ಧರ್ಮಸ್ಥಳ ಪ್ರಕರಣ: ಯೂಟ್ಯೂಬರ್ ಸಮೀರ್‌ಗೆ 9 ಗಂಟೆಗೂ ಹೆಚ್ಚು ಕಾಲ ವಿಚಾರಣೆ

ಬೆಳ್ತಂಗಡಿ: ಧರ್ಮಸ್ಥಳ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೃತಕ ಬುದ್ಧಿಮತ್ತೆ (AI) ಬಳಸಿ ಅವಹೇಳನಕಾರಿ ವಿಡಿಯೊಗಳನ್ನು ತಯಾರಿಸಿದ ಆರೋಪದ ಮೇಲೆ ಯೂಟ್ಯೂಬರ್ ಸಮೀರ್ ಎಂ.ಡಿ. ಅವರನ್ನು ಸೋಮವಾರ (ಆಗಸ್ಟ್‌ 25) ಧರ್ಮಸ್ಥಳ ಮತ್ತು ಬೆಳ್ತಂಗಡಿ ಪೊಲೀಸ್ ಠಾಣೆಗಳಲ್ಲಿ ಪೊಲೀಸರು ಸತತ ಎರಡನೇ ದಿನವೂ ತೀವ್ರ ವಿಚಾರಣೆ ನಡೆಸಿದರು. ಸಮೀರ್ ಅವರು ತಮ್ಮ ವಕೀಲರೊಂದಿಗೆ ಬೆಳಿಗ್ಗೆ 12:20ಕ್ಕೆ ಬೆಳ್ತಂಗಡಿ ಪೊಲೀಸ್ ಠಾಣಾ ಕಚೇರಿಗೆ ಹಾಜರಾಗಿದ್ದರು. ಮೊದಲಿಗೆ ಧರ್ಮಸ್ಥಳ ಪ್ರಕರಣದ ತನಿಖಾಧಿಕಾರಿ, ಸರ್ಕಲ್ ಇನ್ಸ್‌ಪೆಕ್ಟರ್ ನಾಗೇಶ್ ಕದ್ರಿ ಅವರು ಸಮೀರ್‌ರನ್ನು ವಿಚಾರಣೆಗೊಳಪಡಿಸಿದರು. ನಂತರ,…

Read More

ಸುಳ್ಳು ವಿಡಿಯೊ ಪ್ರಕರಣ: ಯೂಟ್ಯೂಬರ್‌ ಸಮೀರ್‌ ಪೊಲೀಸ್‌ ವಿಚಾರಣೆಗೆ ಹಾಜರು

ಬೆಳ್ತಂಗಡಿ: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಎಐ (ಕೃತಕ ಬುದ್ಧಿಮತ್ತೆ) ತಂತ್ರಜ್ಞಾನ ಬಳಸಿ ಸುಳ್ಳು ವಿಡಿಯೊ ಸೃಷ್ಟಿಸಿ ಪ್ರಸಾರ ಮಾಡಿದ ಆರೋಪ ಎದುರಿಸುತ್ತಿರುವ ಯೂಟ್ಯೂಬರ್ ಸಮೀರ್‌ ಎಂ.ಡಿ. ಭಾನುವಾರ ಮಧ್ಯಾಹ್ನ 1 ಗಂಟೆಗೆ ಬೆಳ್ತಂಗಡಿ ಪೊಲೀಸ್‌ ಠಾಣೆಗೆ ಹಾಜರಾಗಿದ್ದಾರೆ.ಸಮೀರ್‌ ಅವರು ತಮ್ಮ ‘ದೂತ’ ಯೂಟ್ಯೂಬ್‌ ಚಾನೆಲ್‌ನಲ್ಲಿ, ಧರ್ಮಸ್ಥಳದ ಸುತ್ತಮುತ್ತಲ ಪ್ರದೇಶದಲ್ಲಿ ಹಲವಾರು ಮೃತದೇಹಗಳನ್ನು ಹೂತುಹಾಕಲಾಗಿದೆ ಎಂದು ಕಾಲ್ಪನಿಕ ಮಾಹಿತಿಗಳನ್ನು ಬಿತ್ತರಿಸಿದ್ದರು. ಈ ಸಂಬಂಧ ಜುಲೈ 12ರಂದು ಧರ್ಮಸ್ಥಳ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ದಾಖಲಾದ ನಂತರ ಪೊಲೀಸರು…

