ಕಲಬುರಗಿ: ಸರಣಿ ಅಪಘಾತಕ್ಕೆ ನಾಲ್ವರ ದುರ್ಮರಣ;
ಕಲಬುರಗಿ/ಭಾಲ್ಕಿ: ಕಲಬುರಗಿ ತಾಲ್ಲೂಕಿನ ಅವರಾದ (ಬಿ) ಗ್ರಾಮದ ಬಳಿ ಶುಕ್ರವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಡೀಸೆಲ್ ಟ್ಯಾಂಕರ್, ಬೈಕ್ ಮತ್ತು ಕಾರಿನ ನಡುವೆ ಸಂಭವಿಸಿದ ಸರಣಿ ಅಪಘಾತದಿಂದಾಗಿ ಈ ದುರ್ಘಟನೆ ಸಂಭವಿಸಿದೆ. ಮೃತರ ಪೈಕಿ ಇಬ್ಬರು ಬೈಕ್ ಸವಾರರು ಮತ್ತು ಇಬ್ಬರು ಕಾರು ಪ್ರಯಾಣಿಕರು ಸೇರಿದ್ದಾರೆ. ಮೃತರ ವಿವರ: ಘಟನೆಯಲ್ಲಿ ಬೈಕ್‌ನಲ್ಲಿದ್ದ ಸಿರಡೋಣ ಗ್ರಾಮದ ಉತ್ತಮ ಮೈಲಾರಿ ಭಾವಿಕಟ್ಟಿ ಹಾಗೂ ಕಾರಿನಲ್ಲಿದ್ದ ಒಬ್ಬ ಮಹಿಳೆ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ…

