ಚಾಮರಾಜನಗರ ಜಿಲ್ಲೆಯಲ್ಲಿ ಬರ ಅಧ್ಯಯನ: ಕೇಂದ್ರದ ಉನ್ನತ ಮಟ್ಟದ ತಂಡದಿಂದ ಕ್ಷೇತ್ರ ಪರಿಶೀಲನೆ, ಒಣಗಿದ ಜೋಳ, ಸೂರ್ಯಕಾಂತಿ ಬೆಳೆ ವೀಕ್ಷಣೆ; ರೈತರ ಅಳಲು ಆಲಿಸಿದ ಅಧಿಕಾರಿಗಳು

ಚಾಮರಾಜನಗರ, ಅ.6: ಜಿಲ್ಲೆಯ ಬರ ಪರಿಸ್ಥಿತಿಯ ಅಧ್ಯಯನಕ್ಕಾಗಿ ಆಗಮಿಸಿರುವ ಕೇಂದ್ರ ಸರ್ಕಾರದ ಅಂತರ್ ಸಚಿವಾಲಯ ತಂಡ (IMCT) ಮಂಗಳವಾರ ಚಾಮರಾಜನಗರ ಹಾಗೂ ಗುಂಡ್ಲುಪೇಟೆ ತಾಲೂಕಿನ ಬರಪೀಡಿತ ಗ್ರಾಮಗಳಿಗೆ ಭೇಟಿ ನೀಡಿ, ಬೆಳೆ ಹಾನಿ, ಕುಡಿಯುವ ನೀರು ಮತ್ತು ಮೇವಿನ ಕೊರತೆ ಸೇರಿದಂತೆ ಬರದ ವಾಸ್ತವ ಪರಿಸ್ಥಿತಿಯನ್ನು ಖುದ್ದು ಪರಿಶೀಲಿಸಿತು. ಭಾರತ ಸರ್ಕಾರದ ಪಶುಸಂಗೋಪನೆ ಮತ್ತು ಹೈನುಗಾರಿಕೆ ಉಪ ಆಯುಕ್ತ ಡಾ. ಸುಧಾಮ್ ಬೇಗ್, ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಉಪ ಸಲಹೆಗಾರ ಆಶೀಶ್ ಪಾಂಡೆ, ಆಹಾರ…

Read More

ಹನೂರಿನಲ್ಲಿ 5 ಕೋಟಿ ವೆಚ್ಚದ ಕ್ರೀಡಾ ಭಾಗ್ಯ: ಬ್ಯಾಡ್ಮಿಂಟನ್ ಕೋರ್ಟ್, ಈಜುಕೊಳಕ್ಕೆ ಶಂಕುಸ್ಥಾಪನೆ

ಹನೂರು: ಪಟ್ಟಣದ ಮಲೆ ಮಹದೇಶ್ವರ ಕ್ರೀಡಾಂಗಣದ ಸಮಗ್ರ ಅಭಿವೃದ್ಧಿಗೆ ಮತ್ತಷ್ಟು ವೇಗ ದೊರೆತಿದ್ದು, 5 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ನೂತನ ಬ್ಯಾಡ್ಮಿಂಟನ್ ಕೋರ್ಟ್ ಹಾಗೂ ಈಜುಕೊಳ ಕಾಮಗಾರಿಗಳಿಗೆ ಶಾಸಕ ಎಂ.ಆರ್. ಮಂಜುನಾಥ್ ಶಂಕುಸ್ಥಾಪನೆ ನೆರವೇರಿಸಿದರು. ಕಾಮಗಾರಿಗೆ ಈಗಾಗಲೇ 3 ಕೋಟಿ ರೂ. ಅನುದಾನ ಬಿಡುಗಡೆಯಾಗಿದ್ದು, ಕ್ಷೇತ್ರದ ಕ್ರೀಡಾ ಮೂಲಸೌಕರ್ಯ ಅಭಿವೃದ್ಧಿಗೆ ಇದು ಮಹತ್ವದ ಹೆಜ್ಜೆಯಾಗಿದೆ. ಈ ವೇಳೆ ಮಾತನಾಡಿದ ಶಾಸಕ ಮಂಜುನಾಥ್, ಹನೂರು ಕ್ಷೇತ್ರದಲ್ಲಿ ಗ್ರಾಮೀಣ ಪ್ರತಿಭೆಗಳಿಗೆ ಸೂಕ್ತ ಮೂಲಸೌಕರ್ಯ ಕಲ್ಪಿಸಿ, ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಹೆಚ್ಚಿನ…