Read More

ಮಹೇಶ್‌ ಶೆಟ್ಟಿ ತಿಮರೋಡಿಗೆ ಷರತ್ತುಬದ್ಧ ಜಾಮೀನು ಮಂಜೂರು

ಉಡುಪಿ: ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರ ಕುರಿತು ಅವಹೇಳನಕಾರಿಯಾಗಿ ಮಾತನಾಡಿದ ಆರೋಪದ ಮೇಲೆ ನ್ಯಾಯಾಂಗ ಬಂಧನದಲ್ಲಿದ್ದ ಸೌಜನ್ಯ ಪರ ಹೋರಾಟಗಾರ ಹಾಗೂ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆ ಸಂಸ್ಥಾಪಕ ಮಹೇಶ್‌ ಶೆಟ್ಟಿ ತಿಮರೋಡಿ ಅವರಿಗೆ ಉಡುಪಿ ಜಿಲ್ಲಾ ನ್ಯಾಯಾಲಯ ಶನಿವಾರ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಬ್ರಹ್ಮಾವರ ಪೊಲೀಸರು ತಮ್ಮ ವಶಕ್ಕೆ ನೀಡುವಂತೆ ಮನವಿ ಮಾಡಿಕೊಂಡಿದ್ದ ಹಿನ್ನೆಲೆಯಲ್ಲಿ, ಹಿರಿಯಡ್ಕದ ಜಿಲ್ಲಾ ಕಾರಾಗೃಹದಿಂದ ಬಿಗಿ ಭದ್ರತೆಯಲ್ಲಿ ಮಹೇಶ್‌ ಶೆಟ್ಟಿ ತಿಮರೋಡಿ ಅವರನ್ನು ಶನಿವಾರ…

Read More

ಧರ್ಮಸ್ಥಳ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಸುಳ್ಳು ಮಾಹಿತಿ ನೀಡಿದ ‘ಮಾಸ್ಕ್ ಮ್ಯಾನ್’ ಬಂಧನ

ಧರ್ಮಸ್ಥಳ :ಪ್ರಕರಣಕ್ಕೆ ಸಂಬಂಧಿಸಿದಂತೆ ಸುಳ್ಳು ಮಾಹಿತಿ ನೀಡಿದ ಆರೋಪದಡಿ ವಿಶೇಷ ತನಿಖಾ ದಳ (ಎಸ್ಐಟಿ) ಇಂದು ‘ಮಾಸ್ಕ್ ಮ್ಯಾನ್’ ಎಂದು ಕರೆಸಿಕೊಂಡಿದ್ದ ದೂರುದಾರ ಸಿ.ಎನ್. ಚಿನ್ನಯ್ಯ ಅಲಿಯಾಸ್ ಚೆನ್ನ ಎಂಬಾತನನ್ನು ಬಂಧಿಸಿದೆ.ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂಳಲಾಗಿದೆ ಎಂದು ಚಿನ್ನಯ್ಯ ಆರೋಪಿಸಿದ್ದ. ಈ ಹಿನ್ನೆಲೆಯಲ್ಲಿ ಎಸ್ಐಟಿ ತಂಡವು ಆತನ ಹೇಳಿಕೆ ಆಧರಿಸಿ ತನಿಖೆ ನಡೆಸಿತ್ತು. ನಿನ್ನೆ ಬೆಳಗ್ಗೆ 10 ಗಂಟೆಯಿಂದ ಇಂದಿನ ಬೆಳಗ್ಗೆಯವರೆಗೆ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗಿತ್ತು. ಸುದೀರ್ಘ ವಿಚಾರಣೆಯ ಬಳಿಕ ಆತನ ಆರೋಪಗಳು ಸುಳ್ಳು ಎಂದು…

