ಕೃಷ್ಣಾ, ಘಟಪ್ರಭಾ ನದಿಗಳು ಅಪಾಯ ಮಟ್ಟ ಮೀರಿ ಹರಿವು: ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಹ ಭೀತಿ, ರಸ್ತೆ ಸಂಪರ್ಕ ಕಡಿತ

ಬೆಳಗಾವಿ: ಗಡಿ ಜಿಲ್ಲೆ ಬೆಳಗಾವಿ ಹಾಗೂ ನೆರೆಯ ಮಹಾರಾಷ್ಟ್ರದಲ್ಲಿ ಧಾರಾಕಾರ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ, ಕೃಷ್ಣಾ, ಘಟಪ್ರಭಾ ಸೇರಿದಂತೆ ಏಳು ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಇದರಿಂದಾಗಿ ಅನೇಕ ಕಡೆಗಳಲ್ಲಿ ಕೆಳಮಟ್ಟದ ಸೇತುವೆ ಮತ್ತು ಬ್ಯಾರೇಜ್‌ಗಳು ಜಲಾವೃತಗೊಂಡಿದ್ದು, ರಸ್ತೆ ಸಂಪರ್ಕ ಕಡಿತಗೊಂಡಿದೆ. ಗೋಕಾಕ್‌ನಲ್ಲಿ ಪ್ರವಾಹದ ಅವಾಂತರ:ಘಟಪ್ರಭಾ ನದಿಯ ಪ್ರವಾಹ ಮತ್ತಷ್ಟು ಹೆಚ್ಚಾಗಿದ್ದು, ಹಿಡಕಲ್ ಜಲಾಶಯದಿಂದ ಭಾರೀ ಪ್ರಮಾಣದ ನೀರನ್ನು ನದಿಗೆ ಬಿಡಲಾಗುತ್ತಿದೆ. ಪರಿಣಾಮವಾಗಿ, ಗೋಕಾಕ್ ಪಟ್ಟಣದ ಕೆಲವು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿದೆ. ನಗರದ…

Read More

ಬೆಳಗಾವಿಯಲ್ಲಿ ಭಾರೀ ಮಳೆ: 8 ತಾಲ್ಲೂಕುಗಳು ಹಾಗೂ ಚಿಕ್ಕಮಗಳೂರು ಜಿಲ್ಲೆಯ ಕೆಲ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಬೆಳಗಾವಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ನಾಳೆ, ಆಗಸ್ಟ್ 19 ರಂದು, ಜಿಲ್ಲೆಯ ಎಂಟು ತಾಲ್ಲೂಕುಗಳ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅವರು ಈ ಕುರಿತು ಆದೇಶ ಹೊರಡಿಸಿದ್ದು, ಬೆಳಗಾವಿ, ಕಿತ್ತೂರು, ಬೈಲಹೊಂಗಲ, ಸವದತ್ತಿ, ರಾಮದುರ್ಗ, ಖಾನಾಪುರ, ಚಿಕ್ಕೋಡಿ ಮತ್ತು ಹುಕ್ಕೇರಿ ತಾಲ್ಲೂಕುಗಳ ಎಲ್ಲಾ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಶಾಲೆಗಳು, ಪ್ರೌಢಶಾಲೆಗಳು ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಇರಲಿದೆ…

Read More

ರಾಮದುರ್ಗದಲ್ಲಿ ಭೀಕರ ಅಪಘಾತ: ದೇವಸ್ಥಾನಕ್ಕೆ ತೆರಳುತ್ತಿದ್ದ ಅರ್ಚಕ ಸೇರಿ ಇಬ್ಬರು ಸಾವು

ರಾಮದುರ್ಗ: ಟಾಟಾ ಏಸ್ ವಾಹನ ಮತ್ತು ಸ್ಕೂಟರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಅರ್ಚಕರೊಬ್ಬರು ಸೇರಿದಂತೆ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ರಾಮದುರ್ಗ ಪಟ್ಟಣದ ಶಿವನಮೂರ್ತಿ ದೇವಸ್ಥಾನದ ಬಳಿ ಭಾನುವಾರ ನಡೆದಿದೆ. ಈ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿರುವ ಮತ್ತಿಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತರನ್ನು ಅರ್ಚಕರಾದ ವಿಜಯಕುಮಾರ ಗಣಪತಿ ಗೋಡಬೋಲೆ (54) ಮತ್ತು ಟಾಟಾ ಏಸ್ ವಾಹನದ ಚಾಲಕ, ಗುಲ್ಬರ್ಗಾದ ನಿವಾಸಿ ಅನೀಲ ರಮೇಶ ಬಿರಾದಾರ (21) ಎಂದು ಗುರುತಿಸಲಾಗಿದೆ. ಘಟನೆ ವಿವರ:ಘಟನೆ ನಡೆದ ಸಂದರ್ಭದಲ್ಲಿ, ಸವದತ್ತಿಯಿಂದ…

Read More