ಬಾಳೆಹೊನ್ನೂರು ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ ಶತಮಾನೋತ್ಸವ ಸಂಭ್ರಮ: ಎರಡು ಹೊಸ ತಳಿಗಳ ಬಿಡುಗಡೆ

​ಬಾಳೆಹೊನ್ನೂರು: ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರಿನಲ್ಲಿರುವ ಪ್ರತಿಷ್ಠಿತ ಕೇಂದ್ರೀಯ ಕಾಫಿ ಸಂಶೋಧನಾ ಸಂಸ್ಥೆಯ (ಸಿಸಿಆರ್‌ಐ) ನೂರನೇ ವರ್ಷದ ಶತಮಾನೋತ್ಸವ ಉದ್ಘಾಟನಾ ಸಮಾರಂಭವು ಶನಿವಾರ ಅತ್ಯಂತ ವಿಜೃಂಭಣೆಯಿಂದ ಜರುಗಿತು. ಕಾಫಿ ಮಂಡಳಿ ಹಾಗೂ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ವತಿಯಿಂದ ಆಯೋಜಿಸಲಾಗಿದ್ದ ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣೆ ಹಾಗೂ ನವೀಕರಿಸಬಹುದಾದ ಇಂಧನ ಸಚಿವ ಪ್ರಹ್ಲಾದ ಜೋಶಿ ಅವರು ಭಾಗವಹಿಸಿ ಮಾತನಾಡಿದರು. 1925 ರಲ್ಲಿ ಪ್ರಾರಂಭವಾದ ಈ ಸಂಸ್ಥೆಯು ಕಳೆದ ಒಂದು…

Read More

ಚಾರ್ಮಾಡಿ ಘಾಟಿಯಲ್ಲಿ ಸರಣಿ ಅಪಘಾತ: ಬಸ್ ಚಾಲಕನಿಗೆ ಗಂಭೀರ ಗಾಯ, ಸಂಚಾರ ಅಸ್ತವ್ಯಸ್ತ

ಚಿಕ್ಕಮಗಳೂರು, ಸೆ. ೭: ದಕ್ಷಿಣ ಕನ್ನಡ ಮತ್ತು ಚಿಕ್ಕಮಗಳೂರು ಜಿಲ್ಲೆಗಳನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಇಂದು ಸಂಭವಿಸಿದ ಸರಣಿ ಅಪಘಾತದಿಂದಾಗಿ ವಾಹನ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿತ್ತು. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಘಟನೆ ವಿವರಘಾಟಿಯ ತಿರುವಿನಲ್ಲಿ ಗ್ಯಾಸ್ ಸಿಲಿಂಡರ್ ತುಂಬಿದ್ದ ಲಾರಿಗೆ ಕೆ.ಎಸ್.ಆರ್.ಟಿ.ಸಿ. ಬಸ್ ಡಿಕ್ಕಿ ಹೊಡೆದಿದೆ. ಈ ಅಪಘಾತ ಸಂಭವಿಸಿದ ಕೆಲವೇ ಕ್ಷಣಗಳಲ್ಲಿ, ಹಿಂದಿನಿಂದ ಬರುತ್ತಿದ್ದ ಮತ್ತೊಂದು ಲಾರಿಯು ಸಹ ಅಪಘಾತಕ್ಕೀಡಾದ ಲಾರಿಗೆ ಡಿಕ್ಕಿ ಹೊಡೆದು ಸರಣಿ ಅಪಘಾತಕ್ಕೆ ಕಾರಣವಾಗಿದೆ. ಗಾಯಾಳುಗಳ ಸ್ಥಿತಿಈ ದುರ್ಘಟನೆಯಲ್ಲಿ ಬಸ್…

