ಚಾಮರಾಜನಗರ ಜಿಲ್ಲೆಯಲ್ಲಿ ಬರ ಅಧ್ಯಯನ: ಕೇಂದ್ರದ ಉನ್ನತ ಮಟ್ಟದ ತಂಡದಿಂದ ಕ್ಷೇತ್ರ ಪರಿಶೀಲನೆ, ಒಣಗಿದ ಜೋಳ, ಸೂರ್ಯಕಾಂತಿ ಬೆಳೆ ವೀಕ್ಷಣೆ; ರೈತರ ಅಳಲು ಆಲಿಸಿದ ಅಧಿಕಾರಿಗಳು
ಚಾಮರಾಜನಗರ, ಅ.6: ಜಿಲ್ಲೆಯ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಆಗಮಿಸಿರುವ ಕೇಂದ್ರ ಸರ್ಕಾರದ ಅಂತರ್ ಸಚಿವಾಲಯ ತಂಡ (IMCT) ಮಂಗಳವಾರ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕಿನ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಿ, ಬೆಳೆ ಹಾನಿ, ಕುಡಿಯುವ ನೀರು ಮತ್ತು ಮೇವಿನ ಕೊರತೆ ಸೇರಿದಂತೆ ಬರದ ವಾಸ್ತವ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿತು. ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಉಪ ಆಯುಕ್ತ ಡಾ. ಸುಧಾಮ್ ಬೇಗ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪ ಸಲಹೆಗಾರ ಆಶೀಶ್ ಪಾಂಡೆ, ಆಹಾರ…

