ರಾಯಚೂರು: ಜಾತ್ರೆ ಮುಗಿಸಿ ಮರಳುವಾಗ ಭೀಕರ ಅಪಘಾತ; ಬೈಕ್‌ಗೆ ಟಿಪ್ಪರ್ ಡಿಕ್ಕಿಯಾಗಿ ಇಬ್ಬರು ಸಾವು

ರಾಯಚೂರು: ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯಲ್ಲಿ ಭಾನುವಾರ ರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅತ್ತನೂರು ದಿಡ್ಡಿ ಬಸವೇಶ್ವರ ಜಾತ್ರೆ ಮುಗಿಸಿ ಮನೆಗೆ ಮರಳುತ್ತಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಾತ್ರೆಯ ಸಂಭ್ರಮದಲ್ಲಿದ್ದ ಕುಟುಂಬವೊಂದು ದುರಂತ ಅಂತ್ಯ ಕಂಡಿರುವುದು ಇಡೀ ಗ್ರಾಮವನ್ನೇ ಶೋಕಸಾಗರದಲ್ಲಿ ಮುಳುಗಿಸಿದೆ. ​ಘಟನೆಯ ವಿವರ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಶಾಖಾಪುರ ಮುಖ್ಯರಸ್ತೆಯಲ್ಲಿ ಈ ದುರಂತ ನಡೆದಿದೆ. ಮೃತರನ್ನು ಬೈಕ್ ಚಾಲನೆ ಮಾಡುತ್ತಿದ್ದ ಅಂಜಿನಯ್ಯ ನಾಯಕ (37) ಮತ್ತು ಹತ್ತು ವರ್ಷದ ಬಾಲಕಿ ಅರ್ಚನಾ…

Read More

ನೀರಾವರಿ ಯೋಜನೆಗಳಿಗಾಗಿ ಒಟ್ಟಾಗಿ ಹೋರಾಟ ಮಾಡಿ: ಬಿಜೆಪಿ ನಾಯಕರಿಗೆ ಡಿಕೆಶಿ ಸವಾಲು”ಮರಳಿ ಅಧಿಕಾರಕ್ಕೆ ಬರುತ್ತೇವೆ, ಈಗಿನಿಂದಲೇ ಸಿದ್ಧತೆ ನಡೆಸಿ” – ಕಾರ್ಯಕರ್ತರಿಗೆ ಡಿಸಿಎಂ ಕರೆ

ರಾಯಚೂರು: ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ರಾಯಚೂರು ತಾಲ್ಲೂಕಿನ ಪಂಚಮುಖಿಯ ಬ್ಲಾಕ್ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಪ್ರಮುಖವಾಗಿ ರಾಜ್ಯದ ನೀರಾವರಿ ಯೋಜನೆಗಳು, ಪಕ್ಷ ಸಂಘಟನೆ ಮತ್ತು ಸರ್ಕಾರದ ಗ್ಯಾರಂಟಿ ಯೋಜನೆಗಳು ಕುರಿತು ಮಾತನಾಡಿದರು. ರಾಜ್ಯದ ಅಭಿವೃದ್ಧಿ ಬಗ್ಗೆ ಕಾಳಜಿ ಇದ್ದರೆ, ಬಿಜೆಪಿ ನಾಯಕರು ರಾಜಕೀಯ ಬಿಟ್ಟು ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರದ ಮೇಲೆ ಒಟ್ಟಿಗೆ ಒತ್ತಡ ಹಾಕಲು ಬರಲಿ ಎಂದು ಅವರು ಬಹಿರಂಗ ಸವಾಲೆಸೆದರು. ನೀರಾವರಿ ಯೋಜನೆಗಳ ವಿಚಾರದಲ್ಲಿ ಬಿಜೆಪಿ ನಾಯಕರಿಗೆ…

Read More

ಧರ್ಮಸ್ಥಳ ವಿರುದ್ಧದ ಅಪಪ್ರಚಾರಕ್ಕೆ ಬಿಜೆಪಿ ನಾಯಕ ಮಲ್ಲಿಕಾರ್ಜುನ ಬಾಳಿಕಾಯಿ ಆಕ್ರೋಶ: ‘ಕಾಂಗ್ರೆಸ್‌ಗೆ ಸುಮೊಟೊ ಕೇಸ್ ಹಾಕುವ ತಾಕತ್ತಿಲ್ಲ’

ರಾಯಚೂರು: ಧರ್ಮಸ್ಥಳ ಸೇರಿದಂತೆ ಹಿಂದೂ ಧಾರ್ಮಿಕ ಕೇಂದ್ರಗಳ ವಿರುದ್ಧ ನಡೆಯುತ್ತಿರುವ ಅಪಪ್ರಚಾರವನ್ನು ಖಂಡಿಸಿ, ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ. ಮಲ್ಲಿಕಾರ್ಜುನ ಬಾಳಿಕಾಯಿ ಅವರು ಕಾಂಗ್ರೆಸ್ ಸರ್ಕಾರ ಮತ್ತು ಯೂಟ್ಯೂಬರ್ ಸಮೀರ್ ಮುಲ್ಲಾ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ರಾಯಚೂರಿನಲ್ಲಿ ವೀರ ಸಾವರ್ಕರ್ ಅಸೋಸಿಯೇಷನ್ ಆಯೋಜಿಸಿದ್ದ ಗಣೇಶ ವಿಸರ್ಜನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈ ಅಪಪ್ರಚಾರದ ಹಿಂದೆ ಕ್ರಿಶ್ಚಿಯನ್ ಸಂಸ್ಥೆಗಳ ಕೈವಾಡವಿದೆ ಎಂದು ಗಂಭೀರ ಆರೋಪ ಮಾಡಿದರು. ‘ಧರ್ಮಾಧಿಕಾರಿಗಳ ಚಪ್ಪಲಿಗೂ ಸಮಾನರಲ್ಲ’ಡಾ. ಮಲ್ಲಿಕಾರ್ಜುನ ಬಾಳಿಕಾಯಿ ಅವರು ಧರ್ಮಸ್ಥಳದ…