Read More

16 ಕೋಟಿ ವೆಚ್ಚದಲ್ಲಿ ಹನೂರಿಗೆ ಅತ್ಯಾಧುನಿಕ ಪ್ರಜಾಸೌಧ: ಶಾಸಕ ಎಂ.ಆರ್. ಮಂಜುನಾಥ್‌ರಿಂದ ಗುದ್ದಲಿ ಪೂಜೆ

ಹನೂರು: ತಾಲೂಕಿನ ಜನರ ಬಹುದಿನಗಳ ಬೇಡಿಕೆಯಾಗಿದ್ದ ನೂತನ ಪ್ರಜಾಸೌಧ ಕಟ್ಟಡ ನಿರ್ಮಾಣ ಕಾಮಗಾರಿಗೆ ಹನೂರು ತಾಲೂಕಿನ ಮಂಗಲ ಗ್ರಾಮದ ಹುಲಸುಗುಡ್ಡೆ ಬೋರೆ ಬಳಿ ಶಾಸಕ ಎಂ.ಆರ್. ಮಂಜುನಾಥ್ ಅವರು ಗಂಗೆಪೂಜೆ ಹಾಗೂ ಸ್ಥಳಶುದ್ಧಿ ಪೂಜೆ ನೆರವೇರಿಸುವ ಮೂಲಕ ಶಂಕುಸ್ಥಾಪನೆ ನೆರವೇರಿಸಿದರು.   ಈ ಸಂದರ್ಭದಲ್ಲಿ ಪ್ರಜಾಸೌಧದ ಮಾದರಿ ನಕ್ಷೆಯನ್ನು ಪ್ರದರ್ಶಿಸಿದ ಶಾಸಕರು, ಸಾರ್ವಜನಿಕರಿಗೆ ಎಲ್ಲಾ ಸರ್ಕಾರಿ ಸೇವೆಗಳು ಒಂದೇ ಸೂರಿನಡಿ ದೊರೆಯುವಂತೆ ಸುಸಜ್ಜಿತ ಕಟ್ಟಡ ನಿರ್ಮಿಸುವುದು ಯೋಜನೆಯ ಉದ್ದೇಶ ಎಂದು ತಿಳಿಸಿದರು.   ನೂತನ ಪ್ರಜಾಸೌಧದ ಕನಸು…

Read More

ವರುಣದೇವನ ಅನುಗ್ರಹ: ಹನೂರಿನ ಹುಬ್ಬೆ-ಹುಣಸೆ ಜಲಾಶಯ ಭರ್ತಿ

ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿಯ ಕೃಪೆಯಿಂದ ಈ ಬಾರಿ ಉತ್ತಮ ಮಳೆಯಾಗಿದ್ದು, ಬರಗಾಲದಿಂದ ಕಂಗೆಟ್ಟಿದ್ದ ರೈತರ ಮೊಗದಲ್ಲಿ ಮಂದಹಾಸ ಮೂಡಿದೆ ಎಂದು ಹನೂರು ಶಾಸಕ ಎಂ.ಆರ್. ಮಂಜುನಾಥ್ ಹೇಳಿದರು.   ಪಟ್ಟಣದ ಸಮೀಪದ ತುಂಬಿ ತುಳುಕುತ್ತಿರುವ ಹುಬ್ಬೆ-ಹುಣಸೆ ಜಲಾಶಯಕ್ಕೆ ಭಾನುವಾರ ಭೇಟಿ ನೀಡಿ ಮಾತನಾಡಿದ ಅವರು, ಗಣಪತಿ ಹಬ್ಬದ ವೇಳೆಗೆ ರಾಜ್ಯದಲ್ಲೇ ಹನೂರು ತಾಲೂಕಿನಲ್ಲಿ ಅತಿ ಕಡಿಮೆ ಮಳೆಯಾಗಿತ್ತು. ಬೋರ್‌ವೆಲ್‌ಗಳಲ್ಲಿಯೂ ನೀರು ಸಿಗದ ಪರಿಸ್ಥಿತಿ ಇತ್ತು. ಆದರೆ ಕೇವಲ 2-3 ಗಂಟೆಗಳ ಮಳೆಗೆ…

