ಹನೂರು:ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ: ಅಧಿಕಾರಿ ಮುನಿರಾಜು ಮನವಿ
ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಿ: ಅಧಿಕಾರಿ ಮುನಿರಾಜು ಮನವಿ ಹನೂರು: ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಹನೂರು ತಾಲೂಕಿನಲ್ಲಿ 2026ರ ವಿಶೇಷ ಸಂಕ್ಷಿಪ್ತ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ರಮ ಆರಂಭಗೊಂಡಿದ್ದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಹನೂರು ಪಟ್ಟಣದ ಲೋಕೋಪಯೋಗಿ ಇಲಾಖೆಯ ವಸತಿಗೃಹದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಧಿಕಾರಿ ಮುನಿರಾಜು, ತಾಲೂಕಿನಲ್ಲಿ ಒಟ್ಟು 2,24,616 ಮತದಾರರಿದ್ದು, ಪರಿಷ್ಕರಣೆಯ ಪೂರ್ವ ಅರ್ಹತಾ ಅವಧಿಯನ್ನು 2026ರ ಜೂನ್…

