ಗೆ ಪ್ರಾಯೋಗಿಕ ತರಬೇತಿಯನ್ನು ನೀಡಲಾಗುತ್ತದೆ. ವಿಶೇಷವಾಗಿ…

Read More

​ಬಂಡೀಪುರ: ಅಕ್ರಮ ವಿದ್ಯುತ್ ಸ್ಪರ್ಶದಿಂದ ಹೆಣ್ಣು ಹುಲಿ ಸಾವು; ಆರೋಪಿಗಳು ತಲೆಮರೆಸಿಕೊಂಡಿರುವ ಶಂಕೆ

ಹನೂರು: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಬಫರ್ ಜೋನ್ ವ್ಯಾಪ್ತಿಯ ಪಡಗೂರು ಗ್ರಾಮದ ಬಳಿ ಅಕ್ರಮ ವಿದ್ಯುತ್ ತಂತಿ ಸ್ಪರ್ಶಿಸಿ ಎರಡು ವರ್ಷದ ಹೆಣ್ಣು ಹುಲಿಯೊಂದು ಸಾವನ್ನಪ್ಪಿರುವ ಘಟನೆ ಸೋಮವಾರ ಬೆಳಕಿಗೆ ಬಂದಿದೆ. ಪಡಗೂರು ವ್ಯಾಪ್ತಿಯಲ್ಲಿ ಹುಲಿ ಸಂಚರಿಸುತ್ತಿರುವ ಮಾಹಿತಿ ಪಡೆದ ಅರಣ್ಯ ಇಲಾಖೆ ಸಿಬ್ಬಂದಿ, ಅದರ ಚಲನವಲನ ಗಮನಿಸಲು ಥರ್ಮಲ್ ಡ್ರೋನ್ ಬಳಸಿದಾಗ ಖಾಸಗಿ ಜಮೀನೊಂದರಲ್ಲಿ ಹುಲಿ ಅಸ್ವಾಭಾವಿಕವಾಗಿ ಮೃತಪಟ್ಟಿರುವುದು ಕಂಡುಬಂದಿದೆ. ತಕ್ಷಣ ಸ್ಥಳಕ್ಕೆ ಅರಣ್ಯ ಇಲಾಖೆ, ಸೆಸ್ಕಾಂ ಹಾಗೂ ಪೋಲಿಸ್ ಅಧಿಕಾರಿಗಳು ಭೇಟಿ ನೀಡಿ…

Read More

ಮಲೆ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಸಂಭ್ರಮ: ಭಕ್ತರಿಗಾಗಿ ಲಕ್ಷಾಂತರ ಲಾಡು ಪ್ರಸಾದ ಸಿದ್ಧತೆ

ಹನೂರು: ಪಾವನ ಕ್ಷೇತ್ರವಾದ ಮಲೆ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರಾ ಮಹೋತ್ಸವದ ಸಿದ್ಧತೆಗಳು ಬಿರುಸಿನಿಂದ ಸಾಗುತ್ತಿದ್ದು, ಶ್ರೀ ಕ್ಷೇತ್ರಕ್ಕೆ ಆಗಮಿಸುವ ಲಕ್ಷಾಂತರ ಭಕ್ತಾದಿಗಳಿಗಾಗಿ ವಿಶೇಷ ಲಾಡು ಪ್ರಸಾದ ತಯಾರಿಕಾ ಕಾರ್ಯಕ್ಕೆ ಚಾಲನೆ ನೀಡಲಾಗಿದೆ. ಭಕ್ತರ ಸೇವೆಯನ್ನು ಮೂಲ ಮಂತ್ರವಾಗಿಸಿಕೊಂಡಿರುವ ಶ್ರೀ ಮಲೆ ಮಹದೇಶ್ವರ ಬೆಟ್ಟದ ಅಭಿವೃದ್ಧಿ ಪ್ರಾಧಿಕಾರವು, ಜಾತ್ರೆಯ ಸಂದರ್ಭದಲ್ಲಿ ಪ್ರಸಾದದ ಕೊರತೆಯಾಗದಂತೆ ಮುನ್ನೆಚ್ಚರಿಕೆ ವಹಿಸಿದೆ. ಪ್ರಸಾದ ತಯಾರಿಕೆಯಲ್ಲಿ ಶುದ್ಧತೆ, ನೈರ್ಮಲ್ಯ ಹಾಗೂ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ಅತ್ಯಂತ ಶ್ರದ್ಧೆಯಿಂದ ಲಾಡುಗಳನ್ನು ಸಿದ್ಧಪಡಿಸಲಾಗುತ್ತಿದೆ. ​ಈ ಬೃಹತ್…

