ಹನೂರಿನಲ್ಲಿ ಅಕ್ರಮ ಗಾಂಜಾ, ನಾಡ ಬಂದೂಕು ವಶ: ಓರ್ವನ ಬಂಧನ
ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಅತ್ತೂರು ಗ್ರಾಮದ ಮನೆಯೊಂದರ ಮೇಲೆ ದಾಳಿ ನಡೆಸಿದ ಮಲೆ ಮಹದೇಶ್ವರ ಬೆಟ್ಟದ ಪೊಲೀಸರು, ಅಕ್ರಮವಾಗಿ ಗಾಂಜಾ ಮತ್ತು ನಾಡ ಬಂದೂಕು ಶೇಖರಣೆ ಮಾಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಮತ್ತೊಂದು ಪೆಟ್ಟು ನೀಡಿದಂತಾಗಿದೆ. ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತೂರು ಗ್ರಾಮದ ವೆಂಕಟರಾಜು (47) ಎಂಬಾತನ ಮನೆಯಲ್ಲಿ ಅಕ್ರಮ ಗಾಂಜಾ ಮತ್ತು ನಾಡ ಬಂದೂಕು ಸಂಗ್ರಹಿಸಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ…