Read More

ಮಾಹಿತಿ ಹಕ್ಕು ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯೋಗದ ಕಟ್ಟುನಿಟ್ಟಿನ ಸೂಚನೆ

ಮಾಹಿತಿ ಹಕ್ಕು ಅರ್ಜಿಗಳನ್ನು ಕಾಲಮಿತಿಯೊಳಗೆ ವಿಲೇವಾರಿ ಮಾಡಿ: ಅಧಿಕಾರಿಗಳಿಗೆ ರಾಜ್ಯ ಮಾಹಿತಿ ಆಯೋಗದ ಕಟ್ಟುನಿಟ್ಟಿನ ಸೂಚನೆ ರಾಯಚೂರು: ಮಾಹಿತಿ ಹಕ್ಕು ಕಾಯಿದೆಯಡಿ ಸಲ್ಲಿಕೆಯಾಗುವ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷಿಸದೆ, ನಿಗದಿತ ಕಾಲಮಿತಿಯೊಳಗೆ ವಿಲೇವಾರಿ ಮಾಡಬೇಕು ಎಂದು ರಾಜ್ಯ ಮಾಹಿತಿ ಆಯೋಗದ ಪೀಠ ಸಂಖ್ಯೆ-4ರ ಆಯುಕ್ತ ರುದ್ರಣ್ಣ ಹರ್ತಿಕೋಟಿ ಮತ್ತು ಪೀಠ ಸಂಖ್ಯೆ-5ರ ಆಯುಕ್ತ ರಾಜಶೇಖರ್ ಅವರು ಸಾರ್ವಜನಿಕ ಮಾಹಿತಿ ಅಧಿಕಾರಿಗಳಿಗೆ (ಪಿಐಒ) ಮತ್ತು ಪ್ರಥಮ ಮೇಲ್ಮನವಿ ಪ್ರಾಧಿಕಾರಿಗಳಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು. ಅರ್ಜಿಗಳಿಗೆ ಕಾಲಮಿತಿಯಲ್ಲಿ ಉತ್ತರ ನೀಡಿದರೆ…

Read More

ಸಿಂಧನೂರು: ಮೃತದೇಹ ಸಾಗಿಸಲು ಹಳ್ಳ ದಾಟುವ ಗೋಮರ್ಸಿ ಗ್ರಾಮಸ್ಥರ ಗೋಳು – ಸರ್ಕಾರದ ಗಮನ ಸೆಳೆಯಲು ನಿವಾಸಿಗಳ ಆಗ್ರಹ

ಸಿಂಧನೂರು: ಮೃತದೇಹ ಸಾಗಿಸಲು ಹಳ್ಳ ದಾಟುವ ಗೋಮರ್ಸಿ ಗ್ರಾಮಸ್ಥರ ಗೋಳು – ಸರ್ಕಾರದ ಗಮನ ಸೆಳೆಯಲು ನಿವಾಸಿಗಳ ಆಗ್ರಹ ಸಿಂಧನೂರು: ಬದುಕಿರುವಾಗ ರಸ್ತೆ, ಸೇತುವೆಯಂತಹ ಮೂಲಭೂತ ಸೌಕರ್ಯಗಳಿಲ್ಲದೆ ಪರದಾಡುವ ಜನರು, ಮರಣದ ನಂತರವೂ ನೆಮ್ಮದಿಯ ಅಂತ್ಯಸಂಸ್ಕಾರಕ್ಕೆ ಒದ್ದಾಡುವ ದುಃಸ್ಥಿತಿ ಸಿಂದನೂರು ತಾಲ್ಲೂಕಿನ ಗೋಮರ್ಸಿ ಗ್ರಾಮದಲ್ಲಿದೆ. ಮಳೆಗಾಲ ಮತ್ತು ತುಂಗಭದ್ರಾ ಜಲಾಶಯದಿಂದ ನೀರು ಬಿಟ್ಟಾಗ ಗ್ರಾಮದ ಜನರು ಮೃತದೇಹವನ್ನು ಹೂಳಲು ಹಳ್ಳವನ್ನು ದಾಟುವ ಅನಿವಾರ್ಯ ಪರಿಸ್ಥಿತಿ ರಾಜ್ಯ ಸರ್ಕಾರದ ನಿರ್ಲಕ್ಷ್ಯಕ್ಕೆ ಕನ್ನಡಿ ಹಿಡಿದಂತಿದೆ. ಶನಿವಾರದ ನಡೆದ ಘಟನೆಯಲ್ಲಿ ಮೃತದೇಹ…

Read More