Read More

​ಹನೂರು ಕುಡಿಯುವ ನೀರಿನ ಯೋಜನೆಗೆ 490 ಕೋಟಿ ರೂ. ಅನುದಾನ: ಸುತ್ತೂರು ಶ್ರೀಗಳಿಗೆ ಡಾ. ದತ್ತೇಶ್ ಕುಮಾರ್ ಕೃತಜ್ಞತೆ

​ಹನೂರು: ಹನೂರು ವಿಧಾನಸಭಾ ಕ್ಷೇತ್ರದ ರಾಮಾಪುರ, ಮಾರ್ಟಳ್ಳಿ ಹಾಗೂ ಅಜ್ಜಿಪುರ ಭಾಗದ ದಶಕಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಶ್ರಮಿಸಿದ ಸುತ್ತೂರು ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳನ್ನು ಕ್ಷೇತ್ರದ ಮುಖಂಡರು ಭೇಟಿ ಮಾಡಿ ಭಕ್ತಿಪೂರ್ವಕ ಕೃತಜ್ಞತೆ ಸಲ್ಲಿಸಿದರು. ಹನೂರು ಕ್ಷೇತ್ರದ ಮುಖಂಡರಾದ ಡಾ. ಎಸ್. ದತ್ತೇಶ್ ಕುಮಾರ್ ನೇತೃತ್ವದಲ್ಲಿ ಸುತ್ತೂರು ಮಠಕ್ಕೆ ಭೇಟಿ ನೀಡಿದ ತಂಡವು, ಶ್ರೀಗಳ ಮಾರ್ಗದರ್ಶನ ಹಾಗೂ ಆಶೀರ್ವಾದದಿಂದಾಗಿ ಈ ಸಾಲಿನ ಬಜೆಟ್‌ನಲ್ಲಿ ಹನೂರು ಕ್ಷೇತ್ರಕ್ಕೆ ಬೃಹತ್ ನೀರಾವರಿ…

Read More

ಮಲೈ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ: ಕಾರ್ಯದರ್ಶಿ ಎ.ಇ. ರಘು ಪರಿಶೀಲನೆ

ಹನೂರು: ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೈ ಮಾದೇಶ್ವರ ಬೆಟ್ಟದಲ್ಲಿ ಇಂದಿನಿಂದ (ಮಾರ್ಚ್ 16 ರಿಂದ 19 ರವರೆಗೆ) ಜರುಗಲಿರುವ ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರು, ಜಾತ್ರೆಯ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಮಹಾರಥೋತ್ಸವ ಭಕ್ತಿಭಾವದಿಂದ ನೆರವೇರಲಿದ್ದು, ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ…

