ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಜಾರಕಿಹೊಳಿ ಬಣಕ್ಕೆ ಭರ್ಜರಿ ಗೆಲುವು; 7 ಸ್ಥಾನಗಳ ಫಲಿತಾಂಶ ಪ್ರಕಟಮತದಾನದ ವೇಳೆ ಮಾರಾಮಾರಿ; ರಾಯಬಾಗ ಕ್ಷೇತ್ರ ವಿವಾದದ ಕೇಂದ್ರ
ಬೆಳಗಾವಿ: ರಾಜ್ಯ ರಾಜಕಾರಣದಲ್ಲಿ ತೀವ್ರ ಪ್ರತಿಷ್ಠೆಯ ಕಣವಾಗಿದ್ದ ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ (ಡಿಸಿಸಿ) ಬ್ಯಾಂಕ್ ನಿರ್ದೇಶಕರ ಸ್ಥಾನಗಳಿಗೆ ಭಾನುವಾರ (ಅ.19) ನಡೆದ ಚುನಾವಣೆಯು ಉದ್ವಿಗ್ನ ಪರಿಸ್ಥಿತಿಯಲ್ಲಿ ಮುಕ್ತಾಯಗೊಂಡಿದ್ದು, ಇಂದು ಸಂಜೆ ಫಲಿತಾಂಶ ಪ್ರಕಟಗೊಂಡಿದೆ. ಚುನಾವಣೆಗೆ ಸ್ಪರ್ಧಿಸಿದ್ದ 7 ಸ್ಥಾನಗಳ ಪೈಕಿ ಬಹುಪಾಲು ಸ್ಥಾನಗಳನ್ನು ಜಾರಕಿಹೊಳಿ ಬಣವು ಗೆದ್ದುಕೊಳ್ಳುವ ಮೂಲಕ ಬ್ಯಾಂಕ್ ಮೇಲೆ ತಮ್ಮ ಹಿಡಿತವನ್ನು ಮತ್ತಷ್ಟು ಭದ್ರಪಡಿಸಿಕೊಂಡಿದೆ. ಮತದಾನ ಕೇಂದ್ರದಲ್ಲಿ ಮಾರಾಮಾರಿ:ಮತದಾನ ಪ್ರಕ್ರಿಯೆಯು ಬಿ.ಕೆ. ಮಾಡೆಲ್ ಪ್ರೌಢಶಾಲೆಯಲ್ಲಿ ಬೆಳಗ್ಗೆ ಆರಂಭವಾಗುತ್ತಿದ್ದಂತೆಯೇ, ಮತಗಟ್ಟೆ ಬಳಿ ಜಾರಕಿಹೊಳಿ ಹಾಗೂ…

