ಮೌಢ್ಯ ಹೋಗಲಾಡಿಸಲು ವೈಚಾರಿಕತೆ, ಶಿಕ್ಷಣವೇ ಮುಖ್ಯ: ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ
ಲಕ್ಷ್ಮೇಶ್ವರ (ಗದಗ ಜಿಲ್ಲೆ), ಡಿ. 13: ನಾವು ಬಸವಣ್ಣನವರ ನಾಡಿನಲ್ಲಿ ಹುಟ್ಟಿದ್ದರೂ, ಇಂದಿಗೂ ಕೂಡ ಮೌಢ್ಯಗಳನ್ನು ಆಚರಿಸುತ್ತಿರುವುದು ದುರ್ದೈವದ ಸಂಗತಿ. ಮೌಢ್ಯ ಹಾಗೂ ಕಂದಾಚಾರಗಳನ್ನು ಕೊನೆಗಾಣಿಸಲು ಪ್ರತಿಯೊಬ್ಬರೂ ವೈಜ್ಞಾನಿಕ ಮನೋಭಾವ ಮತ್ತು ವೈಚಾರಿಕತೆಯನ್ನು ಅಳವಡಿಸಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ಗದಗ ಜಿಲ್ಲೆಯ ಲಕ್ಷ್ಮೇಶ್ವರದಲ್ಲಿ ಚಂದನ ಎಜುಕೇಶನ್ ಸೊಸೈಟಿ ಆಯೋಜಿಸಿದ್ದ ಭಾರತ ರತ್ನ ಪ್ರೊ.ಸಿ.ಎನ್.ಆರ್ ರಾವ್ ಅವರ 10ನೇ ವರ್ಷದ ವಿಜ್ಞಾನ ವಿಸ್ತೃತ ಕಾರ್ಯಕ್ರಮವನ್ನು ಉದ್ಘಾಟಿಸಿ, 2025ನೇ ಸಾಲಿನ ಪ್ರತಿಷ್ಠಿತ “ಚಂದನ ಶ್ರೀ” ಪ್ರಶಸ್ತಿಯನ್ನು…