Read More

ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ವಿರುದ್ಧ ಲೈಂಗಿಕ ಕಿರುಕುಳದ ಗಂಭೀರ ಆರೋಪ: ಸಿಎಂ ಮೊರೆ ಹೋದ ಸಂತ್ರಸ್ತ ಮಹಿಳೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಪೊಲೀಸ್ ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ. ವಿರುದ್ಧ ಮಹಿಳೆಯೊಬ್ಬರು ಅತ್ಯಂತ ಗಂಭೀರ ಸ್ವರೂಪದ ಲೈಂಗಿಕ ಕಿರುಕುಳ ಹಾಗೂ ಬೆದರಿಕೆಯ ಆರೋಪ ಮಾಡಿದ್ದು, ಈ ಪ್ರಕರಣ ಇದೀಗ ಪೊಲೀಸ್ ಇಲಾಖೆಯಲ್ಲಿ ಸಂಚಲನ ಮೂಡಿಸಿದೆ. ಇನ್ಸ್‌ಪೆಕ್ಟರ್ ಕಿರುಕುಳ ತಾಳಲಾರದೆ ತಾಕೋಡೆ ಗ್ರಾಮದ ನೊಂದ ಮಹಿಳೆಯು ಇದೀಗ ನ್ಯಾಯಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಗೃಹ ಸಚಿವರು ಹಾಗೂ ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (ಡಿಜಿಪಿ) ಎಂಟು ಪುಟಗಳ ಸುದೀರ್ಘ ದೂರು ಸಲ್ಲಿಸಿದ್ದಾರೆ. ​ತನ್ನ ಪತಿಯನ್ನು ವಿನಾಕಾರಣ ಬಂಧಿಸಿರುವ ಇನ್ಸ್‌ಪೆಕ್ಟರ್…

Read More

ಮಲೈ ಮಾದೇಶ್ವರ ಬೆಟ್ಟದಲ್ಲಿ ಯುಗಾದಿ ಜಾತ್ರೆಗೆ ಸಕಲ ಸಿದ್ಧತೆ: ಕಾರ್ಯದರ್ಶಿ ಎ.ಇ. ರಘು ಪರಿಶೀಲನೆ

ಹನೂರು: ಪ್ರಸಿದ್ಧ ಯಾತ್ರಾ ಸ್ಥಳವಾದ ಶ್ರೀ ಮಲೈ ಮಾದೇಶ್ವರ ಬೆಟ್ಟದಲ್ಲಿ ಇಂದಿನಿಂದ (ಮಾರ್ಚ್ 16 ರಿಂದ 19 ರವರೆಗೆ) ಜರುಗಲಿರುವ ಚಂದ್ರಮಾನ ಯುಗಾದಿ ಜಾತ್ರಾ ಮಹೋತ್ಸವಕ್ಕೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದಿಂದ ಸಕಲ ಸಿದ್ಧತೆಗಳನ್ನು ಕೈಗೊಳ್ಳಲಾಗಿದೆ. ಈ ಕುರಿತು ಮಾಹಿತಿ ನೀಡಿದ ಪ್ರಾಧಿಕಾರದ ಕಾರ್ಯದರ್ಶಿ ಎ.ಇ. ರಘು ಅವರು, ಜಾತ್ರೆಯ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ವಿಶೇಷ ಪೂಜಾ ಕೈಂಕರ್ಯಗಳು ಹಾಗೂ ಮಹಾರಥೋತ್ಸವ ಭಕ್ತಿಭಾವದಿಂದ ನೆರವೇರಲಿದ್ದು, ಆಗಮಿಸುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗದಂತೆ ಮೂಲಭೂತ ಸೌಕರ್ಯ ಸೇರಿದಂತೆ ಸಕಲ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ…

Read More

ಚಳ್ಳಕೆರೆ ಬಳಿ ಭೀಕರ ರಸ್ತೆ ಅಪಘಾತ: ಮೂವರು ಆರ್‌ಎಸ್‌ಐ ಸಾವು; ಸ್ಥಳಕ್ಕೆ ಗೃಹ ಸಚಿವ ಪರಮೇಶ್ವರ ಭೇಟಿ

​ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಹೆಗ್ಗೆರೆ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳು (RSI) ಸಾವನ್ನಪ್ಪಿರುವ ಘಟನೆ ತೀವ್ರ ವಿಷಾದ ಮೂಡಿಸಿದೆ. ಘಟನಾ ಸ್ಥಳಕ್ಕೆ ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ. ​ಬೆಂಗಳೂರು ನಗರ ಸಶಸ್ತ್ರ ಮೀಸಲು ಪಡೆಯ (CAR) ರಿಸರ್ವ್ ಸಬ್ ಇನ್‌ಸ್ಪೆಕ್ಟರ್‌ಗಳಾದ ಮಂಜುನಾಥ್ ದಾರಿಮನಿ, ಅಮರೀಶ್ ಬರ್ಗಿ ಹಾಗೂ ಸಚೀನ್ ಮೃತಪಟ್ಟ ದುರ್ದೈವಿಗಳು….