Read More

ಸಂಧಾನಪಾಳ್ಯದಲ್ಲಿ ರೈತ ಸಂಘದ ಮಹಿಳಾ ಗ್ರಾಮ ಘಟಕ ಉದ್ಘಾಟನೆ

*ಹನೂರು* : ತಾಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಧಾನಪಾಳ್ಯ ಗ್ರಾಮದಲ್ಲಿ ಮೂಲ ಸಿದ್ಧಾಂತದ ಅಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ನೂತನ ಮಹಿಳಾ ಗ್ರಾಮ ಘಟಕವನ್ನು ಉದ್ಘಾಟಿಸಲಾಯಿತು.   ನಂತರ ನಡೆದ ವೇದಿಕೆ ಕಾರ್ಯಕ್ರಮದಲ್ಲಿ ನೂತನ ಮಹಿಳಾ ಹಾಗೂ ಗ್ರಾಮ ಘಟಕದ ಪದಾಧಿಕಾರಿಗಳಿಗೆ ಹಸಿರು ಶಾಲು ಹೊದಿಸಿ, ಅಧಿಕೃತವಾಗಿ ಸಂಘಟನೆಗೆ ಸೇರ್ಪಡೆಗೊಳಿಸಿ ಅಭಿನಂದಿಸಲಾಯಿತು. ಮಹಿಳೆಯರ ಪಾತ್ರ ಮಹತ್ವದ್ದು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಜಿಲ್ಲಾಧ್ಯಕ್ಷ ಗೌಡೇಗೌಡ, ರೈತ ಸಂಘಟನೆಯಲ್ಲಿ ಮಹಿಳೆಯರ ಪಾತ್ರ ಅತ್ಯಂತ…

Read More

ಅಬಕಾರಿ–ಅರಣ್ಯ ಇಲಾಖೆ ಜಂಟಿ ಕಾರ್ಯಾಚರಣೆ: 292 ಗಾಂಜಾ ಗಿಡಗಳು ವಶ

ಹನೂರು : ತಾಲೂಕಿನ ಕೂಳಿಹಟ್ಟಿ ಹಾಗೂ ಬೆಳ್ಳಾಜಿ ಬೀಟ್ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೆಳೆದಿದ್ದ 292 ಗಾಂಜಾ ಗಿಡಗಳನ್ನು ಅಬಕಾರಿ ಹಾಗೂ ಅರಣ್ಯ ಇಲಾಖೆ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ವಶಪಡಿಸಿಕೊಂಡಿದ್ದಾರೆ.   ವಶಪಡಿಸಿಕೊಂಡ ಗಾಂಜಾ ಗಿಡಗಳ ಒಟ್ಟು ತೂಕ 213 ಕೆ.ಜಿ. 600 ಗ್ರಾಂ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅರಣ್ಯ ಪ್ರದೇಶದಲ್ಲಿ ಗಾಂಜಾ ಬೆಳೆಯುತ್ತಿರುವ ಬಗ್ಗೆ ದೊರೆತ ಮಾಹಿತಿಯ ಆಧಾರದ ಮೇಲೆ ಅಧಿಕಾರಿಗಳು ಕೂಂಬಿಂಗ್ ಕಾರ್ಯಾಚರಣೆ ನಡೆಸಿ ಗಿಡಗಳನ್ನು ಪತ್ತೆಹಚ್ಚಿದ್ದಾರೆ.   ಮೈಸೂರು ವಿಭಾಗದ ಅಬಕಾರಿ…

Read More

ಕುಡಿಯುವ ನೀರಿನ ಕಾಮಗಾರಿ ತ್ವರಿತ ಪೂರ್ಣಗೊಳಿಸಿ: ಜಿಲ್ಲಾ ಉಸ್ತುವಾರಿ ಸಚಿವ ಸಿ. ಪುಟ್ಟರಂಗಶೆಟ್ಟಿ ಸೂಚನೆ

ಚಾಮರಾಜನಗರ : ಜಿಲ್ಲೆಯಲ್ಲಿ ಕುಡಿಯುವ ನೀರಿನ ಕಾಮಗಾರಿಗಳನ್ನು ವಿಳಂಬ ಮಾಡದೆ ಆದ್ಯತೆ ಮೇರೆಗೆ ತ್ವರಿತವಾಗಿ ಪೂರ್ಣಗೊಳಿಸಬೇಕು. ವಿಶೇಷವಾಗಿ ಅರಣ್ಯ ಭಾಗಗಳಲ್ಲಿ ವಾಸಿಸುತ್ತಿರುವ ಜನರಿಗಾಗಿ ಕೈಗೆತ್ತಿಕೊಂಡಿರುವ ಕುಡಿಯುವ ನೀರಿನ ಕಾಮಗಾರಿಗಳಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಅಡ್ಡಿಪಡಿಸಬಾರದು ಎಂದು ಪಶುಸಂಗೋಪನೆ ಮತ್ತು ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಿ. ಪುಟ್ಟರಂಗಶೆಟ್ಟಿ ಸೂಚನೆ ನೀಡಿದರು. ನಗರದ ಜಿಲ್ಲಾ ಪಂಚಾಯತ್ ಕೆಡಿಪಿ ಸಭಾಂಗಣದಲ್ಲಿ ನಡೆದ ಜಿಲ್ಲಾಮಟ್ಟದ ತ್ರೈಮಾಸಿಕ ಕೆಡಿಪಿ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಕುಡಿಯುವ…