Read More

ವಿಚಾರಣೆಗೆ ಗೈರು: ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನೋಟಿಸ್, ಜಾಮೀನು ರದ್ದು ಸಾಧ್ಯತೆ

ಬೆಳ್ತಂಗಡಿ: ಯೂಟ್ಯೂಬರ್ ಸಮೀರ್ ಎಂ.ಡಿ. ಅವರಿಗೆ ಮಂಗಳೂರು ನ್ಯಾಯಾಲಯದಿಂದ ಜಾಮೀನು ಸಿಕ್ಕಿದ್ದರೂ, ಧರ್ಮಸ್ಥಳ ಪೊಲೀಸರ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ, ಪೊಲೀಸರು ಅವರ ನಿವಾಸಗಳಿಗೆ ನೋಟಿಸ್ ಅಂಟಿಸಿದ್ದಾರೆ. ವಿಚಾರಣೆಗೆ ಗೈರಾದ ಕಾರಣ ಸಮೀರ್ ಅವರ ನಿರೀಕ್ಷಣಾ ಜಾಮೀನು ರದ್ದುಗೊಳಿಸಿ ಅವರನ್ನು ಬಂಧಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಧರ್ಮಸ್ಥಳ ಪೊಲೀಸರ ಒಂದು ತಂಡವು ಆಗಸ್ಟ್ 22ರ ಶುಕ್ರವಾರದಂದು ಸಮೀರ್ ಅವರು ನ್ಯಾಯಾಲಯಕ್ಕೆ ನೀಡಿದ್ದ ಬಳ್ಳಾರಿ ಜಿಲ್ಲೆಯ ಕೌಲ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ಬಂಡಿಹಟ್ಟಿಯ ವಿಳಾಸಕ್ಕೆ ತೆರಳಿದಾಗ, ಮನೆಗೆ…

Read More

ಸೌಜನ್ಯ ಪ್ರಕರಣ: “ಅನಾಮಿಕರ ಹಿಂದೆ ನಾವಿದ್ದೇವೆ, ಆರೋಪಗಳಿಗೆ ಎಸ್‌ಐಟಿ ತನಿಖೆ ಎದುರಿಸಲು ಸಿದ್ಧ” – ಹೋರಾಟಗಾರರು

ಬೆಳ್ತಂಗಡಿ: ಧರ್ಮಸ್ಥಳ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ನ್ಯಾಯಕ್ಕಾಗಿ ಹೋರಾಡುತ್ತಿರುವ ಸೌಜನ್ಯ ಪರ ಹೋರಾಟಗಾರರಾದ ಗಿರೀಶ್ ಮಟ್ಟಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ಅವರು, ತಮ್ಮ ಹಿಂದೆ “ಅನಾಮಿಕ ವ್ಯಕ್ತಿ” ಇದ್ದಾರೆಂಬ ಆರೋಪವನ್ನು ತಳ್ಳಿ ಹಾಕಿದ್ದಾರೆ. “ಯಾರೋ ಒಬ್ಬ ವ್ಯಕ್ತಿ ಹಿಂದೆ ಇಲ್ಲ, ನಮ್ಮಂತಹ ನೂರಾರು ಜನರು ಈ ಹೋರಾಟದ ಜೊತೆಗಿದ್ದಾರೆ. ಇದರಲ್ಲಿ ಯಾವುದೇ ಮುಚ್ಚುಮರೆ ಇಲ್ಲ” ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರವಿವಾರ ಪತ್ರಕರ್ತರೊಂದಿಗೆ ಜಂಟಿಯಾಗಿ ಮಾತನಾಡಿದ ಅವರು, ಈ ಹೋರಾಟಕ್ಕಾಗಿ ತಾವು ವಿದೇಶದಿಂದ ಹಣ…

Read More