Read More

ಪ್ರೀತಿ ನಿರಾಕರಿಸಿದ ಯುವತಿಗೆ ನಡು ರಸ್ತೆಯಲ್ಲಿ ಚಾಕು ಇರಿತ; ಯುವಕ ಪರಾರಿ

ಚಿಕ್ಕಮಗಳೂರು: ಪ್ರೀತಿಯನ್ನು ನಿರಾಕರಿಸಿದ ದ್ವೇಷಕ್ಕೆ ಪಾಪಿ ಪ್ರೇಮಿಯೊಬ್ಬ ಯುವತಿಗೆ ನಡುರಸ್ತೆಯಲ್ಲಿ ಕಲ್ಲಿನಿಂದ ಹಲ್ಲೆ ನಡೆಸಿ, ನಂತರ ಚಾಕುವಿನಿಂದ ಇರಿದು ಗಂಭೀರವಾಗಿ ಗಾಯಗೊಳಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ಪಟ್ಟಣದಲ್ಲಿ ನಡೆದಿದೆ. ಕಳಸದ ಖಾಸಗಿ ಕ್ಲಿನಿಕ್‌ನಲ್ಲಿ ದಾದಿಯಾಗಿ (ನರ್ಸ್) ಕೆಲಸ ಮಾಡುತ್ತಿದ್ದ ಕಾವ್ಯ (೨೪) ಚಾಕು ಇರಿತಕ್ಕೊಳಗಾದ ಯುವತಿ. ಈ ಕೃತ್ಯ ಎಸಗಿದ ಯುವಕ ಕೊಪ್ಪ ತಾಲ್ಲೂಕಿನ ಗುಡ್ಡತೋಟ ಮೂಲದವನು ಎಂದು ಗುರುತಿಸಲಾಗಿದೆ. ಘಟನೆಯ ವಿವರ:ಶುಕ್ರವಾರ ಕಳಸ ಪಟ್ಟಣದ ಮಹಾವೀರ ಸರ್ಕಲ್ ಬಳಿ ಯುವತಿ ಕಾವ್ಯ ತೆರಳುತ್ತಿದ್ದಾಗ, ಹಿಂದಿನಿಂದ…

Read More

ರಾಗಿ ಮುದ್ದೆಗೆ ನಿದ್ರೆ ಮಾತ್ರೆ ಬೆರೆಸಿ ಅತ್ತೆಯ ಕೊಲೆ: ಸೊಸೆ, ಪ್ರಿಯಕರ ಬಂಧನ

ಚಿಕ್ಕಮಗಳೂರು: ಅಜ್ಜಂಪುರ ತಾಲೂಕಿನ ತಡಗ ಗ್ರಾಮದಲ್ಲಿ ಅಸಹ್ಯಕರ ಘಟನೆಯೊಂದು ಬೆಳಕಿಗೆ ಬಂದಿದ್ದು, ತನ್ನ ಪ್ರಿಯಕರನೊಂದಿಗೆ ಸೇರಿಕೊಂಡು ಸೊಸೆಯೊಬ್ಬಳು ರಾಗಿ ಮುದ್ದೆಯಲ್ಲಿ ನಿದ್ರೆ ಮಾತ್ರೆ ಬೆರೆಸಿ ಅತ್ತೆಯನ್ನು ಕೊಲೆ ಮಾಡಿರುವ ಭೀಕರ ಘಟನೆ ಬಯಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸೊಸೆ ಅಶ್ವಿನಿ ಮತ್ತು ಆಕೆಯ ಪ್ರಿಯಕರ ಆಂಜನೇಯನನ್ನು ಬಂಧಿಸಿ, ಕಳವು ಮಾಡಿದ್ದ ಚಿನ್ನಾಭರಣಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಘಟನೆಯೇನು?ಆಗಸ್ಟ್‌ 10ರಂದು ಅತ್ತೆ ದೇವಿರಮ್ಮ ಮೃತಪಟ್ಟಾಗ, ಕುಟುಂಬದವರು ಇದೊಂದು ಸಹಜ ಸಾವು ಎಂದು ತಿಳಿದು ಅಂತ್ಯಸಂಸ್ಕಾರ ನಡೆಸಿದ್ದರು. ಆದರೆ, ಕೆಲವೇ ದಿನಗಳಲ್ಲಿ…

Read More

ಶವ ಸಂಸ್ಕಾರಕ್ಕೂ ಜಾಗವಿಲ್ಲ: ಮೀನುಗಾರ ಕುಟುಂಬಗಳ ಗೋಳು ಕೇಳುವವರಾರು?

