ಬೆಳಗಾವಿ: ಕುಡಿಯುವ ನೀರಿಗಾಗಿ ವಡಗಾಂವ್ನಲ್ಲಿ ಮಹಿಳೆಯರ ಆಕ್ರೋಶ ಪ್ರತಿಭಟನೆ ವೇಳೆ ಪೊಲೀಸರೊಂದಿಗೆ ಘರ್ಷಣೆ
ಬೆಳಗಾವಿ: “ಹೆಣ್ಣು ಒಲಿದರೆ ನಾರಿ, ಮುನಿದರೆ ಮಾರಿ” ಎಂಬ ಮಾತಿಗೆ ಇಂದು ವಡಗಾಂವ್ನ ರಾಯತ ಗಲ್ಲಿಯಲ್ಲಿ ನಡೆದ ಘಟನೆಯೇ ಸಾಕ್ಷಿಯಾಗಿದೆ. ಮೂಲಭೂತ ಸೌಕರ್ಯವಾದ ಕುಡಿಯುವ ನೀರಿಗಾಗಿ ಬೀದಿಗಿಳಿದ ಮಹಿಳೆಯರು, ವ್ಯವಸ್ಥೆಯ ವಿರುದ್ಧ ಸಿಡಿದೆದ್ದು ನಿಂತ ಪರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಹಿಡಿದ ಕೈಗನ್ನಡಿಯಂತಿದೆ. ಕಳೆದ ಹಲವು ದಿನಗಳಿಂದ ಕುಡಿಯುವ ನೀರಿನ ಸಮಸ್ಯೆಯಿಂದ ಕಂಗಾಲಾಗಿದ್ದ ರಾಯತ ಗಲ್ಲಿಯ ನಿವಾಸಿಗಳು, ಇಂದು ಮಹಾನಗರ ಪಾಲಿಕೆಯ ವಿರುದ್ಧ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು. ಕಲುಷಿತ ನೀರು ಪೂರೈಕೆಯಾಗುತ್ತಿರುವ ಬಗ್ಗೆ ಪದೇ ಪದೇ ದೂರು…