Read More

ಬೆಳಗಾವಿ: ಕುಡಿಯುವ ನೀರಿಗಾಗಿ ವಡಗಾಂವ್‌ನಲ್ಲಿ ಮಹಿಳೆಯರ ಆಕ್ರೋಶ ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ಘರ್ಷಣೆ

ಬೆಳಗಾವಿ: “ಹೆಣ್ಣು ಒಲಿದರೆ ನಾರಿ, ಮುನಿದರೆ ಮಾರಿ” ಎಂಬ ಮಾತಿಗೆ ಇಂದು ವಡಗಾಂವ್‌ನ ರಾಯತ ಗಲ್ಲಿಯಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ. ಮೂಲಭೂತ ಸೌಕರ್ಯವಾದ ಕುಡಿಯುವ ನೀರಿಗಾಗಿ ಬೀದಿಗಿಳಿದ ಮಹಿಳೆಯರು, ವ್ಯವಸ್ಥೆಯ ವಿರುದ್ಧ ಸಿಡಿದೆದ್ದು ನಿಂತ ಪರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಂತಿದೆ. ​ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾಗಿದ್ದ ರಾಯತ ಗಲ್ಲಿಯ ನಿವಾಸಿಗಳು, ಇಂದು ಮಹಾನಗರ ಪಾಲಿಕೆಯ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಲುಷಿತ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಪದೇ ಪದೇ ದೂರು…

Read More

​ಮಹಿಳೆಯರನ್ನು ಗೌರವಿಸುವ ಸಮಾಜದಲ್ಲಿ ನೆಮ್ಮದಿ ಸಾಧ್ಯ: ಆರ್.ಸಿ. ಪಾಟೀಲ್

ರಾಣೇಬೆನ್ನೂರ: ಎಲ್ಲಿ ಮಹಿಳೆಯರನ್ನು ಪೂಜ್ಯನೀಯ ಸ್ಥಾನದಲ್ಲಿ ಕಾಣುತ್ತಾರೋ, ಅಲ್ಲಿ ಸುಸಂಸ್ಕೃತ ಹಾಗೂ ನೆಮ್ಮದಿಯ ವಾತಾವರಣ ಇರುತ್ತದೆ. ಪ್ರತಿಯೊಬ್ಬರೂ ಮಹಿಳೆಯರನ್ನು ಪೂಜಿಸುವ ಮತ್ತು ಗೌರವಿಸುವ ಪ್ರವೃತ್ತಿಯನ್ನು ಬೆಳೆಸಿಕೊಂಡಾಗ ಮಾತ್ರ ಅವರಿಗೆ ನಿಜವಾದ ಗೌರವ ನೀಡಿದಂತಾಗುತ್ತದೆ ಎಂದು ಕೆಎಸ್ಆರ್ಟಿಸಿ ಡಿಪೋ ಮ್ಯಾನೇಜರ್ ಆರ್.ಸಿ. ಪಾಟೀಲ್ ಹೇಳಿದರು. ನಗರದ ಹೊರವಲಯದ ಮಾಗೋಡ ರಸ್ತೆಯಲ್ಲಿರುವ ಸಾರಿಗೆ ಘಟಕದಲ್ಲಿ ಭಾನುವಾರ ಆಯೋಜಿಸಲಾಗಿದ್ದ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡುತ್ತಿದ್ದರು. ಹೆಣ್ಣನ್ನು ಅಬಲೆಯೆಂದು ಹಿಯಾಳಿಸಬಾರದು. ಜನ್ಮ ನೀಡಿದ ತಾಯಿಯಿಂದ ಹಿಡಿದು ರವಿವಾರದಂದು…

Read More