ಚಿಕ್ಕಮಗಳೂರು: ಪ್ರಗತಿಪರ ಸಮಾಜದಲ್ಲಿ ಸತ್ತವರ ಘನತೆಗೂ ಬೆಲೆಯಿಲ್ಲವೇ? ಬದುಕಿದ್ದಾಗ ಮಾತ್ರವಲ್ಲ, ಸತ್ತ ನಂತರವೂ ನೆಮ್ಮದಿಯಾಗಿ ಅಂತ್ಯಸಂಸ್ಕಾರ ಮಾಡುವ ಭಾಗ್ಯವೂ ಇಲ್ಲದೆ, ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲ್ಲೂಕಿನ ರಾವೂರು ಮೀನುಗಾರ ಕುಟುಂಬಗಳು ಭದ್ರಾ ಜಲಾಶಯದ ಹಿನ್ನೀರಿನಲ್ಲಿ ಅನುಭವಿಸುತ್ತಿರುವ ದುಃಸ್ಥಿತಿ ಮನ ಕಲಕುವಂತಿದೆ. ಮಳೆಗಾಲದಲ್ಲಿ ಶವವನ್ನು ತೆಪ್ಪದಲ್ಲಿ ಹೊತ್ತೊಯ್ದು, ಮೊಣಕಾಲುವರೆಗೆ ನೀರು ನಿಂತ ಜಾಗದಲ್ಲೇ ಅಂತ್ಯಸಂಸ್ಕಾರ ನಡೆಸುವ ಅನಿವಾರ್ಯತೆ ರಾಜ್ಯ ಸರ್ಕಾರ ಹಾಗೂ ಸ್ಥಳೀಯ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕನ್ನಡಿಯಾಗಿದೆ.ತೆಪ್ಪದಲ್ಲಿ ಶವಯಾತ್ರೆ, ನೀರಿನಲ್ಲೇ ಅಂತಿಮ ವಿಧಿ:ಎನ್.ಆರ್.ಪುರ ತಾಲ್ಲೂಕಿನ ಮೆಣಸೂರು ಗ್ರಾಮ…

Read More

ಮಾಜಿ ಸಚಿವ ಗೋವಿಂದೇಗೌಡರ ಮನೆಯಲ್ಲಿ ಲಕ್ಷಾಂತರ ರೂ. ಮೌಲ್ಯದ ಕಳ್ಳತನ; ನೇಪಾಳಿ ದಂಪತಿ ನಾಪತ್ತೆ

ಚಿಕ್ಕಮಗಳೂರು: ‘ಮಲೆನಾಡಿನ ಗಾಂಧಿ’ ಎಂದೇ ಖ್ಯಾತರಾಗಿದ್ದ ಮಾಜಿ ಸಚಿವ ದಿವಂಗತ ಎಚ್.ಜಿ. ಗೋವಿಂದೇಗೌಡರ ಕುಟುಂಬದ ಮನೆಯಲ್ಲಿ ಕಳ್ಳತನ ನಡೆದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲ್ಲೂಕಿನಲ್ಲಿ ಬೆಳಕಿಗೆ ಬಂದಿದೆ. ಮನೆಯ ಕೆಲಸಕ್ಕೆ ಸೇರಿದ್ದ ನೇಪಾಳ ಮೂಲದ ದಂಪತಿ, ₹7 ಲಕ್ಷ ನಗದು ಮತ್ತು ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ.ಗೋವಿಂದೇಗೌಡರ ಪುತ್ರ ವೆಂಕಟೇಶ್ ಅವರು ನೀಡಿದ ದೂರಿನ ಪ್ರಕಾರ, ಕಳ್ಳತನವು ಕೊಪ್ಪ ತಾಲ್ಲೂಕಿನ ಮಣಿಪುರ ಎಸ್ಟೇಟ್‌ನಲ್ಲಿ ನಡೆದಿದೆ. ಕೇವಲ 15 ದಿನಗಳ ಹಿಂದೆ ಮನೆಯ ಕೆಲಸಕ್ಕೆ ಸೇರಿದ್ದ ನೇಪಾಳ ಮೂಲದ…

