ಅಕ್ರಮ ಪಡಿತರ ಅಕ್ಕಿ ಸಾಗಣೆ ಪ್ರಕರಣ: ಆಳಂದ ಸಿಪಿಐ ಸೇರಿ ನಾಲ್ವರು ಅಮಾನತು
ಕಲಬುರಗಿ: ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಪಡಿತರ ಅಕ್ಕಿ ಸಾಗಿಸುತ್ತಿದ್ದ ವಾಹನವನ್ನು ಜಪ್ತಿ ಮಾಡಿದ ಬಳಿಕ ಪ್ರಕರಣ ದಾಖಲಿಸದೆ ಹಣ ಪಡೆದು ವಾಹನವನ್ನು ಬಿಟ್ಟು ಕಳುಹಿಸಿದ ಆರೋಪದ ಹಿನ್ನೆಲೆಯಲ್ಲಿ ಆಳಂದ ಸಿಪಿಐ ಸೇರಿದಂತೆ ನಾಲ್ವರು ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಅಮಾನತುಗೊಂಡವರಲ್ಲಿ ಆಳಂದ ಸಿಪಿಐ ಹಾಗೂ ಮುಖ್ಯಮಂತ್ರಿ ಪದಕ ವಿಜೇತ ಶರಣಬಸಪ್ಪ ಕೋಡ್ತಾ, ಪೇದೆಗಳಾದ ಹಣಮಂತ, ಮಲ್ಲಿಕಾರ್ಜುನ ಹಾಗೂ ಸಾಯಬಣ್ಣ ಸೇರಿದ್ದಾರೆ. ಕಳೆದ ಸೋಮವಾರ ಮಧ್ಯರಾತ್ರಿ 112ಕ್ಕೆ ಬಂದ ದೂರಿನ ಆಧಾರದ ಮೇಲೆ ಆಳಂದ ಪೊಲೀಸರು, ಆಳಂದ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಅಕ್ರಮವಾಗಿ…