Read More

ಬರ ಅಧಿವೇಶನದಲ್ಲಿ ಹನೂರು ಶಾಸಕರ ಮೌನ ಖಂಡನೀಯ: ಬಿಜೆಪಿ ಯುವ ಮುಖಂಡ ನಿಶಾಂತ್

  ಹನೂರು : ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ತೀವ್ರ ಬರ ಪರಿಸ್ಥಿತಿ ಇದ್ದರೂ, ವಿಧಾನಸಭೆಯಲ್ಲಿ ಬರದ ಕುರಿತು ವಿಶೇಷ ಚರ್ಚೆ ನಡೆದ ಸಂದರ್ಭದಲ್ಲಿ ಕ್ಷೇತ್ರದ ಸಮಸ್ಯೆಗಳ ಬಗ್ಗೆ ಶಾಸಕರು ಧ್ವನಿ ಎತ್ತದೆ ಮೌನ ವಹಿಸಿರುವುದು ಖಂಡನೀಯ ಎಂದು ಬಿಜೆಪಿ ಯುವ ಮುಖಂಡ ನಿಶಾಂತ್ ಆರೋಪಿಸಿದರು.   ಹನೂರು ಪಟ್ಟಣದಲ್ಲಿ ಶುಕ್ರವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕ್ಷೇತ್ರದ 53 ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ತೀವ್ರವಾಗಿದ್ದು, ಜಾನುವಾರುಗಳಿಗೆ ಮೇವಿನ ಕೊರತೆಯಿಂದ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ…

Read More

ಸೆ. 30ರಂದು ಕೊಳ್ಳೇಗಾಲಕ್ಕೆ ಮುಖ್ಯಮಂತ್ರಿ ಭೇಟಿ: ಸ್ಥಳ ಪರಿಶೀಲನೆ

ಕೊಳ್ಳೇಗಾಲ: ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸೆಪ್ಟೆಂಬರ್ 30ರಂದು ಕೊಳ್ಳೇಗಾಲಕ್ಕೆ ಆಗಮಿಸಲಿರುವ ಹಿನ್ನೆಲೆಯಲ್ಲಿ ಶಾಸಕ ಎ.ಆರ್. ಕೃಷ್ಣಮೂರ್ತಿ ಅವರು ಬುಧವಾರ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.   ಜಿಲ್ಲಾಧಿಕಾರಿ ಶ್ರೀರೂಪ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ. ಮುತ್ತುರಾಜು, ಉಪವಿಭಾಗಾಧಿಕಾರಿ ದಿನೇಶ್ ಕುಮಾರ್ ಮೀನಾ, ತಹಶೀಲ್ದಾರ್ ಬಸವರಾಜು ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಕೊಳ್ಳೇಗಾಲ ಪಟ್ಟಣದ ಎಂಜಿಎಸ್‌ವಿ ಕಾಲೇಜು ಮೈದಾನಕ್ಕೆ…

Read More

ಹನೂರು ತಾಲೂಕಿನ ಪುದುರಾಮಪುರದಲ್ಲಿ ರೈತ ಸಂಘದ ಗ್ರಾಮ ಘಟಕ ಉದ್ಘಾಟನೆ

                ಹನೂರು: ತಾಲೂಕಿನ ಪುದುರಾಮಪುರ ಗ್ರಾಮದಲ್ಲಿ ಮೂಲ ಸಿದ್ಧಾಂತದ ಅಡಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಗ್ರಾಮ ಘಟಕವನ್ನು ಉದ್ಘಾಟಿಸಲಾಯಿತು.   ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮೂಲ ಸಿದ್ಧಾಂತದ ರೈತ ಸಂಘದ ಜಿಲ್ಲಾಧ್ಯಕ್ಷ ಗೌಡೇಗೌಡ, ರೈತರಿಗೆ ಸರ್ಕಾರದಿಂದ ದೊರೆಯಬೇಕಾದ ವಿವಿಧ ಸೌಲಭ್ಯಗಳ ಕುರಿತು ಮಾಹಿತಿ ನೀಡಿದರು. ರೈತರು ಸಂಘಟಿತರಾದಾಗ ಮಾತ್ರ ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಸಾಧ್ಯ. ಅರಣ್ಯ ಅಂಚಿನ ರೈತರಿಗೆ ಕಾಡುಪ್ರಾಣಿಗಳಿಂದ ಬೆಳೆ…

Read More