Read More

ಚಿಕ್ಕಮಗಳೂರು: ಜೀಪ್ ಚಾಲಕ ಆತ್ಮಹತ್ಯೆ ಪ್ರಕರಣ; ಪೊಲೀಸರಿಂದ ಕಾನ್ಸ್​​ಟೇಬಲ್ ಬಂಧನ

ಚಿಕ್ಕಮಗಳೂರು: ಕಳಸ ತಾಲ್ಲೂಕಿನ ಬಸ್ತಿಗದ್ದೆ ಗ್ರಾಮದ ಜೀಪ್ ಚಾಲಕ ನಾಗೇಶ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಕಿರುಕುಳ ನೀಡಿದ ಆರೋಪದ ಮೇಲೆ ಕುದುರೆಮುಖ ಪೊಲೀಸ್ ಠಾಣೆಯ ಕಾನ್ಸ್​​ಟೇಬಲ್ ಸಿದ್ದೇಶ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದ ಹಿನ್ನೆಲೆ:ಕಳೆದ ಜುಲೈ 17ರಂದು ಜೀಪ್ ಚಾಲಕ ನಾಗೇಶ್ ತನ್ನ ಕೆಲಸ ಮುಗಿಸಿ ಹಿಂತಿರುಗುತ್ತಿದ್ದಾಗ, ಕುದುರೆಮುಖ ಪೊಲೀಸ್ ಠಾಣೆಯ ಪೇದೆ ಸಿದ್ದೇಶ್ ರಸ್ತೆಯ ಮಧ್ಯದಲ್ಲಿ ಸ್ನೇಹಿತರೊಂದಿಗೆ ಮದ್ಯಪಾನ ಮಾಡುತ್ತಿದ್ದರು. ರಸ್ತೆಯನ್ನು ಬಿಟ್ಟು ಪಕ್ಕಕ್ಕೆ ನಿಲ್ಲುವಂತೆ ನಾಗೇಶ್ ಸೂಚಿಸಿದಾಗ, ಕೋಪಗೊಂಡ ಸಿದ್ದೇಶ್ ನಾಗೇಶ್‌ ಮೇಲೆ ಹಲ್ಲೆ ನಡೆಸಿದ್ದಾರೆ…

Read More

ಚಿಕ್ಕಮಗಳೂರು: ವಾರಾಂತ್ಯದ ರಜೆಯಿಂದ ಮುಳ್ಳಯ್ಯನಗಿರಿ-ದತ್ತಪೀಠದಲ್ಲಿ ಭಾರಿ ಟ್ರಾಫಿಕ್ ಜಾಮ್, ಪ್ರವಾಸಿಗರ ಪರದಾಟ

ಚಿಕ್ಕಮಗಳೂರು: ವಾರಾಂತ್ಯದ ರಜೆಯಿಂದ ಮುಳ್ಳಯ್ಯನಗಿರಿ-ದತ್ತಪೀಠದಲ್ಲಿ ಭಾರಿ ಟ್ರಾಫಿಕ್ ಜಾಮ್, ಪ್ರವಾಸಿಗರ ಪರದಾಟ ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆ ಮತ್ತು ವಾರಾಂತ್ಯದ ಸರಣಿ ರಜೆಗಳ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ-ದತ್ತಪೀಠ ಭಾಗದಲ್ಲಿ ಪ್ರವಾಸಿಗರ ದಂಡೇ ಹರಿದು ಬಂದಿದ್ದು, ಸುಮಾರು 4 ಕಿಲೋಮೀಟರ್‌ಗಳಷ್ಟು ಉದ್ದದ ಭಾರಿ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನಗಳ ನಿಯಂತ್ರಣ ಕಷ್ಟಸಾಧ್ಯವಾದ ಕಾರಣ ಪೊಲೀಸರು ತಾತ್ಕಾಲಿಕವಾಗಿ ಪ್ರವಾಸಿಗರ ಪ್ರವೇಶವನ್ನು ನಿರ್ಬಂಧಿಸಿದ್ದಾರೆ.ಮುಳ್ಳಯ್ಯನಗಿರಿ ಮತ್ತು ದತ್ತಪೀಠದ ನಡುವಿನ ಕೈಮರ ಚೆಕ್‌ಪೋಸ್ಟ್‌ನಿಂದ ಎನ್.ಎಂ.ಡಿ.ಸಿ.ವರೆಗೂ ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರವಾಸಿಗರು ಮಳೆ ಮತ್ತು ಮಂಜಿನ ಮಧ್ಯೆ…

Read More