ಸಹಕಾರ ಸಂಘಗಳಿಗೆ ಸ್ವಾಯತ್ತತೆ, ಹಾಲಿಗೆ ₹5 ಸಹಾಯಧನ: ಸಿಎಂ ಸಿದ್ದರಾಮಯ್ಯ

ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಗ್ರಾಮಕ್ಕೊಂದು ಶಾಲೆ, ಗ್ರಾಮ ಪಂಚಾಯಿತಿ ಮತ್ತು ಸಹಕಾರ ಸಂಘ ಅತ್ಯಗತ್ಯ ಎಂಬುದು ಜವಾಹರಲಾಲ್ ನೆಹರೂ ಅವರ ದೂರದೃಷ್ಟಿಯಾಗಿತ್ತು. ಅವರ ಈ ದೃಷ್ಟಿಯ ಫಲವಾಗಿಯೇ ಇಂದು ದೇಶದಲ್ಲಿ ಸಹಕಾರಿ ಚಳವಳಿಯು ಗಟ್ಟಿಯಾಗಿ ಬೆಳೆದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು. ಚಾಮರಾಜನಗರದಲ್ಲಿ ಗುರುವಾರದಂದು ನಡೆದ 72ನೇ ಅಖಿಲ ಭಾರತ ಸಹಕಾರ ಸಪ್ತಾಹದ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು. ನೆಹರೂ ಅವರ ಜನ್ಮದಿನದಂದೇ ಪ್ರತಿ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತಿರುವುದನ್ನು ಸ್ಮರಿಸಿದ…

Read More

ಚಾಮರಾಜನಗರದಲ್ಲಿ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ

ಚಾಮರಾಜನಗರದಲ್ಲಿ ಸರಣಿ ಅಪಘಾತ – ನಾಲ್ವರು ಬಾಲಕರ ದುರ್ಮರಣ ಚಾಮರಾಜನಗರ:ಜಿಲ್ಲೆಯ ಗಾಳೀಪುರ ಸಮೀಪದ ರಿಂಗ್‌ರೋಡ್‌ನಲ್ಲಿ ಶನಿವಾರ ಸಂಜೆ ಸಂಭವಿಸಿದ ಭೀಕರ ಸರಣಿ ಅಪಘಾತದಲ್ಲಿ ನಾಲ್ವರು ಬಾಲಕರು ಪ್ರಾಣ ಕಳೆದುಕೊಂಡ ದಾರುಣ ಘಟನೆ ನಡೆದಿದೆ. ಮೊಪೆಡ್‌ನಲ್ಲಿ ಪ್ರಯಾಣಿಸುತ್ತಿದ್ದ ರೆಹಾನ್, ಆದಾನ್ ಪಾಷಾ, ಫೈಜಲ್ ಮತ್ತು ಮೆರಾನ್‌ರನ್ನು ಲಾರಿ–ಕಾರು–ಮೊಪೆಡ್ ನಡುವೆ ಸಂಭವಿಸಿದ ಅಪಘಾತ ಕಸಿದುಕೊಂಡಿತು. ಮೆರಾನ್ ಸ್ಥಳದಲ್ಲೇ ಮೃತಪಟ್ಟರೆ, ಉಳಿದ ಮೂವರು ಗಂಭೀರ ಗಾಯಗೊಂಡಿದ್ದರು. ತುರ್ತುವಾಗಿ ಸಿಕ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ಮೈಸೂರಿನ ಖಾಸಗಿ ಆಸ್ಪತ್ರೆಗೆ ಕಳುಹಿಸಲಾಯಿತಾದರೂ,…

Read More

ಹನೂರಿನಲ್ಲಿ ಅಕ್ರಮ ಗಾಂಜಾ, ನಾಡ ಬಂದೂಕು ವಶ: ಓರ್ವನ ಬಂಧನ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಅತ್ತೂರು ಗ್ರಾಮದ ಮನೆಯೊಂದರ ಮೇಲೆ ದಾಳಿ ನಡೆಸಿದ ಮಲೆ ಮಹದೇಶ್ವರ ಬೆಟ್ಟದ ಪೊಲೀಸರು, ಅಕ್ರಮವಾಗಿ ಗಾಂಜಾ ಮತ್ತು ನಾಡ ಬಂದೂಕು ಶೇಖರಣೆ ಮಾಡಿದ್ದ ವ್ಯಕ್ತಿಯೊಬ್ಬನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕಾರ್ಯಾಚರಣೆಯು ಜಿಲ್ಲೆಯಲ್ಲಿ ನಡೆಯುತ್ತಿರುವ ಅಕ್ರಮ ಚಟುವಟಿಕೆಗಳಿಗೆ ಮತ್ತೊಂದು ಪೆಟ್ಟು ನೀಡಿದಂತಾಗಿದೆ. ಪೊನ್ನಾಚಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅತ್ತೂರು ಗ್ರಾಮದ ವೆಂಕಟರಾಜು (47) ಎಂಬಾತನ ಮನೆಯಲ್ಲಿ ಅಕ್ರಮ ಗಾಂಜಾ ಮತ್ತು ನಾಡ ಬಂದೂಕು ಸಂಗ್ರಹಿಸಿರುವ ಬಗ್ಗೆ ಪೊಲೀಸರಿಗೆ ಖಚಿತ ಮಾಹಿತಿ ಲಭಿಸಿತ್ತು. ಈ…

Read More